ಬೆಳಗಾವಿಯಲ್ಲಿ ಬೃಹತ್ ಉದ್ಯೋಗ ಮೇಳ: 104 ಕಂಪನಿಗಳಿಂದ 19 ಸಾವಿರ ಉದ್ಯೋಗಾವಕಾಶ, ಸಹಸ್ರ, ಸಹಸ್ರ ಜನ ಭಾಗಿ
Huge job fair in Belgaum: 19,000 job opportunities from 104 companies, thousands and thousands of p
ಬೆಳಗಾವಿ 07: ಉದ್ಯೋಗಾಕಾಂಕ್ಷಿ ಯುವಕರಿಗೆ ಹೊಸ ಆಶಾಕಿರಣವಾಗಿ ಬೆಳಗಾವಿಯಲ್ಲಿ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳ ಭರ್ಜರಿಯಾಗಿ ಜರುಗಿತು. ಶಿವಬಸವ ನಗರದ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಡೆದ ಈ ಉದ್ಯೋಗ ಮೇಳದಲ್ಲಿ 104 ಕಂಪನಿಗಳು ಭಾಗವಹಿಸಿ ಸುಮಾರು 19 ಸಾವಿರ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಯಿತು.ಉದ್ಯೋಗ ಮೇಳದ ಹಿನ್ನೆಲೆಯಲ್ಲಿ ಕಾಲೇಜು ಆವರಣದಲ್ಲಿ ಸಾವಿರಾರು ಅಭ್ಯರ್ಥಿಗಳು ನೆರೆದಿದ್ದು, ವಿವಿಧ ಕಂಪನಿಗಳ ಪ್ರತಿನಿಧಿಗಳೊಂದಿಗೆ ನೇರವಾಗಿ ಸಂದರ್ಶನಕ್ಕೆ ಹಾಜರಾದರು.
ಬೆಳಗಾವಿ, ಹುಬ್ಬಳ್ಳಿ ಹಾಗೂ ಬೆಂಗಳೂರು ಸೇರಿದಂತೆ ವಿವಿಧ ನಗರಗಳ ಪ್ರತಿಷ್ಠಿತ ಕಂಪನಿಗಳು ಮೇಳದಲ್ಲಿ ಪಾಲ್ಗೊಂಡು ಎಸ್‌ಎಸ್‌ಎಲ್‌ಸಿ ರಿಂದ ಸ್ನಾತಕೋತ್ತರ ಪದವಿವರೆಗೆ ವಿವಿಧ ಶೈಕ್ಷಣಿಕ ಅರ್ಹತೆಯುಳ್ಳ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ನೀಡಿದವು.ಕಾರ್ಯಕ್ರಮಕ್ಕೆ ಬಿ.ಆರ್. ಪಟಗುಂದಿ, ರವಿ ಬಂಗಾರ್ಪ, ಪ್ರಕಾಶ ದೇಶಪಾಂಡೆ, ಚಿದಾನಂದ, ಯಶವಂತ ಭಾಗ್ಯಶ್ರೀ ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮೇಳಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ನಾಗನೂರು ರುದ್ರಾಕ್ಷಿಮಠದ ಶ್ರೀ ಅಲ್ಲಮಪ್ರಭು ಸ್ವಾಮಿಜೀ ಮಾತನಾಡಿ ಪ್ರತಿಯೊಬ್ಬರೂ ಕೇವಲ ಉದ್ಯೋಗ ಪಡೆಯುವವರಾಗದೇ, ಮುಂದಿನ ದಿನಗಳಲ್ಲಿ ಬೇರೆಯವರಿಗೆ ಉದ್ಯೋಗ ನೀಡುವ ಉದ್ಯಮಿಗಳಾಗಬೇಕು ಎಂದು ಹೇಳಿದರು.
ಉದ್ಯೋಗ ಮೇಳದಲ್ಲಿ ಸಿಕ್ಕ ಅವಕಾಶವನ್ನು ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಬಳಸಿಕೊಂಡರೆ ಭವಿಷ್ಯದಲ್ಲಿ ದೊಡ್ಡ ಸಂಸ್ಥೆಗಳನ್ನು ನಿರ್ಮಿಸಲು ಸಾಧ್ಯ ಎಂದು ತಿಳಿಸಿದರು.ಉತ್ತರ ಶಾಸಕ ಆಸೀಫ್ ಸೇಠ್ ಮಾತನಾಡಿ, ಇಂತಹ ಉದ್ಯೋಗ ಮೇಳಗಳು ಅನೇಕ ಯುವಕರ ಭವಿಷ್ಯವನ್ನು ಬದಲಾಯಿಸುವ ಸಾಮರ್ಥ್ಯ ಹೊಂದಿವೆ. ಉತ್ತರ ಕ್ಷೇತ್ರದ ಹಲವರು ಐಟಿ ವಿದ್ಯಾಭ್ಯಾಸ ಮಾಡಿರುವ ಯುವಕರು ಉದ್ಯೋಗಕ್ಕಾಗಿ ಇತರ ನಗರಗಳಿಗೆ ತೆರಳುತ್ತಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಬುಡಾದಿಂದ 20 ಎಕರೆ ಜಾಗ ಮಂಜೂರುಗೊಳಿಸಿ ಐಟಿ ಪಾರ್ಕ್ ಸ್ಥಾಪಿಸುವ ಕುರಿತು ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.
ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ಅಧಿಕಾರಿಗಳ ಪರಿಶ್ರಮದಿಂದ ಅಲ್ಪ ಸಮಯದಲ್ಲೇ 104 ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿವೆ. ಆನ್‌ಲೈನ್ ಮೂಲಕ ಸುಮಾರು 8 ಸಾವಿರ ಅರ್ಜಿಗಳು ಹಾಗೂ ನೋಂದಣಿಗಳು ದಾಖಲಾಗಿದ್ದು, ಒಟ್ಟು 19 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಈ ಮೇಳ ಆಯೋಜಿಸಲಾಗಿದೆ ಎಂದು ತಿಳಿಸಿದರು.ಒಟ್ಟಾರೆ ಉದ್ಯೋಗಾಕಾಂಕ್ಷಿಗಳಿಂದ ಉತ್ಸಾಹಭರಿತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೇಳವು ಯುವಕರಿಗೆ ಉತ್ತಮ ಉದ್ಯೋಗಾವಕಾಶಗಳ ವೇದಿಕೆಯಾಗಿದ್ದು ಗಮನ ಸೆಳೆದಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 