ಜ.7 ರಂದು ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಟ್ಟಡ ಉದ್ಘಾಟನೆ
Haveri Institute of Medical Sciences building inaugurated on January 7th
ಹಾವೇರಿ 03 : ವೈದ್ಯಕೀಯ ವಿಜ್ಞಾನ ಸಂಸ್ಥೆ ಕಟ್ಟಡದ ಉದ್ಘಾಟನೆ ಸಮಾರಂಭ ಇದೇ ಜನವರಿ 7 ರಂದು ಜರುಗಲಿದ್ದು, ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದಲ್ಲೇ ಏಕಕಾಲಕ್ಕೆ ಮಂಜೂರಾದ ನಾಲ್ಕು ವೈದ್ಯಕೀಯ ಕಾಲೇಜುಗಳ ಪೈಕಿ ಹಾವೇರಿ ವೈದ್ಯಕೀಯ ಕಾಲೇಜು ಮಾದರಿಯಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ತಿಳಿಸಿದರು.
ಹಾವೇರಿ ವೈದಕೀಯ ಸಂಸ್ಥೆ ಸಭಾಂಗಣದಲ್ಲಿ ಶನಿವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರೂ.500 ಕೋಟಿಗೂ ಅಧಿಕ ಮೊತ್ತದ ವೆಚ್ಚದಲ್ಲಿ ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದರು.
ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯ: ಪ್ರಥಮ ವರ್ಷದ ತರಗತಿಯಿಂದ 3ನೇ ವರ್ಷದ ತರಗತಿಗಳನ್ನು ಇದೇ ಕಟ್ಟಡದಲ್ಲಿ ನಡೆಸಲಾಗುತ್ತಿದೆ. ಎಲ್ಲ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉತ್ತಮ ತರಗತಿ ಕೊಠಡಿಗಳು, ಲ್ಯಾಬ್,ವಸತಿ, ಲಾಂಡ್ರಿ, ಸಾರಿಗೆ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ: ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಮಾತನಾಡಿ, ಜ.7 ರಂದು ಹಾವೇರಿ ವೈದ್ಯಕೀಯ ಕಾಲೇಜ್ ಕಟ್ಟಡ, ಅಂಗನವಾಡಿ ನೂತನ ಕಟ್ಟಡ, ಕರ್ಜಗಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಶಾಲಾ ಕಟ್ಟಡ, ಕನವಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಠಡಿ, ಹಾವೇರಿಯ ಹೊಸ ಪ್ರವಾಸ ಮಂದಿರ, ನೆಲೋಗಲ್ ಹೊಸ ಪ್ರವಾಸ ಮಂದಿರ ಉದ್ಘಾಟನೆ ಹಾಗೂ ಹಾವೇರಿ ಬಾಲಕೀಯರ ಪ್ರಥಮ ದರ್ಜೆ ಮಹಾವಿದ್ಯಾಲಯ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆ, ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ಕಾಮಗಾರಿಗಳ ಶೀಲಾನ್ಯಾಸ ಜರುಗಲಿದೆ ಎಂದು ತಿಳಿಸಿದರು.
ಎಂ.ಐ.ಆರ್.ಯಂತ್ರ: ಒಂದು ತಿಂಗಳೊಳಗಾಗಿ ಜಿಲ್ಲೆಗೆ ಎಂ.ಐ.ಆರ್.ಯಂತ್ರ ಬರಲಿದ್ದು, ಇನ್ನುಮುಂದೆ ರೋಗಿಗಳು ಎಂ.ಐ.ಆರ್ ಸ್ಕ್ಯಾನ್‌ಗೆ ಹುಬ್ಬಳ್ಳಿ ಹಾಗೂ ದಾವಣಗೆರೆ ಹೋಗುವುದು ತಪ್ಪಲಿದೆ. ಈ ಯಂತ್ರವನ್ನು ವೈದ್ಯಕೀಯ ಕಾಲೇಜಿನಲ್ಲಿ ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿ ಅಳವಡಿಸುವ ಕುರಿತು ಚಿಂತನೆ ಮಾಡಲಾಗುತ್ತಿದೆ. ಬರುವ ದಿನಗಳಲ್ಲಿ ವೈದ್ಯಕೀಯ ಸೀಟುಗಳು, ನರ್ಸಿಂಗ್ ಸೀಟುಗಳು ಹೆಚ್ಚಾಗಲಿದ್ದು, ಇದರಿಂದ ಜಿಲ್ಲೆಯಲ್ಲಿ ವೈದ್ಯರ ಹಾಗೂ ನರ್ಸಿಂಗ್ ಸಿಬ್ಬಂದಿಗಳ ಕೊರತೆ ಆಗುವುದಿಲ್ಲ ಎಂದರು.
17 ಪಿಜಿ ಸೀಟುಗಳು: ಪ್ರಸಕ್ತ 2025-26ನೇ ಸಾಲಿಗೆ 17 ಪಿಜಿ ಸೀಟುಗಳು ಮಂಜೂರಾಗಿದ್ದು, ಸೀಟು ಹಂಚಿಕೆ ಪ್ರಗತಿಯಲ್ಲಿದೆ. ನಸಿಂಗ್ ಕಾಲೇಜನ್ನು ಈ ಸಂಸ್ಥೆಗ ಜೋಡಣೆ ಮಾಡಲಾಗಿದ್ದು, 40 ಬಿಎಸ್ಸಿ ನರ್ಸಿಂಗ್ ಹಾಗೂ 40 ಜಿ.ಎನ್.ಎಂ.ನರ್ಸಿಂಗ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪ್ಯಾರಾಮೆಡಿಕಲ್ ಮಂಡಳಿಯಡಿ 100 ಪ್ಯಾರಾಮೆಡಿಲ್ ಪ್ರವೇಶಾತಿ ಸೌಲಭ್ಯವಿದೆ . ಬರುವ ದಿನಗಳಲ್ಲಿ ಎಂ.ಬಿ.ಬಿ.ಎಸ್. ಸೀಟುಗಳನ್ನು 200ಕ್ಕೆ ನರ್ಸಿಂಗ್ ಸೀಟಗಳನ್ನು 80ಕ್ಕೆ ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 