ಫೆ. 22 ಮತ್ತು 23 ರಂದು ನಗರದಲ್ಲಿ ಬೃಹತ್ ಉದ್ಯೋಗ ಮೇಳ : ಜಿಲ್ಲಾಧಿಕಾರಿ
ಹಾವೇರಿ 24 : ನಗರದಲ್ಲಿ ಫೆಬ್ರುವರಿ 22 ಮತ್ತು 23 ರಂದು ಎರಡು ದಿನಗಳಕಾಲ ಆಯೋಜಿಸಲಾದ ಬೃಹತ್ ಉದ್ಯೋಗ ಮೇಳಕ್ಕೆ ಅಗತ್ಯ ಸಕಲ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಹುಕ್ಕೇರಿಮಠದ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಉದ್ಯೋಗದಾತರಿಗೆ ಅನುಕೂಲರ ವಾತಾವರಣ ನಿರ್ಮಿಸಬೇಕು. ಉದ್ಯೋಗ ಮೇಳ ಯಶಸ್ವಿಯಾಗಲು ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ ಅವರು ಉದ್ಯೋಗ ಮೇಳದ ಕಾರ್ಯಚಟುವಟಿಕೆಗಳಿಗೆ ವಿವಿಧ ಸಮಿತಿಗಳನ್ನು ರಚಿಸಲು ತಿಳಿಸಿದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿಗಳು ಮಾತನಾಡಿ, ಉದ್ಯೋಗದಾತರು ಹಾಗೂ ಉದ್ಯೋಕಾಂಕ್ಷಿಗಳ ನೋಂದಣಿಗಾಗಿ ದೂರವಾಣಿ ಸಂಖ್ಯೆ 08375-249291 ಹಾಗೂ ಇ-ಮೇಲ್ deehaveri@gmail.com ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 