ನವದೆಹಲಿ, ಏ 17 ಅಕಾಲಿಕ ಮಳೆ ಮತ್ತು ಬಿರುಗಾಳಿಯಿಂದ ಮಧ್ಯಪ್ರದೇಶ, ರಾಜಸ್ತಾನ, ಮಣಿಪುರ ಮತ್ತು ದೇಶದ ಇತರ ಭಾಗಗಳಲ್ಲಿ ಪ್ರಾಣ ಕಳೆದುಕೊಂಡ ವ್ಯಕ್ತಿಗಳ ಕುಟುಂಬಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಂತ್ರಸ್ತ ಕುಟುಂಬಕ್ಕೆ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ದೇಶದ ಹಲವು ಭಾಗಗಳಲ್ಲಿ ಅಕಾಲಿಕ ಮಳೆ ಮತ್ತು ಬಿರುಗಾಳಿಗೆ ತೊಂದರೆಗೊಳಗಾದ ಜನರೊಂದಿಗೆ ನಾವು ಐಕ್ಯತೆ ಪ್ರದಶರ್ಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಸರಣಿ ಟ್ವೀಟ್ ಮಾಡಿದ್ದಾರೆ. ಹಾನಿಗೊಳಗಾದವರಿಗೆ ಸಕರ್ಾರ ಎಲ್ಲಾ ಅಗತ್ಯ ನೆರವು ಒದಗಿಸಲಿದೆ ಮತ್ತು ಪರಿಸ್ಥಿತಿಯ ಮೇಲೆ ನಿಕಟ ನಿಗಾ ಇಡಲಾಗಿದೆ ಎಂದು ಮೋದಿ ಹೇಳಿದ್ದಾರೆ. ಮಧ್ಯಪ್ರದೇಶ, ರಾಜಸ್ತಾನ, ಮಣಿಪುರ ಮತ್ತು ದೇಶದ ಇತರ ಕಡೆಗಳಲ್ಲಿ ಅಕಾಲಿಕ ಮಳೆ ಮತ್ತು ಬಿರುಗಾಳಿಯಿಂದ ತಮ್ಮ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ಒದಗಿಸಲು ಅನುಮೋದನೆ ನೀಡಲಾಗಿದೆ ಎಂದು ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50,000 ರೂ. ಬಿಡುಗಡೆಗೂ ಪ್ರಧಾನಿ ಅನುಮತಿ ನೀಡಿದ್ದಾರೆ. ಮಳೆ, ಬಿರುಗಾಳಿಯಿಂದ ಸಂತ್ರಸ್ತರಾದವರಿಗೆ ಸಕರ್ಾರದಿಂದ ಎಲ್ಲಾ ರೀತಿಯ ಸಹಾಯ ಒದಗಿಸಿಕೊಡಲು ಪ್ರಯತ್ನಿಸಲಾಗುವುದು. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ. ಗುಜರಾತ್, ರಾಜಸ್ತಾನ, ಮಧ್ಯಪ್ರದೇಶ, ಮಣಿಪುರ ಮತ್ತು ದೇಶದ ಇತರ ಭಾಗಗಳಲ್ಲಿ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಗೆ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ.