ದ್ವೇಷ ಭಾಷಣ- ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಮನವಿ

ದ್ವೇಷ ಭಾಷಣ- ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಮನವಿ Hate Speech - Petition against the Hate Crimes Prevention Bill

 

ಮುದ್ದೇಬಿಹಾಳ 25: ಪ್ರಸ್ತುತ ರಾಜ್ಯ ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕವನ್ನು ವಿರೋಧಿಸಿ ತಾಲೂಕಾ ಬಿ ಜೆ ಪಿ ಮಂಡಲದಿಂದ ತಹಶಿಲ್ದಾರ ಕೀರ್ತಿ ಚಾಲಕ ಅವರ ಮೂಲಕ ರಾಜ್ಯಪಾಲರಿಗೆ ಬುಧವಾರ ಮನವಿ ಸಲ್ಲಿಸಿದರು. ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಭಾರತದ ಸಂವಿಧಾನಕ್ಕೆ ವಿರುದ್ಧವಿದ್ದು, ಇದನ್ನು ಜಾರಿಗೊಳಿಸುವುದನ್ನು ಈ ಕೂಡಲೇ ಕೈಬಿಡಬೇಕು.   

ಈ ಹಕ್ಕು ಸಂವಿದಾನದ 19 (1) ಪರಿಚ್ಛೇದ, (2) ಪರಿಚ್ಛೇದದಡಿ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಆಗಿದೆ. ಡಾ.ಬಿ.ಆರ್‌.ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರಕಾರ ಕಿತ್ತುಕೊಳ್ಳುತ್ತಿದೆ.ಇದು, ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ. ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ; ಮಾತ್ರವಲ್ಲ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನವಾಗಿದೆ.  

ಈ ಕಾನೂನು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ. ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನು ಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ಕಾಯಿದೆ ನಮಗೆ ಬೇಕೇ? ಎಂಬ ಪ್ರಶ್ನೆ ಉದ್ಭವವಾಗಿದೆ. ಪೊಲೀಸರು ಅಥವಾ ಅಧಿಕಾರಿಗಳು ಸಂಭಾವ್ಯ ಅಪರಾಧ ಎಂದು ಭಾವಿಸಿ ಮುಂಚಿತವಾಗಿ ಕ್ರಮ ಕೈಗೊಳ್ಳಬಹುದು. ಇದರಿಂದ ಪ್ರತಿಭಟನೆಗಳು ಸಭೆಗಳು ಅಥವಾ ಸಾಮಾಜಿಕ ಚಳವಳಿಗಳನ್ನು ತಡೆಯುವ ಉದ್ದೇಶ ಇದ್ದಂತಿದೆ. ಈ ವಿಧೇಯಕದಿಂದ ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಸುವವರು ಹೆಚ್ಚು ತೊಂದರೆಗೆ ಸಿಲುಕುತ್ತಾರೆ.

ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಮತ್ತು ಜನರ ಧ್ವನಿಯನ್ನು ನಾಶಪಡಿಸುವ ಇಂತಹ ಕಾಯಿದೆ ಯಾವ ಕಾರಣಕ್ಕೂ ಜಾರಿಯಾಗಬಾರದು ಎಂದು ಬಿಜೆಪಿ ಪಕ್ಷವೂ ಒತ್ತಾಯಿಸುತ್ತದೆ. ಅನ್ಯಾಯ ಅಥವಾ ಸರ್ಕಾರದ ತಪ್ಪುಗಳ ಬಗ್ಗೆ ಮಾತನಾಡಿದರೆ ಭಾವನಾತ್ಮಕ ಹಾನಿ ಎಂದು ಆರೋಪಿಸಿ ಬಂಧನ ಮಾಡಲು ಇದು ಪೊಲೀಸರಿಗೆ ಅಧಿಕಾರ ನೀಡುತ್ತದೆ. ಪತ್ರಕರ್ತರ ತನಿಖಾ ವರದಿಗಳು ಕೇಸಿನ ತೂಗುಗತ್ತಿ ಎದುರಿಸಬೇಕಾಗುತ್ತದೆ. ಸಾಮಾಜಿಕ ಮಾಧ್ಯಮದಲ್ಲಿ ಹಾಸ್ಯ ಅಥವಾ ಟೀಕೆಯನ್ನು ದ್ವೇಷ ಎಂದು ಕರೆದು ಬ್ಲಾಕ್ ಮಾಡಬಹುದು; ಕಾನೂನು ಕ್ರಮ ಕೈಗೊಳ್ಳಬಹುದು.  

ಸಾಮಾಜಿಕ ಸಾಮರಸ್ಯದ ಹೆಸರಿನಲ್ಲಿ ಅಭಿವ್ಯಕ್ತಿಯನ್ನು ನಿರ್ಬಂಧಿಸುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ. ಈ ದೇಶದ ನಾಗರಿಕರ ಸಂವಿಧಾನದ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಈ ಕಾನೂನು ನಾಗರೀಕರ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತದೆ; ಹೀಗಾಗಿ ಇದನ್ನು ಜಾರಿಯಾಗಲು ಅವಕಾಶ ನೀಡಬಾರದು.ಈ ವಿಧೇಯಕದ ಮೂಲಕ ಕಾಂಗ್ರೆಸ್ ಸರ್ಕಾರವು ಪ್ರತಿಪಕ್ಷಗಳು, ಮಾಧ್ಯಮದವರ ಮೇಲೆ ನಿಯಂತ್ರಣ ಹೇರುವುದು, ಹೆದರಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ನಮ್ಮನ್ನು, (ಬಿಜೆಪಿ), ನಮ್ಮ ಸಂಘ ಸಂಸ್ಥೆ, ಕನ್ನಡ ಸಂಘಟನೆಗಳನ್ನು ದಮನ ಮಾಡಲು ಸರಕಾರ ಹೊರಟಿದೆ ಎಂದು ಗಮನ ಸೆಳೆಯುತ್ತಿದ್ದೇವೆ. ಇದರ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಸದಿಂದ ಪ್ರಥಮ ಹಂತದ ಹೋರಾಟ ನಡೆಸಲಾಗುತ್ತಿದೆ ಈ ಕೂಡಲೇ ಅಸಂವಿದಾನ ಕಾಯ್ದೆಯನ್ನು ಈ ಕೂಡಲೇ ಕೈಬಿಡಬೇಕು ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ. 

ಈ ವೇಳೆ ತಾಲೂಕಾ ಮಂಡಲದ ಅಧ್ಯಕ್ಷ ಜಗಧೀಶ ಪಂಪಣ್ಣವರ, ಪ್ರಧಾನ ಕಾರ್ಯದರ್ಶಿಗಳಾದ ಸಂಜು ಬಾಗೇವಾಡಿ, ಗೀರೀಶಗೌಡ ಪಾಟೀಲ, ಸಿದ್ದರಾಜ ಹೊಳಿ, ಎಸ್ ಎಚ್ ಲೋಟಗೇರಿ, ಸಂಗಣ್ಣ ಹತ್ತಿ, ಮುತ್ತಣ್ಣ ಹುಗ್ಗಿ, ಶಂಕರಗೌಡ ಶಿವಣಿಗಿ, ಹುಲಗಪ್ಪ ಖಿಲಾರಟ್ಟಿ, ನಾಶಗಪ್ಪ ಹಣಮಕಟ್ಟಿ, ಪುನಿತ ಹಿಪ್ಪರಗಿ, ಅಶೊಕ ಚಿನಿವಾಲರ, ಅಶೊಕ ರಾಠೋಡ, ಭೀಮಣ್ಣ ಕೋಳೂರ, ಗುರನಾಥ ಕಡಕೋಳ, ಸಂಗಮ್ಮ ದೇವರಳ್ಳಿ, ಪ್ರೀತಿ ಕಂಬಾರ, ಕಾವೇರಿ ಕಂಬಾರ, ನೀಖಿಲ ಮಲಗಲದಿನ್ನಿ, ಸೇರಿದಂತೆ ಹಲವರು ಇದ್ದರು.