ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಸಹಾಯವಾಣಿ: ಜಿಲ್ಲಾಧಿಕಾರಿ
ಕಾರವಾರ 14 :- ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರದಿಂದಾಗಿ, ಜಿಲ್ಲೆಯ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಅವಶ್ಯಕತೆಯಿದ್ದು, ಈ ಅರ್ಜಿಗಳನ್ನು ಕಂದಾಯ ನೀರೀಕ್ಷಕರ ಲಾಗಿನ್‌ಗೆ ವರ್ಗಾಯಿಸಲಾಗಿದೆ.
ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಮಾಹಿತಿಯನ್ನು ದೂರವಾಣಿ ಸಂಖ್ಯೆ : 08382-229857 ಹಾಗೂ ವಾಟ್ಸ್‌ಆಪ್ ಸಂಖ್ಯೆ : 9483511015 ಗೆ ಕಚೇರಿ ವೇಳೆಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5.30 ರ ವರೆಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮ ಒನ್ ಕೇಂದ್ರಗಳಲ್ಲಿ ಅಂಚೆ ಇಲಾಖೆಯ ಸೇವೆಗಳನ್ನು ಒದಗಿಸಿ : ಅಪರ ಜಿಲ್ಲಾಧಿಕಾರಿ.
ಕಾರವಾರ 14 :- ಜಿಲ್ಲೆಯ ಗ್ರಾಮ ಒನ್ ಕೇಂದ್ರಗಳಲ್ಲಿ ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನ ಎಲ್ಲಾ ಸೇವೆಗಳನ್ನು ಮತ್ತು ವಿಮಾ ಯೋಜನೆಗಳನ್ನು ಸಾರ್ವಜನಿಕರಿಗೆ ಗರಿಷ್ಠ ಸಂಖ್ಯೆಯಲ್ಲಿ ಒದಗಿಸುವಂತೆ ಜಿಲ್ಲೆಯ ಎಲ್ಲಾ ಗ್ರಾಮ ಒನ್ ಕೇಂದ್ರಗಳ ಮುಖ್ಯಸ್ಥರಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಗ್ರಾಮ ಒನ್ ಕೇಂದ್ರಗಳಿಗೆ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಬ್ರಾಂಡಿಂಗ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಂಚೆ ಇಲಾಖೆಯು ಈ ಹಿಂದಿನಂತೆ ಅಂಚೆ ಪತ್ರಗಳ ವಿತರಣೆಗೆ ಮಾತ್ರ ಸೀಮಿತವಾಗಿರದೇ, ಬದಲಾಗುತ್ತಿರುವ ತಂತ್ರಜ್ಞಾನ ಮತ್ತು ಆವಿಷ್ಕಾರಗಳನ್ನು ಸಂಪೂರ್ಣವಾಗಿ ಅಳವಡಿಸಿಕೊಂಡು ಸಾರ್ವಜನಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಸೇವೆಗಳನ್ನು ತ್ವರಿತಗತಿಯಲ್ಲಿ ಒದಗಿಸುತ್ತಿದೆ. ರಿಸರ್ವ್ ಬ್ಯಾಂಕ್ ಮೂಲಕ ಸಾರ್ವನಿಕರಿಗೆ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಲು ಅನುಮತಿ ಪಡೆದಿದ್ದು, ಗ್ರಾಹಕರಿಗೆ ಅತ್ಯಂತ ವಿಶ್ವಾಸಾರ್ಹ ಸೇವೆಗಳನ್ನು ನೀಡುತ್ತಿದೆ, ಗ್ರಾಮ ಒನ್ ಮೂಲಕ ಈ ಸೇವೆಗಳನ್ನು ಇನ್ನಷ್ಟು ವಿಸ್ತರಿಸಲು ಈಗಾಗಲೇ ಒಪ್ಪಂದ ಮಾಡಿಕೊಂಡಿದೆ ಎಂದರು.
ರಾಜ್ಯ ಸರ್ಕಾರದ ವಿವಿಧ ಸೇವೆಗಳನ್ನು ಗ್ರಾಮೀಣ ಮಟ್ಟದಲ್ಲಿ ಒದಗಿಸುತ್ತಿರುವ ಗ್ರಾಮ ಒನ್ ಕೇಂದ್ರಗಳಿಗೆ ಗ್ರಾಮೀಣ ವ್ಯಾಪ್ತಿಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತಿದ್ದು, ಅವರಿಗೆ ಅಂಚೆ ಇಲಾಖೆಯ ಬ್ಯಾಂಕ್ ಖಾತೆಗೆ ನೋಂದಣಿ, ಅತ್ಯಂತ ಕಡಿಮೆ ವೆಚ್ಚದ ಉತ್ತಮ ವಿಮಾ ಸೇವೆಗಳು, ಅಂಚೆ ಬ್ಯಾಂಕಿಂಗ್ ಸೇವೆಗಳು, ಸಾಲ ವಿತರಣೆ ಮುಂತಾದ ಯೋಜನೆಗಳ ಸೌಲಭ್ಯಗಳ ಕುರಿತು ಮಾಹಿತಿ ನೀಡುವಂತೆ ಮತ್ತು ಈ ಯೋಜನೆಗಳಿಗೆ ನೋಂದಣಿ ಮಾಡುವಂತೆ ತಿಳಿಸಿದ ಅಪರ ಜಿಲ್ಲಾಧಿಕಾರಿಗಳು, ಸರ್ಕಾರದ ವಿವಿಧ ಯೋಜನೆಗಳ ಮೊತ್ತವನ್ನು ಫಲಾನುಭವಿಗಳಿಗೆ ಡಿಬಿಟಿ ಮೂಲಕ ಪಾವತಿ ಮಾಡಲಾಗುತ್ತಿದ್ದು, ಫಲಾನುಭವಿಗಳು ಪೋಸ್ಟ್ ಬ್ಯಾಂಕ್ ಖಾತೆಗಳನ್ನು ಶೂನ್ಯ ಆರಂಭಿಕ ಠೇವಣಿಯೊಂದಿಗೆ ಕೇವಲ 5 ನಿಮಿಷಗಳ ಒಳಗೆ ತಮ್ಮ ಡಿಬಿಟಿ ಖಾತೆಗಳನ್ನು ತೆರೆಯಬಹುದಾಗಿದೆ ಎಂದರು.
ಜಿಲ್ಲೆಯ ಗ್ರಾಮ ಒನ್ ಕೇಂದ್ರಗಳಲ್ಲಿ ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನ ಎಲ್ಲಾ ಸೇವೆಗಳನ್ನು ಒದಗಿಸುತ್ತಿರುವ ಕುರಿತಂತೆ ಪ್ರತೀ ತಿಂಗಳು ಪರೀಶೀಲನೆ ನಡೆಸಲಾಗುವುದು ಎಂದ ಅಪರ ಜಿಲ್ಲಾಧಿಕಾರಿಗಳು ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಈ ಸೇವೆಗಳು ದೊರೆಯುವಂತೆ ಕಾರ್ಯನಿರ್ವಹಿಸಬೇಕು ಎಂದು ಗ್ರಾಮ ಒನ್ ಕೇಂದ್ರಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನ ಪ್ರಾದೇಶಿಕ ಮುಖ್ಯಸ್ಥ ಜಗದೀಶ್ ಚಿಕ್ಕನರಗುಂದ ಮಾತನಾಡಿ, ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಬ್ಯಾಂಕ್ ಆಗಿ ಗುರುತಿಸಿಕೊಂಡಿದ್ದು, ದೇಶದ ಪ್ರತೀ ಕುಗ್ರಾಮದಲ್ಲೂ ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೇವೆ ಒದಗಿಸುವ ಉದ್ದೇಶ ಹೊಂದಿದ್ದು, ಈ ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯ ಕೂಡಾ ಪಡೆಯಬಹುದಾಗಿದೆ ಎಂದರು.
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನ ವಲಯ ಅಧಿಕಾರಿ ಶಿಲ್ಪಾ ಮಾತನಾಡಿ, ಸಾರ್ವಜನಿಕರಿಗೆ ಪೋಸ್ಟ್ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ಗ್ರಾಮ ಒನ್ ಕೇಂದ್ರಗಳಿಗೆ ಎಲ್ಲಾ ರೀತಿಯ ಪ್ರೋತ್ಸಾಹ ಮತ್ತು ತರಬೇತಿಯನ್ನು ನೀಡಲಾಗುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ತರಬೇತಿ ನೀಡಲಾಗುವುದು ಎಂದರು.
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಉತ್ತರ ಕನ್ನಡ ಜಿಲ್ಲೆಯ ಹಿರಿಯ ಮೇನೇಜರ್ ಜೋಸ್ ಕುಮಾರ್ ಮಾತನಾಡಿ, ದೇಶದಲ್ಲಿ ಕೇವಲ 7 ವರ್ಷದಲ್ಲಿ 9.5 ಕೋಟಿಗೂ ಅಧಿಕ ಮಂದಿ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನಲ್ಲಿ ಖಾತೆ ತೆರೆದಿದ್ದು, ಈ ಖಾತೆಗಳಿಗೆ ಸರ್ಕಾರದ ವಿವಿಧ ಯೋಜನೆಗಳ 36 ಸಾವಿರ ಕೋಟಿ ರೂ ಗಳಿಗೆ ಆಧಿಕ ಮೊತ್ತವನ್ನು ಡಿಬಿಟಿ ಮೂಲಕ ಪಾವತಿಸಲಾಗಿದೆ. ಅತ್ಯಂತ ಕಡಿಮೆ ವೆಚ್ಚದ ವಿಮಾ ಯೋಜನೆಗಳ ಮೂಲಕ ಹಲವು ಮಂದಿಗೆ ತ್ವರಿತಗತಿಯಲ್ಲಿ ನೆರವು ಒದಗಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಮತ್ತು ಗ್ರಾಮ ಒನ್ ಕೇಂದ್ರದ ಬ್ರಾಂಡಿಂಗ್ ಬಿಡುಗಡೆ ಮತ್ತು ನೋಂದಣಿ ಪತ್ರ ಹಾಗೂ ಗುರುತಿನ ಚೀಟಿ ಹಂಚಿಕೆ ಮಾಡಲಾಯಿತು. ಗ್ರಾಮ ಒನ್ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಅತೀ ಹೆಚ್ಚು ಸರಕಾರಿ ಸೇವೆಗಳನ್ನು ಒದಗಿಸಿದ ಕೇಂದ್ರಗಳನ್ನು ಅಭಿನಂದಿಸಲಾಯಿತು.
ಜಿಲ್ಲೆಯ ಎಲ್ಲಾ ಗ್ರಾಮ ಒನ್ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ
ಕಾರವಾರ 14 :- ಜಿಲ್ಲೆಯಲ್ಲಿ ಫೆ.15 ರಂದು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ ಮೆರಿಟ್ ಆಧಾರದ ಮೇಲೆ ಪ್ರವೇಶಾತಿಯನ್ನು ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪ್ರವೇಶ ಪರೀಕ್ಷೆಗಳು ನಡೆಯಲಿದೆ.
ಸದರಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿರುವುದರಿಂದ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ, ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಶಾಂತತಾ ಭಂಗ ಆಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ಸಮಯದಿಂದ ಪರೀಕ್ಷಾ ಅವಧಿ ಮುಗಿಯುವವರೆಗೆ ಭಾರತೀಯ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿಷೇಧಾಜ್ಞೆಯನ್ನು ಹೊರಡಿಸಿರುತ್ತಾರೆ.
ಸದರಿ ಅವಧಿಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಇಲೆಕ್ಟ್ರಾನಿಕ್ಸ್ ಅಂದರೆ, ಮೊಬೈಲ್ ಫೋನ್‌ಗಳು, ಸ್ಮಾರ್ಟ್ ವಾಚ್, ವೈರ್ ಲೆಸ್/ ಬ್ಲೂಟೂತ್, ಇಯರ್ ಹೆಡ್ ಫೋನ್‌ಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ ಪರೀಕ್ಷೆ : ನಿಷೇದಾಜ್ಷೆ
ಕಾರವಾರ 14 :- ಜಿಲ್ಲೆಯಲ್ಲಿ ಫೆ.15 ರಿಂದ ಮಾ.4 ರವರೆಗೆ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಯ 2025 ನೇ ಸಾಲಿನ 9 ಮತ್ತು 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳು ನಡೆಯಲಿದೆ.
ಸದರಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿರುವುದರಿಂದ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ, ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಶಾಂತತಾ ಭಂಗ ಆಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ಸಮಯದಿಂದ ಪರೀಕ್ಷಾ ಅವಧಿ ಮುಗಿಯುವವರೆಗೆ ಭಾರತೀಯ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿಷೇಧಾಜ್ಞೆಯನ್ನು ಹೊರಡಿಸಿರುತ್ತಾರೆ.
ಸದರಿ ಅವಧಿಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಇಲೆಕ್ಟ್ರಾನಿಕ್ಸ್ ಅಂದರೆ, ಮೊಬೈಲ್ ಫೋನಗಳು, ಸ್ಮಾರ್ಟ್ ವಾಚ್, ವೈರ್ ಲೆಸ್/ ಬ್ಲೂಟೂತ್, ಇಯರ್ ಹೆಡ್ ಫೋನ್‌ಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ರಾಷ್ಟ್ರೀಯ ಸಮ್ಮೇಳನ
ಕಾರವಾರ 14 : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ,ಬೆಂಗಳೂರು ವತಿಯಿಂದ “ಇಛಿಠಠಡಿಟ: ಊಚಿಡಿಟಿಟಿರ ಖಿಡಿಚಿತಜಟ ಣಠ ಆಛಿಠಜಡಿ ಓಚಿಣಣಡಿಜ, ಕಡಿಠಠಜ ಅಠಜಡಿತಚಿಣಠ ಚಿಟಿಜ ಖಣಠಿಠಿಠಣ ಖಣಚಿಟಿಚಿಛಟಜ ಆಜತಜಟಠಟಜಟಿಣ” ವಿಷಯದ ಮೇಲೆ ಫೆ.19 ರಿಂದ 21 ವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳವನ್ನು ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಈ ಸಮ್ಮೇಳನದಲ್ಲಿ ಇಛಿಠಠಡಿಟ ಕುರಿತು ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧ ಪ್ರಸ್ತುತಿ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ಸಂಶೋಧನಾ ಪ್ರಬಂಧಗಳಿಗೆ ಬಹುಮಾನವನ್ನು ನೀಡಲಾಗುವುದು ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಯುವ ಉದ್ಯಮದಾರರು ಭಾಗವಹಿಸಬಹುದಾಗಿದೆ.
ಆಸಕ್ತ ಪ್ರತಿನಿಧಿಗಳು ಫೆ.17 ರೊಳಗಾಗಿ (ಉಠರರಟಜ ಜಿಠಟ- ಣಣಠಿ://ಜಿಠ.ರಟಜ/ಘಅಘ9ಞಡಿಅಣ8ಉಕಿಗಕ55ಂ) ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 9845258894, 9686449019, 9620767819 ಗೆ ಹಾಗೂ ಅಕಾಡೆಮಿಯ ವೆಬ್‌ಸೈಟ್: ಣಣಠಿ://ಣಚಿಛಿಚಿಜಜಟಥಿ.ಟಿ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ. 15 ರಂದು ಸಂತ ಸೇವಾಲಾಲ್ ಜಯಂತಿ
ಕಾರವಾರ 14 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಫೆ. 15 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ ಕೆ. ಸೈಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಆಡಳಿತ ಸುಧಾರಣಾ ಆಯೋಗದ ಅದ್ಯಕ್ಷ ಆರ್.ವಿ. ದೇಶಪಾಂಡೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಡಿ ಉಳ್ವೇಕರ, ನಗರ ಸಭೆ ಅಧ್ಯಕ್ಷ ರವಿರಾಜ ಚಂದ್ರಹಾಸ ಅಂಕೋಲೆಕರ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಲೋಡರ್ಸ ಕ್ಲಿನರ್ಸ ಹುದ್ದೆಗಳ ತಾತ್ಕಲಿಕ ಆಯ್ಕೆ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ.
ಕಾರವಾರ 14 :- ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳೀಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಗಳಲ್ಲಿ ಖಾಲಿ ಇರುವ ನೇರ ನೇಮಕಾತಿ ಲೋಡರ್ಸ ಕ್ಲಿನರ್ಸ ಹುದ್ದೆಗಳಿಗೆ ಕರ್ನಾಟಕ ಪುರಸಭೆಗಳ (ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯತಗಳ ಲೋಡರ್ಸ/ ಕ್ಲಿನರ್ಸ ನೇಮಕಾತಿ) (ವಿಶೇಷ)ನಿಯಮಗಳು 2021 ರ ನಿಯಮಗಳ ರೀತ್ಯಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನದಲ್ಲಿ ಕಾರ್ಯನಿರ್ವಹಿಸುತ್ತಿರುವ ಲೋಡರ್ಸ/ ಕ್ಲಿನರ್ಸಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ
ಅದರಂತೆ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ನಗರ ಸ್ಥಳೀಯ ಸಂಸ್ಥೆಗಳ ವೆಬ್‌ಸೈಟ್: ತಿತಿತಿ.ಣಣಣಚಿಡಿಚಿಞಚಿಟಿಟಿಚಿಜಚಿ.ಟಡಿಛಿ.ರಠ.ಟಿ ಹಾಗೂ ಸೂಚನಾ ಫಲಕಗಳಲ್ಲಿ ಪ್ರಚುರಪಡಿಸಲಾಗಿದೆ. ಈ ಬಗ್ಗೆ ಯಾವುದೇ ಆಕ್ಷೇಪಣೆ ಇದ್ದಲ್ಲಿ ಮಾ.12 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶ ಜಿಲ್ಲಾಧಿಕಾರಿಗಳ ಕಚೇರಿ ಕಾರ್ಯಲಯಕ್ಕೆ ಸಲ್ಲಿಸುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೌರಕಾರ್ಮಿಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಸಲು ಅವಕಾಶ
ಕಾರವಾರ 14 :- ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳೀಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಗಳಲ್ಲಿ ಖಾಲಿ ಇರುವ ನೇರ ನೇಮಕಾತಿ ಪೌರಕಾರ್ಮಿಕರ ಹುದ್ದೆಗಳಿಗೆ ಕರ್ನಾಟಕ ಪುರಸಭೆಗಳ (ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯತಗಳ ಪೌರಕಾರ್ಮಿಕರ ನೇಮಕಾತಿ) (ವಿಶೇಷ) ನಿಯಮಗಳು 2022 ರ ನಿಯಮಗಳ ರೀತ್ಯಾ ನೇರ ಪಾವತಿ ಪೌರಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ.
ಅದರಂತೆ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ನಗರ ಸ್ಥಳೀಯ ಸಂಸ್ಥೆಗಳ ವೆಬ್‌ಸೈಟ್: ತಿತಿತಿ.ಣಣಣಚಿಡಿಚಿಞಚಿಟಿಟಿಚಿಜಚಿ.ಟಡಿಛಿ.ರಠ.ಟಿ ಹಾಗೂ ಸೂಚನಾ ಫಲಕಗಳಲ್ಲಿ ಪ್ರಚುರಪಡಿಸಲಾಗಿದೆ. ಈ ಬಗ್ಗೆ ಯಾವುದೇ ಆಕ್ಷೇಪಣೆ ಇದ್ದಲ್ಲಿ ಮಾ.12 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶ ಜಿಲ್ಲಾಧಿಕಾರಿಗಳ ಕಚೇರಿ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.