ದ್ವೇಷ ಭಾಷಣ ಕಾಯ್ದೆ : ಸಂವಿಧಾನ ಹಕ್ಕು ಕಸಿಯುವ ಪ್ರಯತ್ನ
Hate Speech Act: An attempt to take away constitutional rights
ಹೂವಿನಹಡಗಲಿ 08: ಸರ್ಕಾರವನ್ನು ಟೀಕಿಸುವ ಮತ್ತು ವೈಫಲ್ಯಗಳ ವಿರುದ್ಧ ಧ್ವನಿ ಎತ್ತುವವರ ಬಾಯಿ ಮುಚ್ಚಿಸಲು ದ್ವೇಷ ಭಾಷಣ ಕಾಯ್ದೆ ಜಾರಿಗೆ ತಂದಿದೆ. ಇದು ವಿರೋಧ ಪಕ್ಷಗಳ ಸಾಂವಿಧಾನಿಕ ಹಕ್ಕು ಕಸಿಯುವ ಪ್ರಯತ್ನ’ ಎಂದು ಶಾಸಕ ಕೃಷ್ಣನಾಯಕ ಆರೋಪಿಸಿದರು.ಪಟ್ಟಣದಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರುಬಳ್ಳಾರಿಯಲ್ಲಿ ನಡೆದ ಗಲಭೆ, ಗೂಂಡಾಗಿರಿ ಪ್ರಕರಣ ಪ್ರಜಾಪ್ರಭುತ್ವದ ಕಗ್ಗೋಲೆ ಹೀನ ಕೃತ್ಯವಾಗಿದೆ. ಮಾಜಿ ಸಚಿವ, ಹಿರಿಯ ಶಾಸಕ ಜನಾರ್ದನರೆಡ್ಡಿ ಅವರ ಮನೆಗೆ ನುಗ್ಗಿ ದಾಂಧಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸಿದರು. ’ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ವ್ಯಕ್ತಿಯ ಜೀವ ತೆಗೆದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಜತೆಗೆ ಶಾಂತಿ, ಸುವ್ಯವಸ್ಥೆ ಕಾಪಾಡಬೇಕು’ ಎಂದು ಒತ್ತಾಯಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 