ಎಸ್‌ಡಿಎ ಆತ್ಮಹತ್ಯೆ ಪ್ರಕರಣಧ ತನಿಖೆ ಎಲ್ಲಿವರೆಗೆ ಬಂದಿದೆ : ಆರ್. ಅಶೋಕ್
How far has the SDA suicide case investigation been: R. Ashok
ಎಸ್‌ಡಿಎ ಆತ್ಮಹತ್ಯೆ ಪ್ರಕರಣಧ ತನಿಖೆ ಎಲ್ಲಿವರೆಗೆ ಬಂದಿದೆ : ಆರ್. ಅಶೋಕ್
ಬೆಳಗಾವಿ : ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ಆಗಿದ್ದ ರುದ್ರೇಶ್ ಯಡಣ್ಣನವರ್ ಅವರ ಅನುಮಾನಾಸ್ಪದ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪಿಎ ವಿರುದ್ಧ ದೂರು ಇದೆ. ಆ ತನಿಖೆ ಎಲ್ಲಿವರೆಗೆ ಬಂತು? ಎಷ್ಟು ಜನರ ಬಂಧನವಾಗಿದೆ? ನಾಚಿಕೆ ಆಗಬೇಕು ಈ ಗೂಂಡಾಗಳ ವತರ್ನೆಗೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದರು.
ಶುಕ್ರವಾ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರೇ ಬಂಧನವಾಗಿ ಪೊಲೀಸ್ ವಶದಲ್ಲಿರುವ ಒಬ್ಬ ಪರಿಷತ್ ಸದಸ್ಯನಿಗೆ ತಮ್ಮ ಸರ್ಕಾರ ರಕ್ಷಣೆ ಕೊಡಲು ಆಗುತ್ತಿಲ್ಲ ಅಂದ ಮೇಲೆ ನಿಮ್ಮ ಸರ್ಕಾರವನ್ನು ರೌಡಿಗಳು, ಗೂಂಡಾಗಳು ಹೈಜಾಕ್ ಮಾಡಿರಬೇಕು ಅಥವಾ ಸರ್ಕಾರದ ಭಾಗವಾಗಿರುವವರೇ ರೌಡಿಗಳು, ಗೂಂಡಾಗಳಾಗಿರಬೇಕು ಎಂದು ವಾಗ್ದಾಳಿ ನಡೆಸಿದರು.
ಬೆಳಗಾವಿ ಅಧಿವೇಶನದ ಕಲಾಪದ ಸಂದರ್ಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ದೂರಿನ ಮೇರೆಗೆ ಸಿಟಿ ರವಿ ಅವರನ್ನು ಬಂಧಿಸಲಾಗಿದ್ದು, ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧವೂ ಸಿ.ಟಿ.ರವಿ ಅವರು ಪ್ರತಿದೂರು ನೀಡಿದ್ದಾರೆ.
ಡಿಕೆಶಿ ಹೇಳಿಕೆಗೆ ಕೇರಳಿ ಕೆಂಡವಾದ ಅಶೋಕ್ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರದಲ್ಲಿ ಸಿ.ಟಿ.ರವಿ ಅವರನ್ನ ಬಿಟ್ಟಿದ್ದೇ ಪುಣ್ಯ ಅಂದರೆ ತಮ್ಮ ಮಾತಿನ ಅರ್ಥವೇನು? ಜೀವಂತವಾಗಿ ಬಿಟ್ಟಿದ್ದೇ ಪುಣ್ಯ ಅಂತನಾ? ಇನ್ನೂ ಪ್ರಾಣ ತೆಗೆಯದೆ ಉಳಿಸಿರುವುದೇ ಪುಣ್ಯ ಅಂತಾನಾ? ಅಥವಾ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರ ತಾಲಿಬಾನಿಗೆ ಸೇರಿದ್ದಾ? ಅಥವಾ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ತಾಲಿಬಾನಿಗಳನಾ? ಕಾನೂನು ಕೈಗೆತ್ತುವ ರೌಡಿಗಳಿಗೆ, ಗೂಂಡಾಗಳಿಗೆ ನಿಮ್ಮ ಮಾತಿನಿಂದ ಏನು ಸಂದೇಶ ಹೋಗುತ್ತದೆ ಎನ್ನುವ ಪ್ರಜ್ಞೆ ತಮಗಿದೆಯೇ? ಎಂದು ಆಕ್ರೋಶ ಹೊರಹಾಕಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ತಾವೊಂದು ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರು, ರಾಜ್ಯದ ಉಪಮುಖ್ಯಮಂತ್ರಿಗಳು. ಮುಂದೊಂದು ದಿನ ಮುಖ್ಯಮಂತ್ರಿ ಆಗಬೇಕು ಎಂದು ಕನಸು ಕಾಣುತ್ತಿರುವವರು. ತಮ್ಮಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡಬಾರದು. ತಾವು ಮುಖ್ಯಮಂತ್ರಿ ಆದರೆ ರಾಜ್ಯದ ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಏನಾಗುತ್ತೆ ಅಂತ ತಮ್ಮ ಮಾತುಗಳೇ ಸೂಚನೆ ಕೊಡುತ್ತಿವೆ. ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎನ್ನುವುದನ್ನ ಮರೆಯಬೇಡಿ. ತಮ್ಮ ಸ್ಥಾನಕ್ಕೆ ತಕ್ಕಂತೆ ನಡೆದುಕೊಳ್ಳಿ. ಕನಿಷ್ಠ ಪಕ್ಷ ಸಾರ್ವಜನಿಕವಾಗಿ ಮಾತನಾಡುವಾಗ ಆದರೂ ತಮ್ಮ ಸ್ಥಾನಕ್ಕೆ ತಕ್ಕಂತೆ ಮಾತನಾಡಿ ಎಂದು ಡಿಕೆಶಿ ವಿರುದ್ದ ಆರ್. ಅಶೋಕ ಅವರು ಕಿಡಿಕಾರಿದ್ದಾರೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 