ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಐತಿಹಾಸಿಕ ಕಾರ್ಯಕ್ರಮ-ಇಮ್ತಿಯಾಜ ಮಾನ್ವಿ
Historic program being held in Hubballi under the leadership of the Chief Minister - Imtiyaz Maanvi
ಗದಗ-23 : ರಾಜ್ಯ ವಸತಿ ಇಲಾಖೆ ಹಾಗೂ ಕರ್ನಾಟಕ ಕೊಳಗೇರಿ ಅಭಿವೃಧ್ದಿ ಮಂಡಳಿಯಿಂದ ಕರ್ನಾಟಕ ರಾಜ್ಯದ ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ದಿನಾಂಕ: 24-01-2026 ರಂದು ಏಕಕಾಲಕ್ಕೆ 42,345 ಮನೆಗಳು ಹಂಚಿಕೆ ಹಾಗೂ ಸಾವಿರಾರು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಆಯೋಜಿಸಲಾಗಿರುವ ಬೃಹತ್ ವೇದಿಕೆಯ ಮೂಲಕ ಚಾಲನೆ ನೀಡುತ್ತಿರುವುದು ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷರಾದ ಇಮ್ತಿಯಾಜ.ಆರ್.ಮಾನ್ವಿ ಸ್ವಾಗತಿಸಿದ್ದಾರೆ. ಕರ್ನಾಟಕ ಕೊಳಗೇರಿ ಅಭಿವೃಧ್ದಿ ಮಂಡಳಿಯ ಸುರ್ವಣ ಮಹೋತ್ಸವದ ಅಂಗವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಡಿಯಲ್ಲಿ ಮಂಡಳಿಯಿಂದ ರಾಜ್ಯದಾದ್ಯಂತ 1,80,253 ಮನೆಗಳ ಪೈಕಿ 2ನೇ ಹಂತದ 42,345 ಮನೆಗಳನ್ನು ಹಂಚಿಕೆ ಮಾಡುತ್ತಿರುವುದು ಸ್ಲಂ ಜನರಲ್ಲಿ ಸಂತೋಷ ತಂದಿದೆ.
ವಸತಿ ಇಲಾಖೆ ಸಚಿವರಾದ ಬಿ.ಝಡ್.ಜಮೀರಅಹ್ಮದ ಖಾನ ಹಾಗೂ ಸ್ಲಂ ಬೋರ್ಡ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಅವರ ಬಡವರ ಹಾಗೂ ಸ್ಲಂ ಜನರ ಪರವಾದ ಕಾಳಜಿ ಮತ್ತು ಜನಪರವಾದ ಕೆಲಸಗಳಿಗೆ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಐತಿಹಾಸಿಕ ಕಾರ್ಯಕ್ರಮವೇ ಸಾಕ್ಷಿಯಾಗಿದೆ. ಗದಗ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರಧಾನ ಮಂತ್ರಿಗಳ ಆವಾಸ್ ಯೋಜನಡಿಯಲ್ಲಿ ನಿರ್ಮಾಣಗೊಂಡಿರುವ 1228 ಮನೆಗಳನ್ನು ಇದೇ ಸಂದರ್ಭದಲ್ಲಿ ಹಂಚಿಕೆ ಮಾಡಲಾಗುತ್ತಿದ್ದು. ಇದರಲ್ಲಿ ಗದಗ-ಬೆಟಗೇರಿ ನಗರದ 412, ಮುಳಗುಂದ ಪಟ್ಟಣದ 344, ನರಗುಂದದ 224, ಗಜೇಂದ್ರಗಡದ 148 ಹಾಗೂ ಲಕ್ಷ್ಮೇಶ್ವರ, ಮುಂಡರಗಿ, ಶಿರಹಟ್ಟಿ ಸೇರಿದಂತೆ 100 ಮನೆಗಳನ್ನು ಮುಖ್ಯಂತ್ರಿಗಳು ಲೋಕಾರೆ್ಣ ಮಾಡುತ್ತಿದ್ದಾರೆ, ಈ ಒಂದು ಕಾರ್ಯಕ್ರಮಕ್ಕೆ ಗದಗ ಜಿಲ್ಲಾ ಸ್ಲಂ ಸಮಿತಿ ನೇತೃತ್ವಲ್ಲಿ ಗದಗ-ಬೆಟಗೇರಿ ನಗರದ ನೂರಾರು ಸ್ಲಂ ನಿವಾಸಿಗಳು ಭಾಗವಹಿಸುತ್ತಿದ್ದಾರೆ ಎಂದು ಗದಗ ಜಿಲ್ಲಾ ಸ್ಲಂ ಅಧ್ಯಕ್ಷರಾದ ಇಮ್ತಿಯಾಜ.ಆರ್.ಮಾನ್ವಿ ಹಾಗೂ ಕಾರ್ಯದರ್ಶಿ ಅಶೋಕ ಕುಸಬಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 