ಆರೋಗ್ಯದ ರಕ್ಷಣೆ ದೇಶದ ರಕ್ಷಣೆ: ಶಾಸಕ ಓಲೇಕಾರ
ಹಾವೇರಿ21: ಆರೋಗ್ಯದ ರಕ್ಷಣೆ ದೇಶದ ರಕ್ಷಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಮಿತ ಆಹಾರ ಸೇವಿಸಬೇಕು ಹಾಗೂ ಉಪ್ಪು, ಸಕ್ಕರೆ ಹಾಗೂ ಎಣ್ಣೆಯನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ನೆಹರು ಓಲೇಕಾರ ಅವರು ಹೇಳಿದರು.
ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ.ಎನ್.ಡಿ.ಓ ತಾಲೂಕಾ ಆರೋಗ್ಯಾಧಿಕಾರಿ ಕಚೇರಿ ಸಂಯುಕ್ತ ಆಶ್ರಯದಲ್ಲಿ ಆಹಾರ ಸುರಕ್ಷತೆ ಹಾಗೂ ಆಹಾರ ಗುಣಮಟ್ಟ ಕುರಿತಂತೆ ಜಾಗೃತಿ ಮೂಡಿಸಲು ನಗರದ ಹುಕ್ಕೇರಿಮಠದ ಆವರಣದಲ್ಲಿ ಆಯೋಜಿಸಲಾದ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಸ್ಯಾಹಾರ ಸೇವನೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ. ಸೊಪ್ಪು, ಹಾಲಿನ ಉತ್ಪನ್ನಗಳು, ಹಣ್ಣುಗಳನ್ನು ದ್ವಿದ್ವಳ ಧಾನ್ಯಗಳು, ಸಿರಿಧಾನ್ಯಗಳನ್ನು ನಿತ್ಯದ ಆಹಾರದಲ್ಲಿ ಬಳಸುವ ಮೂಲಕ ರಕ್ತದೊತ್ತಡ, ಮಧುಮೇಹದಂತಹ ರೋಗಗಳಿಂದ ದೂರವಿರಬಹುದು ಎಂದು ಹೇಳಿದರು.
ಉಚಿತ ತಪಾಸಣೆ: ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಾರ್ವಜನಿಕರ ಹಾಗೂ ಜಾತಾದಲ್ಲಿ ಭಾಗವಹಿಸಿದ ಎಲ್ಲರ ಮಧುಮೇಹ ಹಾಗೂ ಬಿಪಿ ತಪಾಸಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕಾರ ಕುಂದೂರ, ಕೇಂದ್ರ ಸಕರ್ಾರದ ಜಾತಾ ಸಂಚಾಲಕ ಅಶೋಕ ಕುಮಾರ ಮಿಶ್ರಾ, ರಾಜ್ಯ ಸಂಚಾಲಕ ಕೆ.ವಿ.ಶ್ರೀನಿಧಿ, ಅಂಕಿತ ಅಧಿಕಾರಿ ಡಾ.ಜಗದೀಶ ಪಾಟೀಲ, ಆಹಾರ ಸುರಕ್ಷತಾ ಅಧಿಕಾರಿಗಳಾದ ಗಂಗಣ್ಣ ರಾಠೋಡ, ಕುಂದಗೋಳ, ಕೋರಿ, ಭಾರತೀಯ ವೈದ್ಯಕೀಯ ಸಂಸ್ಥೆಯ ಹಾವೇರಿ ಶಾಖೆಯ ಕಾರ್ಯದಶರ್ಿ ಡಾ.ಬಸವರಾಜ ಕೊಳ್ಳಿ, ಡಾ.ವಿಜಯಕುಮಾರ ಬಳಿಗಾರ, ಆರೋಗ್ಯ ಇಲಾಖೆಯ ಶಂಕರ ಸುತಾರ, ಎನ್.ಸಿ.ಸಿ. ವಿದ್ಯಾಥರ್ಿಗಳು, ಆಶಾಕಾರ್ಯಕತರ್ೆಯರು ಹಾಗೂ ಆಹಾರ ಸುಕ್ಷರತೆ ಮತ್ತು ಗುಣಮಟ್ಟ ಕಾಯ್ದೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 