ಜ. 31 ರಂದು ಶಿರಹಟ್ಟಿಯಲ್ಲಿ ಹಿಂದೂ ಸಮ್ಮೇಳನ
Hindu conference in Shirahatti on Jan. 31
ಶಿರಹಟ್ಟಿ 29 : ಹೋಬಳಿ ಮಟ್ಟದ ಹಿಂದೂ ಸಮ್ಮೇಳನ ಕಾರ್ಯಕ್ರಮ ದಿನಾಂಕ 31-01-2026 ರ ಶನಿವಾರ ಸಾಯಂಕಾಲ 5 ಗಂಟೆಗೆ ಪಟ್ಟಣದ ಸಿಸಿಎನ್ ಆಂಗ್ಲ ಮಾಧ್ಯಮಿಕ ಶಾಲೆಯ ಆವರಣದಲ್ಲಿ ಜರುಗುವುದು ಎಂದು ಹಿಂದೂ ಸಮ್ಮೇಳನದ ಅಧ್ಯಕ್ಷ ತಿಪ್ಪಣ್ಣ ಕೊಂಚಿಗೇರಿ ಹೇಳಿದರು.
ಅವರು ಗುರುವಾರ ಪಟ್ಟಣದ ಶಿಕ್ಷಕರ ಭವನದಲ್ಲಿ ಹಿಂದೂ ಸಮ್ಮೇಳನದ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ದಿನಾಂಕ 31-01-2026 ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಅಂಬಾಭವಾನಿ ದೇವಸ್ಥಾನದಿಂದ ಶೋಭಾಯಾತ್ರೆ ಹೊರಟು ಮಟ್ಟಿಭಾವಿ, ಮೇಗೇರಿ ಓಣಿ, ಬೀರೇಶ್ವರ ದೇವಸ್ಥಾನ, ಸಂಗೊಳ್ಳಿ ರಾಯಣ್ಣ ವೃತ್ತ, ವಾಲ್ಮೀಕಿ, ಗಾಂಧಿ ವೃತ್ತ, ಅಂಬೇಡ್ಕರ ವೃತ್ತ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕ ಸಮಾರಂಭ ಸ್ಥಳವಾದ ಸಿಸಿಎನ್ ಆಂಗ್ಲ ಮಾಧ್ಯಮಿಕ ಶಾಲೆಗೆ ತಲುಪುವುದು. ಈ ಕಾರ್ಯಕ್ರಮದಲ್ಲಿ ಸುಮಾರು 2500 ಜನರು ಸೇರುವ ನೀರೀಕ್ಷೆಯಿದೆ. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸುವರು ಎಂದರು.
ಈ ಸಂದರ್ಭದಲ್ಲಿ ನಾಗರಾಜ ಲಕ್ಕುಂಡಿ, ನಟರಾಜ್ ರಾನಡೆ, ರವಿ ಗೋ. ಬೇಂದ್ರೆ, ನೀಲಪ್ಪ ಚಕ್ರಸಾಲಿ, ಫಕ್ಕೀರೇಶ ರಟ್ಟಿಹಳ್ಳಿ, ಯಲ್ಲಪ್ಪ ಇಂಗಳಗಿ, ಕುಮಾರಿ ಪುತುಳಾಬಾಯಿ ಪರಬತ್, ಶ್ರೀನಿವಾಸ ಬಾರ್ಬರ, ರಾಮಣ್ಣ ಕಮ್ಮಾರ ಹಾಗೂ ಮಹಾದೇವಪ್ಪ ಹಡಪದ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 