ತರಾತುರಿಯಲ್ಲಿ ರಾಜ್ಯೋತ್ಸವದರ ಸಮಂಜರಿ : ಕನ್ನಡಿಗರ ಆಕ್ರೋಶ
Hasty preparations for Rajyotsava: Outrage from Kannadigas
ಬೆಳಗಾವಿ 23 :ರಾಜ್ಯ ಪ್ರವಾಸೋದ್ಯಮ ಇಲಾಖೆಯು ಕಳೆದ ವರ್ಷದ ರಾಜ್ಯೋತ್ಸವ ಸಂದರ್ಭದಲ್ಲಿ ಬಿಡುಗಡೆಮಾಡಿದ 50 ಲಕ್ಷರೂ. ಅನುದಾನದಲ್ಲಿಮಂಗಳವಾರ ತರಾತುರಿಯಲ್ಲಿ ರಾಜ್ಯೋತ್ಸವದ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಿರುವ ಬೆಳಗಾವಿ ಜಿಲ್ಲಾಧಿಕಾರಿಗಳ ಸರ್ವಾಧಿಕಾರಿ ಧೋರಣೆಯ ವಿರುದ್ಧ ಬೆಳಗಾವಿ ಅನೇಕ ಕನ್ನಡ ಪರಸಂಘಟನೆಗಳು ತೀವ್ರ ಆಕ್ರೋಶ, ಅಸಮಾಧಾನ ವ್ಯಕ್ತಪಡಿಸಿವೆ.
ಸೋಮವಾರ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ಸೇರಿದ್ದ ಸಂಘಟನೆಗಳು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಿರುದ್ಧ ಘೋಷಣೆಕೂಗಿ ತಮ್ಮಆಕ್ರೋಶ ವ್ಯಕ್ತಪಡಿಸಿದವು. ಬೆಳಗಾವಿ ಜನತೆಗಾಗಲಿ, ಮಾಧ್ಯಮಕ್ಕಾಗಲಿ ರಸಮಂಜರಿ ಕಾರ್ಯಕ್ರಮದ ಬಗ್ಗೆ ಕಿಂಚಿತ್ತೂ ಮಾಹಿತಿಯಿಲ್ಲ. ಕಳೆದ ಅಕ್ಟೊಬರ್‌ನಲ್ಲಿ ಬೆಳಗಾವಿ ಕನ್ನಡ ಸಂಘಟನೆಗಳು ಬೆಂಗಳೂರಿನಲ್ಲಿ ಗಡಿ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರೊಂದಿಗೆ ಸಭೆ ನಡೆಸಿದ ಪರಿಣಾಮವಾಗಿ 50 ಲ. ರೂ. ಅನುದಾನ ಬಿಡುಗಡೆಯಾಗಿತ್ತು.
ಈ ಅನುದಾನದಲ್ಲಿ ಬೆಳಗಾವಿ ಹಬ್ಬ ಕಾರ್ಯಕ್ರಮ ನಡೆಸಿ ಸಚಿವರಾದಎಚ್. ಕೆ. ಪಾಟೀಲ, ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ಹಿರಿಯ ಸಾಹಿತಿಗಳು ಮತ್ತು ಬೆಳಗಾವಿಯಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ ನಿವೃತ್ತ ಅಧಿಕಾರಿಗಳನ್ನು ಸನ್ಮಾನಿಸಲು ಕನ್ನಡ ಸಂಘಟನೆಗಳು ತೀರ್ಮಾನಿಸಿದ್ದವು.ಆದರೆ ಜಿಲ್ಲಾಧಿಕಾರಿಗಳು ಕನ್ನಡಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ತರಾತುರಿಯಿಂದ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಿರುವದು ಖಂಡನೀಯವೆಂದು ಸಭೆಯಲ್ಲಿ ಮಾತನಾಡಿದ ಮುಖಂಡರು, ಸೋಮವಾರ ಮುಂಜಾನೆಯವರೆಗೂ ಮಾಧ್ಯಮಗಳಿಗೂ ಈ ಕಾರ್ಯಕ್ರಮದ ಬಗ್ಗೆ ಗೊತ್ತಿರಲಿಲ್ಲ ಎಂದು ಅಚ್ಚರಿ ವ್ಯಕ್ತಪಡಿಸಿದರು.
50 ಲ. ರೂ. ಆನುದಾನದದುಂದು ವೆಚ್ಚ ಮಾಡುವ ಉದ್ದೇಶದಿಂದಲೇ ಜಿಲ್ಲಾಧಿಕಾರಿಗಳು ಕನ್ನಡ ಸಂಘಟನೆಗಳನ್ನು ದೂರವಿಟ್ಟುಕಾರ್ಯಕ್ರಮ ನಡೆಸುತ್ತಿರುವದು ಸ್ಪಷ್ಟವಾಗಿದೆಎಂದುಕನ್ನಡಮುಖಂಡರು ಆರೋಪಿಸಿದರು. ಕಾರ್ಯಕ್ರಮಕ್ಕೆ ಬೆಳಗಾವಿಗೆ ಬರಲುತಮಗೆ ಸಾಧ್ಯವಾಗುವದಿಲ್ಲ ಎಂದುಗಡಿಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರುತಮಗೆ ತಿಳಿಸಿದ್ದಾಗಿ ಅಶೋಕ ಚಂದರಗಿ ಸಭೆಗೆ ತಿಳಿಸಿದರು.
ಜಿಲ್ಲಾಧಿಕಾರಿಗಳ ನಡೆಯ ವಿರುದ್ಧ ಪ್ರತಿಭಟಿಸಿ ಕಾರ್ಯಕ್ರಮವನ್ನು ಬಹಿಷ್ಕರಿಸಲು ಸಭೆಯು ನಿರ್ಧರಿಸಿತು. ಕನ್ನಡ ಹೋರಾಟಗಾರರಾದ ಮಹಾದೇವ ತಳವಾರ, ಅಶೋಕ ಚಂದರಗಿ, ನಗರ ಸೇವಕ ರಮೇಶ ಸೊಂಟಕ್ಕಿ, ಶ್ರೀನಿವಾಸ ತಾಳೂಕರ, ವಾಜೀದ ಹಿರೇಕೋಡಿ, ಬಲರಾಮ ಮಾಸೇನಟ್ಟಿ, ಮೈನೋದ್ದೀನ್ ಮಕಾನದಾರ, ದೇವೇಂದ್ರ ತಳವಾರ, ಮಹೇಶ ಶೀಗಿಹಳ್ಳಿ, ಶಿವು ದೇವುರ, ಗೌಸ್ ಸನದಿ, ಸಂತೋಷ ತಳ್ಳಿಮನಿ, ನಾಗೇಶ ಕೊಪ್ಪದ, ಬಾಳೇಶ ಗುಡಗನಟ್ಟಿ ಹಾಗೂ ಪ್ರಕಾಶ ಮೂಕನವರ ಮುಂತಾದವರು ಮಾತನಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 