ಹಾವೇರಿ ಅನುದಾನದ ನೆಪ: ವಿಕಲಚೇತನರನ್ನು ಹೊರಗಟ್ಟಲು ಮುಂದಾದ ಸಂಸ್ಥೆ. ಶಾಶ್ವತ ಪರಿಹಾರಕ್ಕಾಗಿ ಎಸ್‌ಎಫ್‌ಐ ಆಗ್ರಹ

Haveri Grant Pretense: An organization that aims to exclude the differently abled. SFI demands perm

ಹಾವೇರಿ ಅನುದಾನದ ನೆಪ: ವಿಕಲಚೇತನರನ್ನು ಹೊರಗಟ್ಟಲು ಮುಂದಾದ ಸಂಸ್ಥೆ. ಶಾಶ್ವತ ಪರಿಹಾರಕ್ಕಾಗಿ ಎಸ್‌ಎಫ್‌ಐ ಆಗ್ರಹ

ಹಾವೇರಿ 01: ನಗರದ ಬಸವೇಶ್ವರ ನಗರದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯವರ ಅನುದಾನದ ಶ್ರೀ ಕಲ್ಮೇಶ್ವರ ಗ್ರಾಮೀಣ ವಿದ್ಯಾಸಂಸ್ಥೆಯ ಶ್ರೀ ಕಲ್ಮೇಶ್ವರ ಉದ್ಯೋಗಸ್ಥ ಮಹಿಳೆಯರ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಆಶ್ರಯ ಪಡೆದಯುತ್ತಿದ ವಿಕಲಚೇತನ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರನ್ನು ಸಂಸ್ಥೆಗೆ ಅನುದಾನದ ನೆಪ ಹೇಳಿ ಏಕಾಏಕಿ ಹೊರಗಟ್ಟುವ ಕಾರ್ಯಕ್ಕೆ ಮುಂದಾಗಿದ್ದು ಸುದ್ದಿ ತಿಳಿದ ತಕ್ಷಣ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾಗೂ ಅಂಗವಿಕಲ ಒಕ್ಕೂಟದ ಸಾಮಾಜಿಕ ಕಾರ್ಯಕರ್ತೆ ಸ್ಥಳಕ್ಕೆ ದಾವಿಸಿ ಬೆನ್ನೆಲುಬಾಗಿ ನಿತ್ತು ಅನ್ಯಾಯವನ್ನು ಖಂಡಿಸಿದರು.ಹತ್ತಾರು ವರ್ಷಗಳಿಂದ ಆಶ್ರಯ ನೀಡಿ ಅನೇಕ ವಿಕಲಚೇತನ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಶಿಕ್ಷಣ, ಉದ್ಯೋಗ ಸೇರಿದಂತೆ ಸ್ವತಂತ್ರರಾಗಿ ಘನತೆ ಬದುಕು ಕಟ್ಟಿಕೊಳ್ಳಲು ಸಹಾಯಕಾರಿಯಾಗಿದ್ದ ಕಲ್ಮೇಶ್ವರ ವಿದ್ಯಾ ಸಂಸ್ಥೆಯು ಸರ್ಕಾರದ ಯಾವುದೇ ಆದೇಶಗಳಿಲ್ಲದೆ ಏಕಾಏಕಿ ವಸತಿ ನಿಲಯದಲ್ಲಿದ್ದ ಐದು ಜನ ವಿಕಲಚೇತನರನ್ನು ಹೊರದೂಡುವ ಕಾರ್ಯವನ್ನು ಎಸ್‌ಎಫ್‌ಐ ಹಾವೇರಿ ಜಿಲ್ಲಾ ಸಮಿತಿಯು ಹಾಗೂ ಅಂಗವಿಕಲರ ಒಕ್ಕೂಟವು ತೀವ್ರವಾಗಿ ಖಂಡಿಸುತ್ತದೆ.ವಿಕಲಚೇತನ ವಿದ್ಯಾರ್ಥಿನಿ ಹೇಮಾ ಪ್ರಕಾಶ ಮಾತನಾಡಿ, ಎಂಟು ವರ್ಷಗಳಿಂದ ಆಶ್ರಯ ಪಡೆದು ಪಿಯುಸಿ, ಪದವಿ ಮುಗಿಸಿ ಮಾಸ್ಟರ್ ಪದವಿ ಮುಂದುವರೆಸುತ್ತಿದ್ದೇನೆ  

ನೂರಾರು ಕನಸುಗಳನ್ನು ಕಟ್ಟಿಕೊಂಡು ನನ್ನ ಕಾಲಮೇಲೆ ನಾನೆ ನಿತ್ತು ಘನತೆ ಜೀವನವನ್ನು ರೂಪಿಸಿಕೊಳ್ಳಬೇಕೆಂಬ ಆಸೆಗೆ ಆಶ್ರಯ ಬೇಕಿದೆ. ಸರ್ಕಾರದ ಅನುದಾನ ಬರುತ್ತಿಲ್ಲ ಎಂದು ಸಂಸ್ಥೆ ಮುಖ್ಯಸ್ಥರು ನಿಮ್ಮ ಮನೆಗಳಿಗೆ ಹೋಗಿ ಎಂದಿದ್ದಾರೆ. ಮನೆಗೆ ಹೋದರೆ ಸಮಾಜದಲ್ಲಿ ಬದುಕುವುದು ಬಹಳಷ್ಟು ಕಷ್ಟವಾಗುತ್ತದೆ. ಬಸ್ ಗಳಲ್ಲಿ, ರಸ್ತೆಗಳಲ್ಲಿ ವಿಪರೀತ ಜನಸಂದಣಿಯ ಮಧ್ಯೆ ಓಡಾಡಲು ಕಷ್ಟವಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.ಅಂಗವಿಕಲ ಒಕ್ಕೂಟದ ಸಾಮಾಜಿಕ ಕಾರ್ಯಕರ್ತೆ ಹಸೀನಾ ಹೆಡಿಯಲ ಮಾತನಾಡಿ, 2012 ರಲ್ಲಿ ರಾಜ್ಯ ಸರ್ಕಾರ ಅಂಗವಿಕಲ ಮಹಿಳೆಯರಗಾಗಿ ಪುನರ್ವಸತಿ ಕೇಂದ್ರ ಜಾರಿಗೆ ತಂದಿದೆ ಆದರೆ ಅನುದಾನ ನೆಪ ಹೇಳಿ, ಕೇವಲ ಐದು ಜನ ಇದ್ದಾರೆ ಎಂದು ಆಶ್ರಯ ತಾಣವನ್ನು ಮುಚ್ಚುವುದು ಸರಿಯಲ್ಲ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಅನುದಾನ ಬಿಡುಗಡೆ ಮಾಡಬೇಕು ಜಿಲ್ಲವಾರು ಜಾಹಿರಾತು ನೀಡಿ ಅನೇಕ ವಿಕಲಚೇತನ ಮಹಿಳೆಯರಿಗೆ ನೇರವಾಗಬೇಕೆಂದರು.ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, ವಿಕಲಚೇತನ ವಿದ್ಯಾರ್ಥಿನಿಯರು, ಮಹಿಳೆಯರ ಪುನರ್ವಸತಿಗಾಗಿ ಇಡೀ ಜಿಲ್ಲೆಯಲ್ಲಿ ಏಕೈಕ ವಸತಿ ನಿಲಯವಾಗಿದ್ದ ಕಲ್ಮೇಶ್ವರ ಸಂಸ್ಥೆ ಅನುದಾನದ ನೆಪದಿಂದಾಗಿ ಆಶ್ರಯ ಪಡೆಯುತ್ತಿರುವವರನ್ನು ಹೊರದೂಡುವ ಕೆಲಸ ಖಂಡನೀಯ. ಏಕಾಏಕಿ ಮುಚ್ಚುವುದು ಸರ್ಕಾರದ ನಿಯಮಗಳ ಉಲ್ಲಂಘನೆ ಆಗಿದೆ.  

ಅನುದಾನ ನೆಪ ಬಿಡಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗು ಜಿಲ್ಲಾಡಳಿತ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಅನುದಾನಿತ ಸಂಸ್ಥೆಗಳನ್ನು ಮುಚ್ಚಿ ನೇರವಾಗಿ ಇಲಾಖೆಯೇ ನಿರ್ವಹಣೆ ಮಾಡಬೇಕು ಶಾಶ್ವತ ಪರಿಹಾರವನ್ನು ಒದಗಿಸಬೇಕು ನಿರ್ಲಕ್ಷ್ಯ ವಹಿಸಿದ್ದೆ ಆದಲಿ ಜಿಲ್ಲಾಡಳಿತ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಮಾಧ್ಯಮದವರು ವರದಿ ಮಾಡುವ ಸುದ್ದಿ ತಿಳಿದು ಸ್ಥಳಕ್ಕೆ ದಾವಿಸಿದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಶ್ರೀನಿವಾಸ ಅಲದರ್ತಿ ಅವರು ಕಲ್ಮೇಶ್ವರ ಸಂಸ್ಥೆ ಮುಖ್ಯಸ್ಥ ದಯಾನಂದ ಅವರಿಗೆ ದೂರವಾಣಿ ಸಂಪರ್ಕ ಮಾಡಿ ಯಾವುದೇ ಕಾರಣಕ್ಕೂ ವಿಕಲಚೇತನರನ್ನು ಹೊರಗಡೆ ಕಳಿಸಬೇಡಿ ಎಂದು ತರಾಟೆಗೆ ತೆಗೆದುಕೊಂಡರು. ತಾವೇ ಸ್ವತಃ ಗುಂಟ್ಟುಮುಟ್ಟೆಗಳನ್ನು ಒಳಗಡೆ ಇರಿಸಿದರು. ವಿಕಲಚೇತನರಿಗೆ ಯಾವುದೇ ತೊಂದರೆ ನೀಡಿದಂತೆ ಕ್ರಮಕೈಗೊಳಲಾಗುವುದು ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ವಿಕಲಚೇತನ ವಿದ್ಯಾರ್ಥಿನಿ ಸುಮಾ ದೊಡ್ಡಗೌಡರ, ಯಲ್ಲಮ್ಮ ವಾಲ್ಮೀಕಿ, ಲಲಿತಾ ಲಮಾಣಿ, ಗಿರಿಜಾ ಗೌಳಿ ಉಪಸ್ಥಿತರಿದ್ದರು.