ಹೀರಾಲಾಲ್ ಸಿಂಗ್ರಿ ಅವರಿಗೆ ಎಚ್.ಎನ್. ಪ್ರಶಸ್ತಿ
ಗದಗ 22: ನಗರದ ಸಾಮಾಜಿಕ ಕಾರ್ಯಕರ್ತರಾದ ಹೀರಾಲಾಲ್ ಸಿಂಗ್ರಿ ಅವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಹೆಚ್.ಎನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇದೇ ಡಿ. 28 ಹಾಗೂ 29 ರಂದು ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಹಾಗೂ ವೈಚಾರಿಕ ದಿನಾಚರಣೆಯ ಅಂಗವಾಗಿ ರಾಜ್ಯಮಟ್ಟದ ನಾಲ್ಕನೆಯ ವೈಜ್ಞಾನಿಕ ಸಮ್ಮೇಳನದಲ್ಲಿ ಬೆಂಗಳೂರಿನ ಯಲಹಂಕ ಹತ್ತಿರವಿರುವ ಬಾಗಲೂರಿನ ವಿಜಿ ಇಂಟರ್ನ್ಯಾಷನಲ್ ಶಾಲಾ ಮೈದಾನದಲ್ಲಿ ಪ್ರಧಾನ ಮಾಡಲಾಗುವುದು. ಈ ಕಾರ್ಯಕ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುವರು.
ಈ ಸಮ್ಮೇಳನದ ಸರ್ವಾಧ್ಯಕ್ಷೆ ಹಾಗೂ ಹಿರಿಯ ನಟಿಯರಾದ ಉಮಾಶ್ರೀ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಹುಲಿಕಲ್ ನಟರಾಜ ಸೇರಿದಂತೆ ಮುಂತಾದವರು ಉಪಸ್ಥಿತರಿರುವರು ಎಂದು ಗದಗ ಜಿಲ್ಲಾಧ್ಯಕ್ಷರಾದ ವಿಜಯಕುಮಾರ ಬಣಕಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.