ಗದಗ 05: ಪರಿಸರ ರಕ್ಷಣೆಯಾದರೆ ಮನುಕುಲ ಉಳಿಯುತ್ತದೆ. ಈ ನಿಟ್ಟಿನಲ್ಲಿ ಪರಿಸರ ರಕ್ಷಣೆಗಾಗಿ ರಾಜ್ಯಾದ್ಯಂತ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಗದಗ ಜಿಲ್ಲೆಯ 5 ತಾಲೂಕಿನಲ್ಲಿ 1 ಲಕ್ಷ ಸಸಿ ನೆಡುವ ಕಾರ್ಯಕ್ರಮವಿದೆ. ಸಕರ್ಾರದೊಂದಿಗೆ ಸಾರ್ವಜನಿಕರು, ವಿದ್ಯಾಥರ್ಿಗಳೂ ಸಹ ಸಸಿ ನೆಡುವ ಕಾರ್ಯಕ್ರಮಕ್ಕೆ ಕೈಜೋಡಿಸಬೇಕಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ.ಎಸ್. ಸಂಗ್ರೇಶಿ ನುಡಿದರು.
ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯದಲ್ಲಿಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಪರಿಸರ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಹಾಗಣಿ ಮತ್ತು ತಪಸಿ ಎಂಬ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪರಿಸರ ನಾಶದಿಂದ ಭೂಮಿ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದೆ. ಮುಂದಿನ ಪೀಳಿಗೆಗೆ ಪರಿಶುದ್ಧ ವಾಯು, ಜಲ ದೊರಕಿಸಿಕೊಡಲು ಪರಿಸರವನ್ನು ಸಂರಕ್ಷಿಸಬೇಕಾಗಿದೆ. ಆದಕಾರಣ ಅರಣ್ಯ, ಕೆರೆಗಳನ್ನು ನಾವು ಸಂರಕ್ಷಿಸಬೇಕು. ವಿದ್ಯಾಥರ್ಿಗಳು ತಮ್ಮ ಶಾಲಾ ಆವರಣದಲ್ಲಿ ಅಷ್ಟೇ ಅಲ್ಲದೇ ಮನೆ ಆವರಣದಲ್ಲಿಯೂ ಗಿಡ ನೆಡಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಗದಗ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಪಣ ತೊಡಬೇಕು ಎಂದು ಜಿ.ಎಸ್. ಸಂಗ್ರೇಶಿ ನುಡಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಆರ್.ಎಸ್. ನಾಗಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಗಿಡ ನೆಡುವ ಕಾರ್ಯಕ್ರಮ ಕುರಿತು ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಮುಂದಿನ ಪೀಳಿಗೆಗೆ ನೆಡು ತೋಪು ಮಾಡಬೇಕು. ಜಲ , ಗಾಳಿ, ಮಣ್ಣು ರಕ್ಷಣೆ ಇಂದಿನ ಅಗತ್ಯವಾಗಿದೆ. ಪ್ರತಿಯೊಬ್ಬರೂ ಕಚೇರಿ ಆವರಣದಲ್ಲಿ ಹಾಗೂ ಮನೆ ಆವರಣದಲ್ಲಿ ಗಿಡ ನೆಟ್ಟು ಬೆಳೆಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನರಶಿಂಸಾ ಎಂ.ವಿ, ಕೌಟುಂಬಿಕ ನ್ಯಾಯಾಲಯ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಪಿ.ಜಿ. ಚೆಲುವಮೂತರ್ಿ , ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಎಸ್.ಜಿ. ಸಲಗರೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ , ತಹಶೀಲ್ದಾರರಾದ ಶ್ರೀನಿವಾಸ ಮೂತರ್ಿ ಕುಲಕಣರ್ಿ , ಜಿಲ್ಲಾ ಆಯುಷ ಆಧಿಕಾರಿ ಡಾ. ಸುಜಾತಾ ಪಾಟೀಲ, ಕನರ್ಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ. ರುದ್ರೇಶ , ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿ ಕೆಳದಿಮಠ , ಎಂ.ಎ. ರಡ್ಡೇರ , ವೈ.ಡಿ. ತಳವಾರ , ಪರಿಸರ ಇಲಾಖೆಯ , ಅರಣ್ಯ ಇಲಾಖೆಯ ಸಿಬ್ಬಂದಿಗಳು, ಶಾಲಾ ಶಿಕ್ಷಕ ವೃಂದದವರು, ವಿದ್ಯಾಥರ್ಿ ವಿದ್ಯಾಥರ್ಿನಿಯರು ಹಾಜರಿದ್ದರು.
ಕು. ಸ್ನೇಹಾ ಮತ್ತು ಸಿಂಧು ಪ್ರಾಥರ್ಿಸಿದರು. ಬಿ.ಎಮ್. ಕುಕನೂರ ಸರ್ವರನ್ನು ಸ್ವಾಗತಿಸಿದರು. ಮನೋಹರ ಚಿತ್ತವಾಡಗಿ ವಂದಿಸಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳಾ ವಿ.ಎಚ್. ಕಾರ್ಯಕ್ರಮ ನಿರೂಪಿಸಿದರು.