ತಾಲೂಕ ನೌಕರರ ಸಂಘದಿಂದ ಸನ್ಮಾನ
ಶಿಗ್ಗಾವಿ 04: ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ತಾಲೂಕ ಉಸ್ತುವಾರಿ ಅಧಿಕಾರಿ ಡಾ. ರವಿ ತಿರ್ಲಾಪುರ ಅವರನ್ನು ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ನೌಕರ ಸಂಘದ ಅಧ್ಯಕ್ಷ ಅರುಣ ಹುಡೇದಗೌಡ್ರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಹಶಿಲ್ದಾರ ರವಿ ಕೊರವರ, ಇಓ ಕುಮಾರ ಮಣ್ಣವಡ್ಡರ ಸೇರಿದಂತೆ ಇತರರು ಉಪಸ್ಥಿತರಿದ್ದರು.