ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಹೊಸ ವಾಹನಗಳ ಹಸ್ತಾಂತರ

Handover of new vehicles to Koppal District Police Department by District In-charge Minister

ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಹೊಸ ವಾಹನಗಳ ಹಸ್ತಾಂತರ  

ಕೊಪ್ಪಳ 07 : ಕೆ.ಕೆ.ಆರ್‌.ಡಿ.ಬಿ ಹಾಗೂ ಕೊಪ್ಪಳ ಶಾಸಕರ ಅನುದಾನದಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಗೆ ನೀಡಲಾದ 21 ಹೊಸ ವಾಹನಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್‌. ತಂಗಡಗಿ ಅವರು ಮಂಗಳವಾರ ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿ ಆವರಣದಲ್ಲಿ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು.  

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಗೆ 2024-25ನೇ ಆರ್ಥಿಕ ವರ್ಷದಲ್ಲಿ ಮಂಜೂರಾಗಿರುವ 200 ಲಕ್ಷ ರೂ. ಅನುದಾನದಲ್ಲಿ ಪೊಲೀಸ್ ಇಲಾಖೆಯ ದೈನಂದಿನ ಕರ್ತವ್ಯಕ್ಕಾಗಿ 16 ಬುಲೆರೋ, 2 ಸ್ಕಾರ​‍್ಿಯೋ ಮತ್ತು 1 ಇನ್ನೋವಾ ಕ್ರಿಸ್ಟಾ ವಾಹನಗಳನ್ನು ಹಾಗೂ ಕೊಪ್ಪಳ ಶಾಸಕರ ಅನುದಾನದಡಿ ಮಂಜೂರಾದ 20 ಲಕ್ಷ ರೂ. ಅನುದಾನದಲ್ಲಿ 2 ಬೋಲೆರೊ ಖರೀದಿಸಲಾಗಿದ್ದು, ಈ ವಾಹನಗಳ ಪೊಲೀಸ್ ಸೇವೆಗೆ ಸಚಿವರು, ಶಾಸಕರು ಈ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರ ಮೂಲಕ ಇಲಾಖೆಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್‌. ಅರಸಿದ್ದಿ, ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್‌.ಹೇಮಂತಕುಮಾರ, ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಕೊಪ್ಪಳ ತಹಶೀಲ್ದಾರ ವಿಠ್ಠಲ್ ಚೌಗಲಾ ಸೇರಿದಂತೆ ಪೊಲೀಸ್ ಇಲಾಖೆ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.