ಜ. 31 ರಂದು ಹಿಂದೂ ಸಮಾಜೋತ್ಸವ ಭವ್ಯ ಶೋಭಾಯಾತ್ರೆ
Hindu Samajwadi Festival grand procession on Jan. 31
ಗದಗ 29 : ಹಿಂದೂ ಸಮಾಜೋತ್ಸವವು ಸರ್ವ ಸಮಾಜ ಸೇರಿ ನಡೆಸುವ ಕಾರ್ಯಕ್ರಮವಾಗಿದ್ದು, ಇದು ಒಂದು ಧಾರ್ಮಿಕ ಉತ್ಸವ ಅಲ್ಲ. ಸಮಾಜದ ಏಕತೆ, ಸಂಸ್ಕೃತಿಯ ಉಳಿವು ಮತ್ತು ಧಾರ್ಮಿಕ ಜಾಗೃತಿಯ ಪ್ರತೀಕವಾಗಿದೆ. ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಧಾರ್ಮಿಕ ಭಾವನೆ, ಶಾಂತಿ ಮತ್ತು ಸಹಕಾರವನ್ನ ಬೆಳೆಸುತ್ತವೆ. ಇದರ ಭವ್ಯ ಶೋಭಾಯಾತ್ರೆ ಜನೇವರಿ-31ರಂದು ಮಧ್ಯಾಹ್ನ 3 ಗಂಟೆಗೆ ನಗರದ ವೀರೇಶ್ವರ ಪುಣ್ಯಾಶ್ರಮ ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಮಠದಿಂದ ಪ್ರಾರಂಭಿಸುವುದಾಗಿ ಹಿಂದೂ ಸಮಾಜದ ಸಮಿತಿ ಅಧ್ಯಕ್ಷರಾದ ಬಸವರಾಜ ಬಿಂಗಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಶೋಭಾಯಾತ್ರೆಯಲ್ಲಿ ಮಹಿಳೆಯರು ಕುಂಭಮೇಳ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವುದು.
ಸಭಾ ಕಾರ್ಯಕ್ರಮವು ಸಾಯಂಕಾಲ 6 ಗಂಟೆಗೆ ಮಾಳೇಕೊಪ್ಪಮಠ ಅವರ ಬಯಲು ಜಾಗೆಯ ಸಾಯಿಬಾಬಾ ದೇವಸ್ಥಾನದ ಹತ್ತಿರ ಹಾತಲಗೇರಿ ರಸ್ತೆ ಗದಗ ನಲ್ಲಿ ನಡೆಸುವದು. ಇದೇ ವೇಳೆ ದಿಕ್ಸೂಚಿ ಭಾಷಣವನ್ನ ಕೃಷ್ಣಾ ಜೋಷಿ ನಡೆಸಿಕೊಡುವರು ದಿವ್ಯ ಸಾನಿಧ್ಯವನ್ನ ಗದಗ ವೀರೇಶ್ವರ ಪುಣ್ಯಾಶ್ರಮದ ಪ.ಪೂ.ಕಲ್ಲಯ್ಯಜ್ಜನವರು ವಹಿಸುವುದಾಗಿ ತಿಳಿಸಿದರು. ಪತ್ರಿಕಾ ಗೋಷ್ಠಿಯಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಉಪಾಧ್ಯಕ್ಷ ಕೇಶವರಾಮ್ ಕೊಳ್ಳಿ, ಹಾದಿ, ಚಿನ್ಮಯಾನಂದ ಟೆಂಗಿನಕಾಯಿ, ಶಶಿಧರ ದಿಂಡೂರ, ರಘುನಾಥಸಾ ಮೆರವಾಡೆ, ರಾಜಣ್ಣ ಮಲ್ಲಾಡದ, ಮಂಜುನಾಥ ಕೊಟ್ನೆಕಲ್, ಚಂದ್ರಕಾಂತ ಚವ್ಹಾಣ, ಪ್ರೇಮಾ ಕಡೆಮನಿ, ಕಾರ್ಯದರ್ಶಿ ಪ್ರಕಾಶ ಉಗಲಾಟದ, ಸಂಘಟನಾ ಕಾರ್ಯದರ್ಶಿ ಜಗದೀಶ ಪೂಜಾರ, ಶೈಲೇಶ್ ಬಾಗಮಾರ, ಹರೀಶ ಪೂಜಾರ, ರಾಜಶೇಖರ ಕುಂಬಿ, ನಾಗವೇಣಿ ಕಟ್ಟಿಮನಿ, ಡಾ.ಉಮೇಶ ಹಾದಿ, ಚಿನ್ಮಯಾನಂದ ಟೆಂಗಿನಕಾಯಿ ಸೇರಿದಂತೆ ಇತರರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 