ಹಿಂದೂ ಸಮಾಜೋತ್ಸವ ಶೋಭಾಯಾತ್ರೆ ಮೆರವಣಿಗೆ ಸಂಭ್ರಮಾಚರಣೆ
Hindu Samajotsava Shobha Yatra Parade Celebration
ಯಲಬುರ್ಗಾ 31 : ಹಿಂದೂ ಸಮಾಜೋತ್ಸವ ಆಯೋಜನಾ ಸಮಿತಿ ಯಲಬುರ್ಗಾ ಹೋಬಳಿ ವತಿಯಿಂದ ಹಿಂದೂ ಸಮಾಜೋತ್ಸವ ಹಾಗೂ ಶೋಭಾಯಾತ್ರೆ ಕಾರ್ಯಕ್ರಮ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಪಟ್ಟಣದ ಮೊಗ್ಗಿ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆದ ಶೋಭಾಯಾತ್ರೆಗೆ ಸ್ಥಳಿಯ ಶ್ರೀಧರ ಮುರಡಿ ಹಿರೇಮಠದ ಶ್ರೀಬಸವಲಿಂಗೇಶ್ವರ ಸ್ವಾಮೀಜಿಯವರು ಗೋವಿಗೆ ಪೂಜೆ ಸಲ್ಲಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದರು.
ಶೋಭಾಯಾತ್ರೆಯೂ ಭಜನೆ, ವಾದ್ಯ ಮೇಳ ಹಾಗೂ ಕೇಸರಿ ಧ್ವಜಗಳೊಂದಿಗೆ ನಗರಾದ್ಯಂತ ಭಕ್ತಿ ಮತ್ತು ಸಂಭ್ರಮದ ವಾತಾವರಣ ಸೃಷ್ಟಿಸಿತು. ನೂರಾರು ಮಹಿಳೆಯರು ಪೂರ್ಣಕುಂಭ ಕಳಸದೊಂದಿಗೆ ಮೆರವಣಿಗೆಯಲ್ಲಿ ಸಾಗಿದರು. ಶೋಭಾಯಾತ್ರೆಯಲ್ಲಿ ಧಾರ್ಮಿಕ ಮುಖಂಡರು, ಸಮಾಜದ ಗಣ್ಯರು, ಯುವಕರು ಹಾಗೂ ಮಕ್ಕಳು, ಮಹಿಳೆಯರು ಭಾಗವಹಿಸಿದ್ದರು. ಹಿಂದೂ ಸಮಾಜೋತ್ಸವದ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಧರ ಮುರಡಿ ಹಿರೇಮಠದ ಶ್ರೀ ಷ.ಬ್ರ.ಬಸವಲಿಂಗೇಶ್ವರ ಸ್ವಾಮೀಜಿಗಳು, ಹಿಂದೂ ಸಮಾಜ ಸಂಘಟಿತವಾಗಿ ನಮ್ಮ ಸಂಸ್ಕೃತಿ, ಧರ್ಮ ಹಾಗೂ ರಾಷ್ಟ್ರೀಯ ಮೌಲ್ಯಗಳನ್ನು ಉಳಿಸಿಕೊಳ್ಳಬೇಕಿದೆ.
ಹಿಂದೂ ಧರ್ಮದ ಇತಿಹಾಸ ಮತ್ತು ಅದರ ಮೇಲಾದ ದಾಳಿಗಳನ್ನು ಸ್ಮರಿಸಿದ ಅವರು, ಭಕ್ತಿ ಹಾಗೂ ಶಕ್ತಿಯನ್ನು ಯಾರಿಂದಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಧರ್ಮಕ್ಕೆ ನಮ್ಮ ಅಗತ್ಯವಿಲ್ಲ. ಆದರೆ ನಮಗೆ ಧರ್ಮದ ಅಗತ್ಯವಿದೆ. ನಮ್ಮ ಪೂರ್ವಜರು ಧರ್ಮ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಆ ತ್ಯಾಗದ ಫಲವಾಗಿ ನಾವಿಂದು ಸ್ವತಂತ್ರವಾಗಿ ಬದುಕುತ್ತಿದ್ದೇವೆ ಎಂದರು. ಹಿಂದೂ ಸಮಾಜದ ಮುಖಂಡರು ಕೃಷ್ಣಾನಂದ ಜಿ ಅವರು ಮಾತನಾಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ದೇಶಾದ್ಯಂತ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಜಗತ್ತಿನ ಅತ್ಯಂತ ಪ್ರಾಚೀನ ಹಾಗೂ ಏಕೈಕ ಸನಾತನ ಧರ್ಮ ಹಿಂದೂ ಧರ್ಮವಾಗಿದ್ದು, ಇದರಲ್ಲಿ ಹುಟ್ಟಿರುವುದು ನಮ್ಮ ಪುಣ್ಯ. ಋಷಿ ಮುನಿಗಳ ತಪಸ್ಸು, ಯೋಗ ಹಾಗೂ ಸಂಕಲ್ಪದಿಂದ ಉದ್ಭವಿಸಿದ ಧರ್ಮವೇ ಹಿಂದೂ ಧರ್ಮ ಎಂದರು. ಈ ವೇಳೆ ಮಾಜಿ ಸಚಿವ ಹಾಲಪ್ಪ ಆಚಾರ,ಮುಖಂಡ ಬಸವಲಿಂಗಪ್ಪ ಭೂತೆ, ಈರಣ್ಣ ಹುಬ್ಬಳ್ಳಿ, ಅರವಿಂದಗೌಡ ಪಾಟೀಲ್, ಬಸವನಗೌಡ ತೊಂಡಿಹಾಳ, ಪ್ರಕಾಶ ಬೇಲೆರಿ, ವಿಶ್ವನಾಥ ಮರೀಬಸಪ್ಪನವರ, ಶರಣಪ್ಪ ಈಳಗೇರ, ಆನಂದ ಉಳ್ಳಾಗಡ್ಡಿ, ಕಳಕನಗೌಡ ಪಾಟೀಲ್, ದಾನನಗೌಡ ತೊಂಡಿಹಾಳ್, ಸುರೇಶಗೌಡ ಶಿವನಗೌಡ ,ಸೇರಿದಂತೆ ಅಪಾರ ಹಿಂದೂ ಸಮ್ಮೇಳನ ಸಮಿತಿಯ ಸರ್ವ ಮುಖಂಡರು, ಯುವಕರು,ಮಹಿಳೆಯರು ಭಾಗವಹಿಸುವ ಮೂಲಕ ಶೋಭಾಯಾತ್ರೆಯಲ್ಲಿ ವಿಶೇಷ ಗಮನ ಸೆಳೆದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 