ಕನ್ನಡಿಗರಿಗಾಗಿ ನಿರ್ಮಿಸಿದ ಮನೆಗಳು ಕೇರಳದ ಅಕ್ರಮ ವಲಸಿಗರಿಗೆ
Houses built for Kannadigas are for illegal immigrants from Kerala
ಬೆಳಗಾವಿ: ಬೆಂಗಳೂರಿನ ಬಯಪ್ಪನಹಳ್ಳಿಯಲ್ಲಿ ಕನ್ನಡಿಗರಿಗೆ ಹಸ್ತಾಂತರಿಸಲು ನಿರ್ಮಿಸಿದ ಮನೆಗಳನ್ನು ಕೇರಳದ ಅಕ್ರಮ ವಲಸಿಗರಿಗೆ ನೀಡುವ ಮೂಲಕ ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪ ಮಾಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು ಬೆಂಗಳೂರಿನ ಯಲಹಂಕದ ಕೋಗಿಲು ಬಡಾವಣೆಯಲ್ಲಿನ ಮನೆಗಳನ್ನು ರಾಜ್ಯ ಸರ್ಕಾರ ಈಗ ಏಕಾಏಕಿ ನೆಲಸಮ ಮಾಡಿತು. ಈಗ ಕೇರಳದ ಮುಖ್ಯಮಂತ್ರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಬೆದರಿಕೆ ಮತ್ತು ಒತ್ತಡಕ್ಕೆ ಮಣಿದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು, ಬಯ್ಯಪ್ಪನಹಳ್ಳಿಯಲ್ಲಿ ಕೇರಳದ ವಲಸಿಗರಿಗೆ ಮನೆ ಮಂಜೂರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಯಡಿ ಬಡವರು ಮತ್ತು ಪರಿಶಿಷ್ಟ ವರ್ಗದವರಿಗೆ ಹಂಚಿಕೆ ಮಾಡಲು ಬಯ್ಯಪ್ಪನಹಳ್ಳಿಯಲ್ಲಿ ನಿರ್ಮಿಸಿರುವ ಮನೆಗಳು ಅರ್ಹರಿಗೆ ಸಿಗಬೇಕು. ಕನ್ನಡರಿಗೆ ಸಿಗಬೇಕಾದ ಮನೆಗಳನ್ನು ಕೇರಳದ ಅಕ್ರಮ ವಲಸಿಗರಿಗೆ ನೀಡಲು ಮುಂದಾಗಿರುವುದು ಕಾನೂನಿಗೆ ವಿರುದ್ಧವಾಗಿದೆ. ಇದು ಕನ್ನಡರಿಗ ಆತ್ಮಗೌರವಕ್ಕೆ ಚ್ಯುತಿ ತರುವ ಕೆಲಸವಾಗಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಈಗ ಅತಂತ್ರ ಸ್ಥಿತಿಯಲ್ಲಿದ್ದಾರೆ. ಒಬ್ಬರು ಸಿಎಂ ಸ್ಥಾನ ಉಳಿಸಿಕೊಳ್ಳಲು ಮತ್ತು ಮತ್ತೊಬ್ಬರು ಸ್ಥಾನ ಪಡೆಯಲು ಹೋರಾಟ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಕೋಗಿಲು ಲೇಔಟ್ನಲ್ಲಿ ಮನೆ ಕಡೆವಿದ ಮೂರ್ನಾಲ್ಕು ದಿನಗಳಲ್ಲೇ ಉಲ್ಟಾ ಹೊಡೆದ ಸರಕಾರ ಬಯ್ಯಪ್ಪನಹಳ್ಳಿಯಲ್ಲಿ ಸಂತ್ರಸ್ಥರಿಗೆ ಮನೆ ಕೊಡಲು ಮುಂದಾಗಿದೆ. ಅಲ್ಲದೆ ವಿಶೇಷ ಪ್ರಕರಣವೆಂದು ಮನೆ ಹಂಚಿಕೆ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ದೆಹಲಿಯಲ್ಲಿ ಕುಳಿತಿರುವ ಕೇರಳ ಮೂಲದ ವೇಣುಗೋಪಾಲ ನಿರ್ಧಾರ ಮಾಡಬೇಕೇ ಅಥವಾ ಮುಖ್ಯಮಂತ್ರಿಗಳು ಮಾಡಬೇಕೇ ಎಂದು ಪ್ರಶ್ನೆ ಮಾಡಿದರು.
ಕೇರಳದ ವಯನಾಡಿನಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ತಲೆದೋರಿದಾಗ, ಕರ್ನಾಟಕ ಸರ್ಕಾರದವರು 100 ಮನೆ ಕಟ್ಟಿಸಿಕೊಟ್ಟರು. ಆದರೆ, ಕರ್ನಾಟಕದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಪರಿಹಾರ ಕೇಳಿದರೆ, ಕೇಂದ್ರ ಸರ್ಕಾರದತ್ತ ಮುಖ್ಯಮಂತ್ರಿ ಬೊಟ್ಟು ಮಾಡುತ್ತಾರೆ. ಕೇರಳದ ಅಕ್ರಮ ವಲಸಿಗರ ಬಗ್ಗೆ ಚಿಂತನೆ ಮಾಡುವ ಸಿದ್ದರಾಮಯ್ಯ, ಕನ್ನಡಿಗರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡುತ್ತಿರುವುದು ದುರ್ದೈವದ ಸಂಗತಿ ಎಂದು ಆರೋಪಿಸಿದರು.
ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಮಿತಿಮೀರಿದೆ. ಮೈಸೂರಿನಲ್ಲಿ ಮಹಾರಾಷ್ಟ್ರದ ಪೊಲೀಸರು ಡ್ರಗ್ಸ್ ಫ್ಯಾಕ್ಟರಿ ಜಪ್ತಿ ಮಾಡಿದ್ದಾರೆ. ಬೆಂಗಳೂರಿನಲ್ಲೂ ಇಂಥದ್ದೇ ಪ್ರಕರಣ ನಡೆದಿದೆ. ಸರ್ಕಾರ ಇದನ್ನು ಮಟ್ಟ ಹಾಕುತ್ತಿಲ್ಲ. ಹಾಗಾದರೆ ಪೊಲೀಸ್ ಇಲಾಖೆ ಮತ್ತು ಗೃಹ ಸಚಿವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕುವುದಕ್ಕೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ ಅನುಮತಿಗೆ ಕಾಯಬೇಕಿದೆ. ಸಿದ್ದರಾಮಯ್ಯ ಅವರಿಗೆ ಯಾವುದೇ ಸ್ವಾತಂತ್ರ್ಯ ಇಲ್ಲ. ಅವರೊಬ್ಬ ಅಸಮರ್ಥ ಮುಖ್ಯಮಂತ್ರಿ. ಇದು ಅಸಮರ್ಥ ಸರ್ಕಾರ ಎಂದು ವಾಗ್ದಾಳಿ.ನಡೆಸಿದರು.
ಗೃಹಲಕ್ಷ್ಮಿ ಯೋಜನೆಯ ಫೆಬ್ರುವರಿ, ಮಾರ್ಚ್ ತಿಂಗಳ ಎರಡು ಕಂತಿನ ಹಣ 5 ಸಾವಿರ ಕೋಟಿ ಫಲಾನುಭವಿಗಳ ಖಾತೆಗೆ ಜಮೆ ಆಗಿಲ್ಲ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನದಲ್ಲೂ ತಪ್ಪು ಮಾಹಿತಿ ನೀಡಿದ್ದಾರೆ. ಹಣ ಎಲ್ಲಿ ಎನ್ನುವ ಕುರಿತು ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಈವರೆಗೂ ಸ್ಪಷ್ಟನೆ ನೀಡಿಲ್ಲ ಎಂದ ಅವರು ಈ ಪ್ರಕರಣದಲ್ಲಿ ಆಗಿರುವ ಅವ್ಯವಹಾರ ಹೊರಬರಬೇಕು ಎಂದು ಒತ್ತಾಯಿಸಿದರು.
ಗ್ಯಾರಂಟಿ ಯೋಜನೆಗೆ ಹಣ ಕ್ರೋಢೀಕರಿಸಲು ಆಗದೆ ಪರದಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಅಬಕಾರಿ ಇಲಾಖೆಗೆ ನೀಡಿದ ಗುರಿಯನ್ನು ಶೇ 35ರಷ್ಟು ಹೆಚ್ಚಿಸಿದೆ. ಸಣ್ಣ ಅಂಗಡಿಗಳಲ್ಲೂ ಮದ್ಯ ಮಾರಲು ಅವಕಾಶ ಕೊಟ್ಟಿದೆ. ಈ ಮೂಲಕ ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದೆ ಎಂದು ವ್ಯಂಗ್ಯವಾಡಿದರು .
ಜ.5ರಂದು ಬಿಜೆಪಿ ಕೋರ್ ಕಮಿಟಿ ಸಭೆ ಇದೆ. ಅಂದು ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ಚರ್ಚಿಸಿ, ಹೋರಾಟಕ್ಕೆ ರೂಪುರೇಷೆ ಸಿದ್ಧಪಡಿಸುತ್ತೇವೆ ಎಂದು ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 