ಆರೋಗ್ಯ ಜಾಗೃತಿಯೇ ಕುಷ್ಠರೋಗ ನಿರ್ಮೂಲನೆಗೆ ಕೀಲಿಕೈ
Health awareness is the key to eradicating leprosy
ಹುಲಕೋಟಿ 25 : ಕುಷ್ಠರೋಗ ನಿರ್ಮೂಲನೆಗೆ ಆರೋಗ್ಯ ಜಾಗೃತಿ ಅತ್ಯಂತ ಅಗತ್ಯವಾಗಿದ್ದು, ಆರಂಭಿಕ ಹಂತದಲ್ಲೇ ಸೂಕ್ತವಾದ ಪರೀಕ್ಷೆ ಮತ್ತು ಚಿಕಿತ್ಸೆ ಪಡೆಯುವುದರಿಂದ ಈ ರೋಗವನ್ನು ಸಂಪೂರ್ಣ ನಿಯಂತ್ರಿಸಬಹುದೆಂದು ಹುಲಕೋಟಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಪರೀಶೀಲನಾ ಅಧಿಕಾರಿ ಬಿ.ಎಸ್. ಹಿರೇಮಠ ಹೇಳಿದರು. ಅವರು ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಯೂತ್ ರೆಡ್ ಕ್ರಾಸ್ ಘಟಕಗಳು ಜಂಟಿಯಾಗಿ ಐಕ್ಯುಎಸಿ ಅಡಿಯಲ್ಲಿ ಹಮ್ಮಿಕೊಂಡಿದ್ದ ‘ಸ್ಪರ್ಶ್ : ಕುಷ್ಠರೋಗ ಜಾಗೃತಿ ಅಭಿಯಾನಹಿ2026’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತ ಕುಷ್ಠರೋಗದ ಸ್ವರೂಪ, ಲಕ್ಷಣಗಳು, ಕಾರಣಗಳು, ಆರಂಭಿಕ ಲಕ್ಷಣಗಳು ಮತ್ತು ಗುರುತಿಸುವ ವಿಧಾನಗಳನ್ನು ವಿವರಿಸುತ್ತ, ಈ ರೋಗದ ಬಗ್ಗೆ ಇರುವ ಅನೇಕ ತಪ್ಪು ಕಲ್ಪನೆಗಳನ್ನು ದೂರ ಮಾಡಿದರು.
ಚರ್ಮದ ಮೇಲೆ ಸಂವೇದನೆ ಕಳೆದುಕೊಂಡ ಮಚ್ಚೆಗಳು, ನರ ಸಂಬಂಧಿತ ಲಕ್ಷಣಗಳು ಮುಂತಾದ ಆರಂಭಿಕ ಸೂಚನೆಗಳನ್ನು ಹೇಗೆ ಗುರುತಿಸಬೇಕು ಎಂಬುದನ್ನು ವಿವರಿಸಿದರು. ತಡೆಗಟ್ಟುವ ಕ್ರಮಗಳು, ವೈಯಕ್ತಿಕ ಸ್ವಚ್ಛತೆ ಮತ್ತು ಸಮಯಕ್ಕೆ ಸರಿಯಾಗಿ ವೈದ್ಯಕೀಯ ಸಲಹೆ ಪಡೆಯುವ ಅಗತ್ಯತೆಯನ್ನು ಒತ್ತಿ ಹೇಳಿದರು. ಸರ್ಕಾರದ ಆರೋಗ್ಯ ಯೋಜನೆಗಳಡಿ ಲಭ್ಯವಿರುವ ಉಚಿತ ಚಿಕಿತ್ಸೆಯೆಡೆಗೆ ಗಮನ ಸೆಳೆದರು. ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕಿ ಮಹಾನಂದ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡುತ್ತ ಭಾರತ ಸರ್ಕಾರದ ವಿವಿಧ ಕುಷ್ಠರೋಗ ನಿರ್ಮೂಲನಾ ಯೋಜನೆಗಳು ಮತ್ತು ಸಾರ್ವಜನಿಕ ಆರೋಗ್ಯ ಅಭಿಯಾನಗಳ ಕುರಿತು ತಿಳಿಸಿ, ಸಮಾಜದ ಭಾಗವಹಿಸುವಿಕೆ ಮತ್ತು ಜಾಗೃತಿ ಅತ್ಯಂತ ಅಗತ್ಯವೆಂದು ಹೇಳಿದರು.
ವಿದ್ಯಾರ್ಥಿಗಳು ಸಮಾಜದಲ್ಲಿ ಜಾಗೃತಿ ರಾಯಭಾರಿಗಳಾಗಿ ಕಾರ್ಯನಿರ್ವಹಿಸುತ್ತ ಕಳಂಕ ಹಾಗೂ ಭೇದಭಾವವನ್ನು ನಿವಾರಿಸಲು ಸಹಕರಿಸಬೇಕೆಂದು ಪ್ರೇರೇಪಿಸಿದರು. ಐಕ್ಯುಎಸಿ ಸಂಯೋಜಕ ಜಿತೇಂದ್ರ ಜಾಗೀರದಾರ ವಿದ್ಯಾರ್ಥಿಗಳಲ್ಲಿ ಕುಷ್ಠರೋಗ, ಅದರ ತಡೆಗಟ್ಟುವಿಕೆ, ಚಿಕಿತ್ಸೆ ಹಾಗೂ ಈ ರೋಗಕ್ಕೆ ಸಂಬಂಧಿಸಿದ ಸಾಮಾಜಿಕ ಕಳಂಕವನ್ನು ನಿವಾರಿಸುವ ಮಹತ್ವದ ಬಗ್ಗೆ ಅರಿವು ಮೂಡಿಸಿದರು. ಎನ್.ಎಸ್.ಎಸ್. ಘಟಕದ ಸಂಯೋಜಕ ಡಾ. ಅಪ್ಪಣ್ಣ ಹಂಜೆ ಸಮಾಜದ ಸಹಕಾರ ಮತ್ತು ಮಾನವೀಯ ದೃಷ್ಟಿಕೋನದಿಂದ ಮಾತ್ರ ಕುಷ್ಠರೋಗ ಮುಕ್ತ ಸಮಾಜವನ್ನು ನಿರ್ಮಿಸಲು ಸಾಧ್ಯವೆಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲೆ ಪ್ರೊ. ಸುಧಾ ಕೌಜಗೇರಿ ಅಧ್ಯಕ್ಷೀಯ ಭಾಷಣದಲ್ಲಿ ಆಯೋಜಕರನ್ನು ಅಭಿನಂದಿಸಿ ಆರೋಗ್ಯಕರ ಜೀವನ ಶೈಲಿಯ ಮಹತ್ವವನ್ನು ವಿವರಿಸುತ್ತ ಸಮತೋಲನ ಆಹಾರ, ನಿಯಮಿತ ವ್ಯಾಯಾಮ ಮತ್ತು ಸ್ವಚ್ಛತೆ ಮೂಲಕ ರೋಗಗಳನ್ನು ತಡೆಗಟ್ಟಬಹುದು ಎಂದು ಹೇಳಿದರು. ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಲಾದ ಕಾರ್ಯಕ್ರಮವು ಜ್ಯೋತಿ ಅವರ ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾಯಿತು. ರೋವರ್ ಸಂಯೋಜಕರಾದ ಬುಳ್ಳಪ್ಪ ಅವರು ವೇದಿಕೆಯ ಮೇಲಿನ ಗಣ್ಯಮಾನ್ಯರನ್ನು ಸ್ವಾಗತಿಸಿದರು. ರೇಂಜರ್ಸ್ ಸಂಯೋಜಕಿ ಸಾವಿತ್ರಿ ಟಿ. ಅವರು ಕಾರ್ಯಕ್ರಮ ನಡೆಸಿಕೊಟ್ಟರು. ಕಾಲೇಜಿನ ಬೋಧಕರು, ಬೋಧಕೇತರ ಸಿಬ್ಬಂದಿಗಳು, ಸ್ಕೌಟ್ಸ್ ಮತ್ತು ಗೈಡ್ಸ್, ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಘಟಕಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 