ಹಿರೇಹಂದಿಗೋಳ : 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಸಿಸಿ ರಸೆ ್ತ ಲೋಕಾರೆ್ಣಗೊಳಿಸಿದ ಸಚಿವ ಎಚ್.ಕೆ.ಪಾಟೀಲ
Hirehandigol: Minister H.K. Patil inaugurated the CC system built at a cost of Rs. 25 lakhs
ಗದಗ 17: ಹುಲಕೋಟಿ, ಬಿಂಕದಕಟ್ಟಿ, ಅಸುಂಡಿ, ಕುರ್ತಕೋಟಿ ಭಾಗದಲ್ಲಿ ನೀರೀಕ್ಷಿತ ಪ್ರಮಾಣಕ್ಕಿಂತ ಅಧಿಕ ಅಭಿವೃದ್ಧಿ ಆಗಿದೆ. ಇದಕ್ಕೆಲ್ಲ ಜನಸಾಮಾನ್ಯರ ಒಗ್ಗಟ್ಟೇ ಕಾರಣವಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಅಭಿಪ್ರಾಯ ಪಟ್ಟರು.
ಗದಗ ತಾಲೂಕಿನ ಹಿರೇಹಂದಿಗೋಳ ಗ್ರಾಮದಲ್ಲಿ 25 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣವಾದ ಸಿಸಿ ರಸ್ತೆ ಕಾಮಗಾರಿಯನ್ನು ಲೋಕಾರೆ್ಣಗೊಳಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿನ ಜನರ ಬದುಕಿನ ಜೀವನದ ಗುಣಮಟ್ಟ ಎತ್ತರಕ್ಕೇರಬೇಕು. ಬದುಕು ಹೆಚ್ಚು ಶಕ್ತಿಯುತವಾಗಬೇಕು. ಅವರ ಆರೋಗ್ಯ ಬದುಕು ಸುಂದರವಾಗಿರಬೇಕೆಂದು ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗಿದೆ. ಇದರಿಂದ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ 60 ಸಾವಿರ ರೂ.ಗಳು ತಲುಪಲಿದ್ದು ಆರ್ಥಿಕವಾಗಿ ಚೇತರಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ ಎಂದರು.
ಬಡತನವನ್ನು ಬೇರು ಸಮೇತ ಕಿತ್ತೊಗೆಯುವ ಸಂಕಲ್ಪದೊಂದಿಗೆ ಪಂಚಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸಲಾಯಿತು. ಇದರಿಂದ ಬಡತನ ದೂರವಾಗಿ ನೆಮ್ಮದಿಯ ಬದುಕು ಕಾಣುವಂತಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ ಅವರು ಅಭಿಪ್ರಾಯಪಟ್ಟರು.
ಅನುದಾನದ ಭರವಸೆ : ಹಿರೇಹಂದಿಗೋಳ ಗ್ರಾಮಸ್ಥರು ಸಾರ್ವಜನಿಕ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ ನೀಡುವಂತೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಯಿಸಿದ ಸಚಿವ ಎಚ್.ಕೆ.ಪಾಟೀಲ ಅವರು ಗ್ರಾಮದ ಇನ್ನುಳಿದ ಸಿ ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ 40 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗುವುದು. ಏಪ್ರಿಲ್‌ನಲ್ಲಿ ಕೆಲಸ ಆರಂಭಿಸಿ ಜೂನ್ ತಿಂಗಳಿಗೆ ಪೂರ್ಣಗೊಳಿಸಲಾಗುವುದು ಎಂದು ಸ್ಥಳದಲ್ಲೇ ಭರವಸೆ ನೀಡಿದರು. ಅಲ್ಲದೇ ಸ್ಮಶಾನ ಅಭಿವೃದ್ಧಿಗಾಗಿ ಅಗತ್ಯವಿರುವ ಅಷ್ಟೂ ಅನುದಾನವನ್ನು ನೀಡಲಾಗುವುದು. ಇದರೊಂದಿಗೆ ಸಮುದಾಯ ಭವನಕ್ಕೆ 10 ಲಕ್ಷ ರೂ.ಗಳನ್ನು ನೀಡುವುದಾಗಿ ಸಚಿವರು ಇದೇ ಸಂದರ್ಭದಲ್ಲಿ ಗ್ರಾಮಸ್ಥರಿಗೆ ತಿಳಿಸಿದರು.
ಕೇಂದ್ರ ಸರ್ಕಾರ ಮನರೇಗಾ ಉದ್ಯೋಗ ಖಾತ್ರಿ ಯೋಜನೆಯ ಕಾನೂನನ್ನು ರದ್ದುಪಡಿಸಿದೆ. ಇದರಿಂದ ಜನಸಾಮಾನ್ಯರ ವಿಕೇಂದ್ರೀಕರಣ ವ್ಯವಸ್ಥೆಗೆ ವಿರುದ್ಧವಾಗಿದೆ. ಈ ಮೊದಲಿಗಿದ್ದ ಕಾನೂನು ಹಾಗೂ ಯೋಜನೆ ಮರುಸ್ಥಾಪನೆಯಾಗಲಿ ಎಂದು ಇದೇ ಸಂದರ್ಭದಲ್ಲಿ ಸಚಿವ ಎಚ್.ಕೆ.ಪಾಟೀಲ ಅವರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಬಿಂಕದಕಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ನಿಂಗಪ್ಪ ಪರ್ಪನವರ, ಉಪಾಧ್ಯಕ್ಷೆ ದ್ಯಾಮವ್ವ ಯರಟ್ಟಿ, ರವಿ ಮೂಲಿಮನಿ, ಎಂ.ಐ.ಪಾಟೀಲ, ವಿ.ಬಿ.ಜಕ್ಕನಗೌಡ್ರ, ಎಂ.ಬಿ.ಚುರ್ಚಿಹಾಳ, ಡಿ.ಬಿ.ಕುಲಕರ್ಣಿ, ಎಂ.ಎಸ್.ಪಾಟೀಲ, ಬಸಯ್ಯ ಯಲಬುರ್ಗಿ ಮಠ, ಎಸ್.ಎನ್.ಪಾಟೀಲ, ಬಿ.ಟಿ.ಖಾನಾಪುರ, ಆರ್.ಎಚ್.ಪಾಟೀಲ, ಎಂ.ಎಚ್.ಮಡಿಕೇರಿ ಸೇರಿದಂತೆ ಗ್ರಾಮದ ಹಿರಿಯರು , ಜನಪ್ರತಿನಿಧಿಗಳು, ಗಣ್ಯರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 