ಎಚ್ಐವಿ, ಏಡ್ಸ್ ಕುರಿತು ಇಂದಿನಿಂದ ಜನ ಜಾಗೃತಿ ಆಂದೋಲನ ಆರಂಭ
ಕೊಪ್ಪಳ 26: ಗ್ರಾಮೀಣ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಐವಿ ಸೋಂಕಿನ ತಡೆಗಟ್ಟುವಿಕೆ, ನಿಯಂತ್ರಣ ಹಾಗೂ ಸೋಂಕಿತರಿಗೆ ಲಭ್ಯವಿರುವ ಸೇವೆಗಳ ಕುರಿತು ಮಾಹಿತಿ ನೀಡಲು ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಆಗಸ್ಟ್ 27ಮತ್ತು 28ರಂದು ಎರಡು ದಿನಗಳ ಕಾಲ ಮನೆ ಮನೆ ಜನ ಜಾಗೃತಿ ಆಂದೋಲನ-2019 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘುನಂದನ್ ಮೂತರ್ಿ ಹೇಳಿದರು.
ಜಿಲ್ಲಾ ಪಂಚಾಯತನ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಕನರ್ಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ , ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಎಚ್ಐವಿ/ ಏಡ್ಸ್ ಕುರಿತಾದ ಮನೆ ಮನೆ ಜನ ಜಾಗೃತಿ ಆಂದೋಲನ-2019 ರ ಕುರಿತು ಇಂದು(ಆಗಸ್ಟ್ 26) ಆಯೋಜಿಸಿದ್ದ ಪತ್ರಿಕಾ ಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು.
ಜನರಲ್ಲಿ ಎಚ್ಐವಿ ಸೋಂಕಿತರ ಬಗ್ಗೆ ಇರುವ ಕಳಂಕ ಮತ್ತು ತಾರತಮ್ಯ ಮನೋಭಾವನೆಯನ್ನು ಹೋಗಲಾಡಿಸುವುದು, ಸೋಂಕಿತರಲ್ಲಿ ಸೂಕ್ತ ಚಿಕಿತ್ಸೆ, ಚಿಕಿತ್ಸಾ ಕೇಂದ್ರಗಳು, ಸೋಂಕು ನಿಯಂತ್ರಣ ಹಾಗೂ ತಡೆಗಟ್ಟುವಿಕೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ತಿಳಿಸುವುದು, ಎಚ್ಐವಿ ಸೋಂಕಿನ ತಡೆ ಮತ್ತು ನಿಯಂತ್ರಣದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವುದು ಹಾಗೂ ಹೆಚ್ಚು ಹೆಚ್ಚು ಜನರು ಐ.ಸಿ.ಟಿ.ಸಿ ಕೇಂದ್ರಗಳಿಗೆ ಭೇಟಿ ನೀಡಿ ಎಚ್ಐವಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಪ್ರೇರೇಪಿಸುವುದು, ಸೋಂಕಿತರು ಲಭ್ಯವಿರುವ ಉಚಿತ ಎಆರ್ಟಿ ಚಿಕಿತ್ಸೆ ಮತ್ತು ಸಾಮಾಜಿಕ ಸವಲತ್ತುಗಳನ್ನು ಪಡೆಯುವಂತೆ ಪ್ರೇರೇಪಿಸುವುದು, ಜನ ಸಾಮಾನ್ಯರು, ಪ್ರತ್ಯೇಕವಾಗಿ ಮಹಿಳೆಯರು ಮತ್ತು ಯುವ ಜನರಿಗೆ ಸುರಕ್ಷಿತ ಲೈಂಗಿಕ ವರ್ತನೆ ಮತ್ತು ಆರೋಗ್ಯಕರ ಜೀವನ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ಪ್ರೋತ್ಸಾಹಿಸುವುದು, ಎಲ್ಲಾ ಗಭರ್ಿಣಿಯರು ತಮ್ಮ ಮೊದಲನೇ ತ್ರೈಮಾಸಿಕದಲ್ಲಿ ಎಚ್ಐವಿ ಪರೀಕ್ಷೆ ಮಾಡಿಸಿಕೊಂಡು ಸೋಂಕು ಕಂಡು ಬಂದಲ್ಲಿ ಎಆರ್ಟಿ ಚಿಕಿತ್ಸೆಯೊಂದಿಗೆ ಸಕರ್ಾರಿ ಆಸ್ಪತ್ರೆಯಲ್ಲಿಯೇ ಹೆರಿಗೆ ಮಾಡಿಸಿಕೊಳ್ಳುವಂತೆ ಉತ್ತೇಜಿಸುವುದು ಈ ಆಂದೋಲನದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಈ ಅಭಿಯಾನವು 90:90:90 ಘೋಷಣೆಯೊಂದಿಗೆ ನಡೆಯುತ್ತಿದೆ. ಅಂದರೆ ಶೇ.90 ರಷ್ಟು ಎಚ್ಐವಿ ಸೋಂಕಿನ ಬಗ್ಗೆ ಅನುಮಾನವಿದ್ದವರು ತಮ್ಮ ಎಚ್ಐವಿ ಸ್ಥಿತಿಯನ್ನು ತಿಳಿಯುವುದು, ಶೇ. 90 ರಷ್ಟು ಎಚ್ಐವಿ ಸೋಂಕಿತರು ತಪ್ಪದೇ ಎಆರ್ಟಿ ಚಿಕಿತ್ಸೆಯನ್ನು ಪಡೆಯಬೇಕು ಮತ್ತು ಶೇ.90 ರಷ್ಟು ಎಆರ್ಟಿ ಚಿಕಿತ್ಸೆ ಪಡೆಯುತ್ತಿರುವವರು ತಮ್ಮ ವೈರಲ್ ಲೋಡ್ ಹೆಚ್ಚಾಗದಂತೆ ನಿಗಾ ವಹಿಸುವುದು. ಈ ಅಭಿಯಾನದಲ್ಲಿ ಆಶಾ ಕಾರ್ಯಕತರ್ೆಯರು ಪ್ರತಿ ಮನೆಗೂ ಭೇಟಿ ನೀಡಿ ಜಾಗೃತಿ ಮೂಡಿಸಲಿದ್ದಾರೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಭಿಯಾನ ಆರಂಭಗೊಳ್ಳುತ್ತದೆ. ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ, ತಾಲ್ಲೂಕು ಆರೋಗ್ಯಾಧಿಕಾರಿ, ತಾಲ್ಲೂಕು ಆರೋಗ್ಯ ಶಿಕ್ಷಣ ಅಧಿಕಾರಿ, ಜಿಲ್ಲಾ ಮೇಲ್ವಿಚಾರಕರು ಮತ್ತು ಆಪ್ತ ಸಮಾಲೋಚಕರು ಈ ಅಭಿಯಾನದ ಮೇಲ್ವಿಚಾರಣೆ ಮಾಡಲಿದ್ದಾರೆ. ವಿವಿಧ ಪ್ರಚಾರ ಮಾಧ್ಯಮಗಳನ್ನು ಬಳಸಿಕೊಂಡು ಈ ಕುರಿತು ಪ್ರಚಾರ ಮಾಡಲಾಗುವುದು ಎಂದು ಹೇಳಿದರು.
ಜಿಲ್ಲೆಯ 4 ತಾಲ್ಲೂಕುಗಳಲ್ಲಿ ಒಟ್ಟಾರೆ 1,91,380 ಮನೆಗಳಿಗೆ ಮಾಹಿತಿಯನ್ನು ತಲುಪಿಸುವದು ಈ ಆಂದೋಲನದ ಗುರಿಯಾಗಿದೆ. ಇಬ್ಬರು ಆಶಾ ಕಾರ್ಯಕತರ್ೆಯರನ್ನು ಒಳಗೊಂಡ 684 ತಂಡಗಳು, 1367 ಸ್ವಯಂ ಸೇವಕರು, ಒಂದು ದಿನಕ್ಕೆ 95,690 ಮನೆಗಳನ್ನು ತಲುಪುವ ಗುರಿ ಇಟ್ಟುಕೊಂಡು ಜಾಗೃತಿ ಮೂಡಿಸುವ ಕಾರ್ಯ ನಿರ್ವಹಿಸುತ್ತಾರೆ. ಜಿಲ್ಲೆಯಲ್ಲಿ ಕೊಪ್ಪಳ ಜಿಲ್ಲಾಸ್ಪತ್ರೆ ಹಾಗೂ ಗಂಗಾವತಿಯ ಉಪ ವಿಭಾಗ ಆಸ್ಪತ್ರೆಯಲ್ಲಿ ಎಆರ್ಟಿ ಕೇಂದ್ರಗಳಿದ್ದು, ಇಲ್ಲಿ ಆಪ್ತ ಸಮಾಲೋಚನೆ, ಆರೋಗ್ಯ ತಪಾಸಣೆ ಹಾಗೂ ಸಿ.ಡಿ.-4 ಕಣಗಳ ಪರೀಕ್ಷೆ, ವೈರಲ್ ಲೋಡ್ ಪರೀಕ್ಷೆ, ಎಆರ್ಟಿ ಔಷಧವನ್ನು ನೀಡಿ ಸೋಂಕಿತರ ಆರೋಗ್ಯ ಮತ್ತು ಜೀವನವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಜಿಲ್ಲೆಯ ವಿವಿಧೆಡೆ 14 ಐಸಿಟಿಸಿ ಕೆಂದ್ರಗಳಿವೆ ಇಲ್ಲಿ ಉಚಿತ ಎಚ್ಐವಿ ಪರೀಕ್ಷೆ ಮಾಡಲಾಗುತ್ತದೆ. ಒಟ್ಟು 46 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಆಯ್ದ 13 ಖಾಸಗಿ ಆಸ್ಪತ್ರೆಗಳಲ್ಲಿ (ಕೊಪ್ಪಳ-4, ಗಂಗಾವತಿ-9) ಎಚ್ಐವಿ / ಏಡ್ಸ್ ಕುರಿತು ಆಪ್ತ ಸಮಾಲೋಚನೆ, ಪರೀಕ್ಷೆ ಮಾಡಲಾಗುತ್ತದೆ. ಪ್ರಸ್ತುತ ಎಆರ್ಟಿ ಕೇಂದ್ರಗಳಿಂದ ಕ್ರೋಢೀಕರಿಸಿದ ಸಂಚಿತ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 5,859 ಜನ ಸೋಂಕಿತರು ಎಆರ್ಟಿ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಸಂಖ್ಯೆಯಲ್ಲಿ ಕೊಪ್ಪಳ ಜಿಲ್ಲೆ ರಾಜ್ಯದಲ್ಲಿ 7 ನೇ ಸ್ಥಾನದಲ್ಲಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ಸಂದರ್ಭ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಮಹೇಶ ಎಂ. ಜಿ, ಜಿಲ್ಲಾ ಆರ್. ಸಿ. ಎಚ್ ಅಧಿಕಾರಿ ಡಾ. ಲಿಂಗರಾಜ ಟಿ, ಡಾ. ಪ್ರಕಾಶ, ಡಾ. ಎಸ್. ಕೆ. ದೇಸಾಯಿ, ಡಾ. ರಾಮಾಂಜನೇಯ, ಡಾ. ಮಂಜುನಾಥ ಬಿ, ಕೆಎಸ್ಎಪಿಎಸ್ ನ ಅಧಿಕಾರಿ ನಂಜೇಗೌಡ ಸೇರಿದಂತೆ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 