17 ಕೋಟಿ ವೆಚ್ಚದ ಇಂದಿರಾ ಗಾಂಧಿ ಬಾಲಕಿಯರ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ
Hudali puja for the construction of the 17 crore Indira Gandhi Girls' Residential School building
ಬೀದರ್ 28: ದಕ್ಷಿಣ ಬೀದರಿ್ವದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ಹೆಚ್ಚಿನ ಆದ್ಯತೆ ನೀಡುವುದು ನನ್ನ ಪ್ರಮುಖ ಜವಾಬ್ದಾರಿಯಾಗಿದೆ. ಗುಣಮಟ್ಟದ ಶಿಕ್ಷಣದ ಮೂಲಕವೇ ವಿದ್ಯಾರ್ಥಿಗಳ ಭವಿಷ್ಯವನ್ನು ಬೆಳಗಿಸಲು ಸಾಧ್ಯ. ಅದಕ್ಕಾಗಿ ಉತ್ತಮ ಶಾಲಾ ಮೂಲಸೌಕರ್ಯ , ಸ್ಮಾರ್ಟ್ ತರಗತಿಗಳು, ವಸತಿಶಾಲೆ ಸೌಲಭ್ಯಗಳು ಹಾಗೂ ಸಮಾನ ಶಿಕ್ಷಣಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸಲಾಗುತ್ತಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ತಿಳಿಸಿದರು. ಬೀದರ್ ದಕ್ಷಿಣ ಕ್ಷೇತ್ರದ ಬೇಮಳಖೇಡಾ ಗ್ರಾಮದಲ್ಲಿ ವಿದ್ಯಾರ್ಥಿನಿಯರ ಉತ್ತಮ ಶಿಕ್ಷಣದ ದೃಷ್ಟಿಯಿಂದ ?17 ಕೋಟಿ ವೆಚ್ಚದ ಶ್ರೀಮತಿ ಇಂದಿರಾ ಗಾಂಧಿ ಬಾಲಕಿಯರ ವಸತಿ ಶಾಲೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಶಿಕ್ಷಣಕ್ಕೆ ನೀಡುವ ಪ್ರತಿಯೊಂದು ಹೂಡಿಕೆಯೂ ಸಮಾಜದ ಪ್ರಗತಿಗೆ ಬೀಜವಾಗುತ್ತದೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವುದೇ ಸಮಾಜದ ಸಮಗ್ರ ಅಭಿವೃದ್ಧಿಗೆ ಮೂಲವಾಗಿದೆ.
ಗುಣಮಟ್ಟದ ಶಿಕ್ಷಣದಿಂದ ವಿದ್ಯಾರ್ಥಿಗಳ ಭವಿಷ್ಯ ಬೆಳಗುವುದರ ಜೊತೆಗೆ ರಾಷ್ಟ್ರದ ಅಭಿವೃದ್ಧಿಗೂ ಬಲ ಸಿಗುತ್ತದೆ. ಎಲ್ಲಾ ಮಕ್ಕಳಿಗೂ ಸಮಾನ ಶಿಕ್ಷಣಾವಕಾಶ, ಉತ್ತಮ ಮೂಲಸೌಕರ್ಯ, ನಿಪುಣ ಶಿಕ್ಷಕರು ಹಾಗೂ ಆಧುನಿಕ ತಂತ್ರಜ್ಞಾನಗಳ ಬಳಕೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು. ಬೀದರ್ ದಕ್ಷಿಣ ಕ್ಷೇತ್ರದ ಎಲ್ಲಾ ಗ್ರಾಮಗಳೊಂದಿಗೆ ಬೇಮಳಖೇಡಾ ಗ್ರಾಮಕ್ಕೂ ಜನರ ನೀರೀಕ್ಷೆಯಂತೆ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದೀಗ ವಿದ್ಯಾರ್ಥಿನಿಯರ ಉಜ್ವಲ ಭವಿಷ್ಯಕ್ಕಾಗಿ ವಸತಿ ಶಾಲೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದ್ದು, ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ
ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ಡಾ. ಶೈಲೇಂದ್ರ ಬೆಲ್ದಾಳೆಶಾಸಕರು, ಬೀದರ್ ದಕ್ಷಿಣ ಕ್ಷೇತ್ರಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರಾದ ಮಂಜುನಾಥ ಸುಣಗಾರ, ಮುಖಂಡರಾದ ಪ್ರಭು ಮೆಂಘಾ, ಬಸವರಾಜ ಸಿಂಧೋಲ, ಪ್ರಭುರಾವ ಸಾವಳಗಿ, ಸಂತೋಷ ರೆಡ್ಡಿ, ರಾಜಕುಮಾರ ಮಾಳಗಿ, ಶ್ರೀನಿವಾಸ ರೆಡ್ಡಿ, ಬಸವರಾಜ ಚಟನಳ್ಳಿ, ಶಿವಕುಮಾರ ಪಾಟೀಲ, ಸಿದ್ದು ಮುದ್ದಾ, ಶ್ರಿನೀವಾಸ ಹುಗಾರ, ಬಸವರಾಜ ಯದಲಾಪುರ, ನರೇಶ್, ನಾಗರಾಜ ಗುಮ್ಮದ,ಸಂಜುಕುಮಾರ ಸಾತೋಳಿ, ರಾಜರೆಡ್ಡಿ, ರಾಜಕುಮಾರ ಬಾಸ್ಕರ್, ತುಕಾರಾಮ, ಸಂದೀಪ ರೊಟ್ಟಿ, ಮಹೇಶ ಮತ್ತಿತರರು ಉಪಸ್ಥಿತರಿದ್ದರು. ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರ ಮಾಧ್ಯಮ ಸಂಯೋಜಕ, ಸಹಾಯಕ ನಾಗೇಶ್
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 