ಗವಿಮಠಕ್ಕೆ ಮೇಘಾಲಯದ ಗೌರವಾನ್ವಿತ ರಾಜ್ಯಪಾಲರು ಭೇಟಿ

Hon'ble Governor of Meghalaya visited Gavi Math

 ಗವಿಮಠಕ್ಕೆ ಮೇಘಾಲಯದ ಗೌರವಾನ್ವಿತ ರಾಜ್ಯಪಾಲರು ಭೇಟಿ 

ಕೊಪ್ಪಳ 22: ಕೊಪ್ಪಳ ಜಿಲ್ಲೆಯ ಸುಪ್ರಸಿದ್ಧ ಗವಿಸಿದ್ದೇಶ್ವರ ಮಠಕ್ಕೆ ಮೇಘಾಲಯ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಚಂದ್ರಶೇಖರ ಹೆಚ್‌. ವಿಜಯಶಂಕರ ಅವರು ಶನಿವಾರ ಭೇಟಿ ನೀಡಿ, ಗವಿ ಮಠದ ಗದ್ದುಗೆಯ ದರ್ಶನ ಪಡೆದು, ಅಭಿನವ ಗವಿಶ್ರೀಗಳ ಆಶೀರ್ವಾದ ಪಡೆದು, ನಂತರ ಪ್ರಸಾದವನ್ನು ಸ್ವೀಕರಿಸಿದರು.  ಈ ಸಂದರ್ಭದಲ್ಲಿ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಮಾಜಿ ಸಂಸದ ಶಿವರಾಮೆಗೌಡ, ಮಾಜಿ ಶಾಸಕ ಬಸವರಾಜ ದಢೇಸೂಗೂರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಕೊಪ್ಪಳ ತಹಶೀಲ್ದಾರ ವಿಠ್ಠಲ್ ಚೌಗಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.