ರೆಡ್ ಕ್ರಾಸ್ ಸಂಸ್ಥೆ ಸಮಾಜದಲ್ಲಿ ಮಾನವೀಯ ಮೌಲ್ಯ ಬಿತ್ತುತ್ತಿದೆ: ಕೆ.ಲೀಲಾವತಿ
ಹಾವೇರಿ08: ರೆಡ್ ಕ್ರಾಸ್ ಸಂಸ್ಥೆ ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಭಿತ್ತುತ್ತಿದೆ ಹಾಗೂ ಕಷ್ಟದಲ್ಲಿರುವವರಿಗೆ, ಬಡವರಿಗೆ, ನಿರ್ಗತಿಕರಿಗೆ ಹಾಗೂ ನೊಂದವರಿಗೆ ನೆರವಾಗುತ್ತಿದೆ. ಈ ಸಂಸ್ಥೆಯೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು ಹಾಗೂ ಯುವ ಜನತೆ ಸ್ವಯಂ ಪ್ರೇರಿತ ರಕ್ತದಾನಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಕೆ.ಲೀಲಾವತಿ ಅವರು ಹೇಳಿದರು.
ಬುಧವಾರ ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ರೆಡ್ ಕ್ರಾಸ್ ಸಂಸ್ಥೆ ಹಾವೇರಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾದ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದಿನ ಕಾಲದಲ್ಲಿ ಯುದ್ಧಗಳು, ಭೂಕಂಪ, ಅತೀ ವೃಷ್ಠಿ ಹಾಗೂ ಅನಾವೃಷ್ಠಿಗಳು ಸಂಭವಿಸಿದ ಸಂದರ್ಭದಲ್ಲಿ ಸರಿಯಾದ ತುತರ್ು ಚಿಕಿತ್ಸೆ ಸಿಗದೆ ಅನೇಕರು ಸಾವೀಗಿಡಾಗುತ್ತಿದ್ದರು. ಅಸಹಾಯಕರಿಗೆ ಹಾಗೂ ಸಂಕಷ್ಟದಲ್ಲಿರುವವರಿಗೆ ನೆರವಾಗಲು ಹಾಗೂ ಅವರ ಕಷ್ಟನೋವುಗಳಿಗೆ ಸ್ಪಂದಿಸಲು ಜಾನ್ ಹೆನ್ರಿ ಡುನಾಂಟ್ ಅವರು ರೆಡ್ ಕ್ರಾಸ್ ಸಂಸ್ಥೆಯನ್ನು ಸ್ಥಾಪಿಸಿದರು. ಈ ಸಂಸ್ಥೆಯು ಇಂದು ಹೆಮ್ಮರವಾಗಿ ಬೆಳೆದು ಭೂಕಂಪ, ಸುನಾಮಿ ಇತರೆ ಪ್ರಾಕೃತಿಕ ಅವಘಡಗಳು ಸಂಭವಿಸಿದ ಸಂದರ್ಭಗಳಲ್ಲಿ ನೋಂದವರಿಗೆ ತುತರ್ಾಗಿ ಸೇವೆ ಒದಗಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾವೇರಿ ಘಟಕದ ಗೌರವಕಾರ್ಯದಶರ್ಿ ಡಾ.ನಿಲೇಶ ಎಂ.ಎನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಗತ್ತಿನಾದ್ಯಂತ ಮೇ 8 ರಂದು ವಿಶ್ವ ರೆಡ್ ಕ್ರಾಸ್ ದಿನ ಆಚರಿಸಲಾಗುತ್ತಿದೆ. ಮಾನವೀಯತೆಯಿಂದ ಶಾಂತಿಯ ಕಡೆಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಈ ಸಂಸ್ಥೆಯನ್ನು ಜಾನ್ ಹೆನ್ರಿ ಡುನಾಂಟ್ ಅವರು ಹುಟ್ಟುಹಾಕಿದರು. ಹೆನ್ರಿ ಡುನಾಂಟ್ ಅವರ ಗೌರವಾರ್ಥವಾಗಿ ಅವರ ಜನ್ಮ ದಿನವನ್ನು ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಕ್ತನಿಧಿ ವೈದ್ಯಾಧಿಕಾರಿ ಡಾ.ಬಸವರಾಜ ತಳವಾರ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ, ನಿವೃತ್ತ ತಹಶೀಲ್ದಾರ ಮಹ್ಮದಹನಿಪ ನದಾಫ್, ಹನುಮಂತಗೌಡ ಗೊಲ್ಲರ, ನಿವೃತ್ತ ಹೆಲ್ತ ಇನ್ಸಪೆಕ್ಟರ್ ಎಫ್.ಆರ್.ನರಗುಂದ ಇತರರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 