ಗದಗ 03 : ಆರೋಗ್ಯವಂತ ಹಾಗೂ ಜ್ಞಾನ ಹೊಂದಿದ ಮಕ್ಕಳಿದ್ದಲ್ಲಿ ರಾಷ್ಟ್ರವು ಸರ್ವತೋಮುಖ ಅಭಿವೃದ್ಧಿ ಹೊಂದುತ್ತದೆ. ಈ ನಿಟ್ಟಿನಲ್ಲಿ ಬಾಲ್ಯವಿವಾಹ ಮತ್ತು ಬಾಲ ಕಾರ್ಮಿಕ್ ಸಾಮಾಜಕ ಅನಿಷ್ಟಗಳನ್ನು ತಡೆಗಟ್ಟುವಲ್ಲಿ ವಿವಿಧ ಸರ್ಕಾರಿ ಇಲಾಖೆಗಳು, ಸಂಘ ಸಂಸ್ಥೆಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ ನುಡಿದರು.
ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಹಾಗೂ ಸ್ಥಳೀಯ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿಂದು ಜರುಗಿದ ಬಾಲ್ಯ ವಿವಾಹ ನಿಷೇಧ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಮಾಲೋಚನಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಬಾಲ್ಯ ವಿವಾಹದಿಂದ ಮಗುವಿಗೆ ದೈಹಿಕ ಮತ್ತು ಮಾನಸಿಕ ದುಷ್ಪರಿಣಾಮಗಳಾಗುತ್ತವೆಯಲ್ಲದೇ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪಟ್ಟಿ ಮಾಡಿ ಮರಳಿ ಶಾಲೆಗೆ ದಾಖಲು ಮಾಡುವ ಕಾರ್ಯವು ಯಶಸ್ವಿಯಾದರೆ ಬಾಲ್ಯ ವಿವಾಹ ಮತ್ತು ಬಾಲ ಕಾಮರ್ಿಕತೆ ಸಮಸ್ಯೆಯನ್ನು ತಡೆಗಟ್ಟಬಹುದು. ಇದಕ್ಕಾಗಿ ಸಕರ್ಾರಿ ಅಧಿಕಾರಿಗಳು, ಶಿಕ್ಷಕರು, ಪಿಡಿಓಗಳು, ಎನ್.ಜಿ.ಓಗಳು ಹಾಗೂ ಸಾರ್ವಜನಿಕರೂ ಶ್ರಮಿಸಬೇಕು ಎಂದು ಎಸ್.ಜಿ. ಸಲಗರೆ ತಿಳಿಸಿದರು.
ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ ಅವರು ಮಾತನಾಡಿ ಬಾಲ್ಯ ವಿವಾಹ ನಿಷೇಧ ಹಾಗೂ ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವಲ್ಲಿ ಜನರು ಹೆಚ್ಚಿನ ಕಾಳಜಿ ಹೊಂದಬೇಕು. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮವಾಗಬೇಕು ಎಂದರು. ಗ್ರಾಮಗಳಲ್ಲಿ ಯುವಕ ಮತ್ತು ಯುವತಿಯನ್ನು ನೇಮಿಸಿ ಬಾಲ್ಯ ವಿವಾಹ ಹಾಗೂ ಬಾಲ ಕಾಮರ್ಿಕತೆ ನಡೆಯುವ ಕುರಿತು ಇಲಾಖೆಗೆ ಮಾಹಿತಿ ನೀಡುವಂತೆ ಪ್ರೇರೇಸಬೇಕು. ಅವರ ಹೆಸರನ್ನು ಗೌಪ್ಯವಾಗಿಟ್ಟು ಅವರಿಗೆ ಪ್ರೋತ್ಸಾಹ ಧನ ನೀಡಬೇಕು. ಬಾಲ್ಯ ವಿವಾಹ ನಿಷೇಧಕ್ಕೆ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜೊತೆಗೆ ಎಲ್ಲ ಇಲಾಖೆಯ ಅಧಿಕಾರಿಗಳು, ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸಲಹೆ ಮಾಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಭಾರತಿ ಶೆಟ್ಟರ್ ಅವರು ಮಾತನಾಡಿ ವಿದ್ಯಾವಂತರ ಕುಟುಂಬದಲ್ಲಿಯೂ ಸಹ ಬಾಲ್ಯ ವಿವಾಹಗಳು ಆಗುತ್ತಿರುವುದು ವಿಷಾದದ ಸಂಗತಿ. ಬಾಲ್ಯ ವಿವಾಹಕ್ಕೆ ಬಡತನವೇ ಕಾರಣವಲ್ಲ. ಪಾಲಕರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಅನೇಕ ಬಾಲ್ಯ ವಿವಾಹಗಳು ನಡೆಯುತ್ತಿವೆ. ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಮಕ್ಕಳ ರಕ್ಷಣಾ ಘಟಕದ ಜೊತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ ಇಲಾಖೆ ಸೇರಿದಂತೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಭಾರತಿ ಶೆಟ್ಟರ್ ತಿಳಿಸಿದರು. ಸ್ಪೂತರ್ಿ ಸಂಸ್ಥೆಯ ನಿದರ್ೇಶಕ ರೂಪನಾಯಕ್ ಮಾತನಾಡಿ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಹಲವಾರು ರಂಗಗಳಲ್ಲಿ ಮಕ್ಕಳಿಗೆ ರಕ್ಷಣೆ ನೀಡಬೇಕಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಪಿಡಿಓಗಳು ಕಾರ್ಯನಿರತರಾಗಬೇಕು. ಮಕ್ಕಳು ಶಾಲೆಯಿಂದ ಹೊರಗೆ ಉಳಿಯದಂತೆ ಶಿಕ್ಷಣ ಇಲಾಖೆ ಪ್ರಯತ್ನಿಸಬೇಕು ಎಂದರು.
ಕಾರ್ಯಾಗಾರದಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಕೆ.ಆರ್. ನಾಯ್ಕರ್ , ಮಕ್ಕಳ ಕಲ್ಯಾಣ ಸಮಿತಿ ಸದಸ್ಯರುಗಳಾದ ಅನ್ನಪೂರ್ಣ ಗಾಣಿಗೇರ, ಮಂಜುನಾಥ ಬಮ್ಮನಕಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದರ್ೇಶಕ ರಾಮಕೃಷ್ಣ ಪಡಗಣ್ಣವರ, ಮಹಿಳಾ ಮಕ್ಕಳ ನಿರೂಪಣಾಧಿಕಾರಿ ಅಕ್ಕಮಹಾದೇವಿ, ದಿ. ಹಂಗರ್ ಪ್ರೊಜೆಕ್ಟ್ ದ ರಾಜ್ಯ ಸಂಯೋಜಕ ಸೋಮಶೇಖರ್, ಸಂಪನ್ಮೂಲ ವ್ಯಕ್ತಿ ಯುನಿಸೆಫ್ ದ ರಾಘವೇಂದ್ರ , ಎಲ್.ಪಿ.ಓ ಪಿ.ಎಮ್. ವಾಲಿ, ಕಾಮರ್ಿಕ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಯವರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಕವಲೂರು ಪ್ರಾಥರ್ಿಸಿದರು. ಲಕ್ಷ್ಮಣ ಪೂಜಾರ ಸ್ವಾಗತಿಸಿದರು. ಮಲ್ಲಪ್ಪ ಹೊಸಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.