ಮನೆಯ ಸುತ್ತಮುತ್ತ ನೈರ್ಮಲ್ಯ ಕಾಪಾಡುವಲ್ಲಿ ಗ್ರಾಮಸ್ಥರು ಪ್ರಮುಖ ಪಾತ್ರವಹಿಸುವ ಮೂಲಕ ಸ್ವಚ್ಛ ಗ್ರಾಮವನ್ನಾಗಿಸಲು ಸಹಕರಿಸಿ: ಮಾಲತೇಶ ಕಂಬಳಿ
ಬ್ಯಾಡಗಿ 8 : ಪರಿಸರ ಸ್ವಚ್ಛತೆ ಜಾಗೃತಿ ಮೂಡಿಸಿ ಮನೆಯ ಸುತ್ತಮುತ್ತ ನೈರ್ಮಲ್ಯ ಕಾಪಾಡುವಲ್ಲಿ ಗ್ರಾಮಸ್ಥರು ಪ್ರಮುಖ ಪಾತ್ರವಹಿಸುವ ಮೂಲಕ ಸ್ವಚ್ಛ ಗ್ರಾಮವನ್ನಾಗಿಸಲು ಸಹಕರಿಸಿ ಎಂದು ಆರೋಗ್ಯ ನೀರಿಕ್ಷಕ ಮಾಲತೇಶ ಕಂಬಳಿ ಹೇಳಿದರು. ಅವರು ತಾಲೂಕಿನ ಖುರ್ಧವಿರಾಪುರ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕಾ ಆರೋಗ್ಯ ಇಲಾಖೆ ಅವರ ಸಂಯುಕ್ತಾಶ್ರಯದಲ್ಲಿ ನಡೆದ ಜಾನಪದ ಕಲಾ ತಂಡದಿಂದ ಜನತೆಗೆ ಜಾಗೃತಿ ಮೂಡಿಸುವ ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಜ್ಯ ಹಾಗೂ ಕೇಂದ್ರ ಸರಕಾರಗಳು ಆರೋಗ್ಯ ಸುಧಾರಣೆಗಾಗಿ ಸಾಕಷ್ಟು ಹಣ ಖರ್ಚು ಮಾಡುತ್ತಿವೆ. ಸಾರ್ವಜನಿಕರ ಸಹಕಾರ ಇದ್ದಾಗ ಮಾತ್ರ ಈ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ.ವಿದ್ಯಾರ್ಥಿ ದಿಸೆಯಲ್ಲಿಯೆ ಮಕ್ಕಳು ಸ್ವಚ್ಛತೆ ಮತ್ತು ಶಿಸ್ತು ಪಾಲನೆ ಮಾಡುವುದನ್ನು ರೂಢಿಸಿಕೊಳ್ಳಬೇಕು. ಯಾರು ಯಾವುದೇ ಕಸವನ್ನು ರಸ್ತೆ, ಚಂರಡಿ, ಖಾಲಿ ನಿವೇಶನ, ಸಾರ್ವಜನಿಕ ಸ್ಥಳಗಳಲ್ಲಿ ಹಾಕದಂತೆ ನೋಡಿಕೊಳ್ಳಬೇಕು ಎಂದರು. ಪ್ರಕೃತಿ ಮನುಷ್ಯನ ಜೀವನಕ್ಕೆ ಏನ್ನೆಲ್ಲ ಕೊಟ್ಟಿಲ್ಲ. ಅಂತಹದರಲ್ಲಿ ಮನುಷ್ಯ ತನ್ನ ವೈಯಕ್ತಿಕ ಪ್ರಯೋಜನಕ್ಕಾಗಿ ಪರಿಸರದ ಮೇಲೆ ನಿರಂತರ ದಾಳಿ ನಡೆಸಿದ್ದಾನೆ. ಇಂತ ಪರಿಸ್ಥಿತಿ ಹೀಗೆ ಮುಂದುವರೆದರೆ ನಮ್ಮ ಸರ್ವನಾಶ ನಮ್ಮ ಕಣ್ಣೇದುರೆ ನಡೆಯಲಿದೆ ಎಂದರು.ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಸಾವಿತ್ರಾ ಗುರೇಮಟ್ಟಿ, ಗ್ರಾ.ಪಂ.ಸದಸ್ಯ ಶಶೆಪ್ಪ ದ್ಯಾವಣ್ಣನವರ, ಸಿದ್ದಲಿಂಗಪ್ಪ ಗುರೇಮಟ್ಟಿ ಹಾಗೂ ಇತರರಿದ್ದರು.