ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಬಹುಮಾನ ವಿತರಿಸಿದ ಎಚ್‌ಕೆಪಿ

ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಬಹುಮಾನ ವಿತರಿಸಿದ ಎಚ್‌ಕೆಪಿ HKP distributes prizes to those who score highest in PU exams

ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಬಹುಮಾನ ವಿತರಿಸಿದ ಎಚ್‌ಕೆಪಿ 

ಗದಗ  06: ವಿದ್ಯಾರ್ಥಿಗಳೇ ನಮ್ಮ ದೇಶದ ಭವ್ಯ ಭವಿಷ್ಯವಾಗಿದ್ದಾರೆ ಓದುವ ಹಂತದಲ್ಲಿ ಉತ್ತಮವಾಗಿ ಅಧ್ಯಯನ ಮಾಡಿ ಜೀವನದಲ್ಲಿ ಯಶಸ್ಸು ನಿಮ್ಮದಾಗಿಸಿಕೊಳ್ಳಿ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್‌.ಕೆ.ಪಾಟೀಲ ಅವರು ತಿಳಿಸಿದರು. 

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇವರಿಂದ ಶನಿವಾರ ಮುರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಮಲ್ಲಸಮುದ್ರದಲ್ಲಿ ಆಯೋಜಿಸಲಾದ 2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗುದು ಬಹುಮಾನ ವಿತರಿಸಿ ಸಚಿವರು ಮಾತನಾಡಿದರು. ಭಾರತದ ಭವ್ಯ ಭವಿಷ್ಯ ನಿರ್ಮಾಣದಲ್ಲಿ ಇಂದಿನ ಯುವ ಪೀಳಿಗೆ ವಿದ್ಯಾರ್ಥಿಗಳ ಪಾತ್ರ ಅಪಾರವಿದೆ. ಸರ್ಕಾರ ಹಲವು ಸೌಲಭ್ಯ ಒದಗಿಸಿದೆ.  

ಶೇಕಡ 85ಕ್ಕಿಂತ ಅಧಿಕ ಫಲಿತಾಂಶ ಪಡೆಯುವದು ಸಣ್ಣ ಮಾತಲ್ಲ ಎಲ್ಲರೂ ಉತ್ತಮ ಸಾಧನೆಗೈದಿದ್ದೀರಿ ಇದಕ್ಕೆ ಕಾರಣರಾದ ಎಲ್ಲಾ ಬೋಧಕ ಬೋಧಕೀಯ ತರ ಸಿಬ್ಬಂದಿಗಳಿಗೂ ಅಭಿನಂದನೆಗಳು ಎಂದರು.ನಿಮ್ಮಲ್ಲಿ ಹಣ ಇಲ್ಲದಿದ್ದರೆ ನೀವು ಬಡವರಲ್ಲ ಜೀವನದಲ್ಲಿ ದೊಡ್ಡ ಗುರಿ ಹೊಂದದಿದ್ದಲ್ಲಿ ನೀವು ಖಂಡಿತ ಬಡವರಾಗುತ್ತೀರಿ. ಆದುದರಿಂದ ವಿದ್ಯಾರ್ಥಿ ದೆಸೆಯಿಂದಲೇ ದೊಡ್ಡ ಗುರಿ ಹೊಂದುವ ಮೂಲಕ ಅದರ ಸಾಕಾರಕ್ಕೆ ಅವಿರತ ಪ್ರಯತ್ನ ಪಟ್ಟಲ್ಲಿ ಖಂಡಿತ ಸಾಧನೆ ಸದಾ ನಿಮ್ಮೊಂದಿಗೆ ಇರಲಿದೆ ಎಂದು ಶುಭ ಹಾರೈಸಿದರು.ಇದೇ ಸಂದರ್ಭದಲ್ಲಿ ಉತ್ತಮ ಪಲಿತಾಂಶಕ್ಕೆ ಕಾರಣರಾದ ಬಾಲ ಸಮುದ್ರ ಪದವಿ ಪೂರ್ವ ಕಾಲೇಜಿನ ಬೋಧಕ ಸಿಬ್ಬಂದಿಗಳಿಗೆ ಸಚಿವರು ಸನ್ಮಾನಿಸಿದರು.ಈ ಸಂದರ್ಬದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ರವಿ ಗುಂಜಿಕರ, ಸಿದ್ದು ಪಾಟೀಲ ಸೇರಿದಂತೆ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು, ಅಸುಂಡಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಬೋಧಕೆತರ ಸಿಬ್ಬಂದಿ ಉಪಸ್ಥಿತರಿದ್ದರು.