ಬಾಗಲಕೋಟೆ: ಜಿಲ್ಲಾಡಳಿತದ ವತಿಯಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರವಿವಾರ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಹೇಮರೆಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಅಪರ್ಿಸಿದರು. ಇದೇ ಸಂದರ್ಭದಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ಮಾನೆ, ತೋಟಗಾರಿಕೆ ಇಲಾಖೆಯ ಉಪನಿದರ್ೇಶಕ ಪ್ರಭುರಾಜ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕ ಬಸವರಾಜ ಶಿರೂರ ಸೇರಿದಂತೆ ಇತರರು ಉಪಸ್ಥಿತಿರಿದ್ದರು.