ಮಾನವ ಕಳ್ಳ ಸಾಗಾಣಿಕೆ ಸಮಾಜಕ್ಕೆ ಅಂಟಿದ ಶಾಪ : ಅಧ್ಯಕ್ಷ ಟಿ.ಎನ್‌. ಇನವಳ್ಳಿ

ಮಾನವ  ಕಳ್ಳ ಸಾಗಾಣಿಕೆ ಸಮಾಜಕ್ಕೆ ಅಂಟಿದ ಶಾಪ : ಅಧ್ಯಕ್ಷ ಟಿ.ಎನ್‌. ಇನವಳ್ಳಿ Human trafficking is a curse on society: President T.N. Inavalli

ಮಾನವ  ಕಳ್ಳ ಸಾಗಾಣಿಕೆ ಸಮಾಜಕ್ಕೆ ಅಂಟಿದ ಶಾಪ : ಅಧ್ಯಕ್ಷ ಟಿ.ಎನ್‌. ಇನವಳ್ಳಿ 

  ಬೆಳಗಾವಿ 29: ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಟಿ.ಎನ್‌. ಇನವಳ್ಳಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡುತ್ತ ಮಾನವ  ಕಳ್ಳ ಸಾಗಾಣಿಕೆ ಸಮಾಜಕ್ಕೆ ಅಂಟಿದ ಶಾಪ ಈ ಅನಿಷ್ಠ ಪದ್ದತಿಯನ್ನು ಎಲ್ಲ ಇಲಾಖೆಗಳು ಸಹಯೋಗದೊಂದಿಗೆ ಸಮಾಜದ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸಿ ತಡೆಗಟ್ಟಬೇಕಾಗಿದೆ ಎಂದು ಕರೆ ನೀಡಿದರು. 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಳಗಾವಿ, ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಪೋಲಿಸ್ ಇಲಾಖೆ,  ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬೆಳಗಾವಿ,ಹಾಗೂ ಸ್ಪಂದನಾ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ (ಜು.28) ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮ ಹಮ್ಮಿಕೂಳ್ಳಲಾಯಿತು. 

ಜಿಲ್ಲಾ  ನ್ಯಾಯಾಧೀಶರು ಹಾಗೂ ಖಾಯಂ ಜನತಾ ನ್ಯಾಯಾಲಯ ಅಧ್ಯಕ್ಷ ರವೀಂದ್ರ ಪಲ್ಲೇದ ಅವರು ಖಾಯಂ ಜನತಾ ನ್ಯಾಯಾಲಯದ ಮಹತ್ವವನ್ನು ತಿಳಿಸಿ ಸಾರ್ವಜನಿಕರು ಇದರ ಉಪಯೋಗ ಪಡೆಯುವಂತೆ ಸೂಚಿಸಿದರು. 

ಹಲವಾರು ಕಾರಣಗಳಿಂದ ಮಹಿಳೆಯರನ್ನು ಮಕ್ಕಳನ್ನು ಕಳ್ಳ ಸಾಗಾಣಿಕೆ ಮಾಡಿ ಲೈಂಗಿಕ ಕ್ರಿಯೆಯಲ್ಲಿ ತೋಡಗಿಸುವುದು, ಮಕ್ಕಳನ್ನು ಬಾಲಕಾರ್ಮಿಕತೆಗೆ ದೂಡಿ ಮಕ್ಕಳ ಅಂಗಾಂಗ ತೆಗೆದು ಭಿಕ್ಷೆ ಬೇಡಲು ಹಚ್ಚುವುದು ಹೀಗೆ ಮಹಿಳೆ ಮತ್ತು ಮಕ್ಕಳನ್ನು ಸಾಗಾಣಿಕೆ ಮೂಲಕ ಬೇರೆ ಬೇರೆ ದೇಶಗಳಿಗೆ, ರಾಜ್ಯಗಳಿಗೆ ಸಾಗಾಣಿಕೆ ಮಾಡುವುದು ಪತ್ರಿಕೆಗಳಲ್ಲಿ ವರದಿಯಾಗುತ್ತಿದ್ದು ಇಂತಹ ಕೃತ್ಯಗಳನ್ನು ತಡೆಗಟ್ಟಲು ಸಮುದಾಯದಲ್ಲಿ ಜನ ಜಾಗೃತಿ ಮಾಡುವ ಸಲುವಾಗಿ ಬೃಹತ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದು, ಈ ಜಾಥಾ ಮೂಲಕ ಜನರಲ್ಲಿ ಮಾನವ ಕಳ್ಳಸಾಗಾಣಿಕೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಹಾಗೂ ಮಕ್ಕಳ ಮಾರಾಟ, ಸಾಗಾಣಿಕೆ, ಬಾಲ್ಯವಿವಾಹ, ಬಾಲಕಾರ್ಮಿಕ, ಮಕ್ಕಳು ಕಂಡುಬಂದರೆ ಮಕ್ಕಳ ಸಹಾಯವಾಣಿ 1098 ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ 15100 ಹಾಗೂ ಪೊಲೀಸ್ ತುರ್ತು ಸಹಾಯವಾಣಿ ಸಂ. 112ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಆಗಮಿಸಿದ  ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ ತಿಳಿಸಿದರು.  

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮಾರ್ಗದರ್ಶನದಂತೆ ಈ ಕಾರ್ಯಕ್ರಮ ಆಯೋಜಿಸಲಾಗಿದು, ಪಾಲಕರು ಮಕ್ಕಳಲ್ಲಿ ನೈತೀಕ ಮೌಲ್ಯ ಬೇಳೆಸುವುದರ ಮೂಲಕ ಮಕ್ಕಳನ್ನು ದೇಶದ ಸಂಪತ್ತನಾಗಿ ಮಾಡುವುದು ಪಾಲಕರ ಕರ್ತವ್ಯವಾಗಿದ್ದು. ಸಮಾಜದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕ, ಬಾಲ ಭಿಕ್ಷಾಟನೆ ತಡೆಗಟ್ಟುವುದು ಸಾಮೂಹಿಕ ಹೊಣೆಗಾರಿಕೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿದೇಶಕ ಎಂ.ಎನ್‌.ಚೇತನ ಕುಮಾರ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು  ವಹಿಸಿ ಮಾತನಾಡಿದರು.   

ಹಿರಿಯ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿಗಳು, ವಿಶೇಷ ಮಕ್ಕಳ ಪೋಲಿಸ್ ಘಟಕ ಹಾಗೂ ಸಹಾಯಕ ಪೋಲಿಸ್ ಆಯುಕ್ತ ಸದಾಶಿವ ಆರ್ ಕಟ್ಟಿಮನಿ ಅವರು ಮಾತನಾಡಿ  ಮಾನವ ಕಳ್ಳ ಸಾಗಾಣಿಕೆ ಕುರಿತು ನಗರದ ಪ್ರಮುಖ ಬೀದಿಗಳಲ್ಲಿ ಘೋಷಣೆ ಕೋಗುತ್ತಾ ಜನರಲ್ಲಿ ಜಾಗೃತಿ ಮೂಡಿಸಿದ್ದು ಅರ್ಥಪೂರ್ಣವಾಗಿರುತ್ತದೆ. ಮಹಿಳೆ ಮತ್ತು ಮಕ್ಕಳಿಗೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ಪೋಲಿಸ್ ತುರ್ತು ಸಹಾಯವಾಣಿ 112 ಹಾಗೂ ಮಕ್ಕಳ ಸಹಾಯವಾಣಿ 1098 ಗೆ ಕರೆಮಾಡಲು ತಿಳಿಸಿದರು.  

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಅವರು ಮಾನವ ಕಳ್ಳಸಾಗಾಣಿ ವಿರೋಧಿ ದಿನದ ಅಂಗವಾಗಿ ಪ್ರಮಾಣವಚನ ಬೋದಿಸಿದರು.  

ಮಾನವ ಕಳ್ಳ ಸಾಗಾಣಿಕೆ ಹಾಗೂ ಮಹಿಳೆ ಮತ್ತು ಮಕ್ಕಳ ಮಾರಾಟ, ಸಾಗಾಣಿಕೆ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ದತಿ ವಿರೋದಿ ಘೋಷಣೆ ಕೂಗುತ್ತಾ ಬೃಹತ ಜಾಥಾ ಕಾರ್ಯಕ್ರಮ ಜಿಲ್ಲಾನ್ಯಾಯಾಲಯದ ಆವರಣದಿಂದ ಪ್ರಾರಂಭವಾಗಿ ಚೆನ್ನಮ್ಮಾ ಸರ್ಕಲ್, ಕಾಕತಿವೇಸ್, ಶನಿವಾರ ಕೂಟ್, ಖಡೇಬಜಾರ, ಕೇಂದ್ರ ಬಸ್ಸ ನಿಲ್ದಾಣದಲ್ಲಿ ಅಂತ್ಯಗೊಳಿಸಲಾಯಿತು.ಕಾರ್ಯಕ್ರಮದಲ್ಲಿ  ನೋಡಲ್ ಅಧಿಕಾರಿಗಳು ವಿಶೇಷ ಮಕ್ಕಳ ಪೋಲಿಸ್ ಘಟಕ ಹಾಗೂ ಹೆಚ್ಚುವರಿ ಪೋಲಿಸ್ ಅಧೀಕ್ಷ ಶೃತಿ ಎನ್ ಎಸ್ (ಆಯ್‌ಪಿಎಸ್), ಸಹಾಯಕ ಪೊಲೀಸ್ ಆಯುಕ್ತ ರಘು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಡಾ. ಪರ್ವಿನ್, ಬೆಳಗಾವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು ಕಾಂಚನಾ ಅಮಟೆ,  ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ವಿ.ರಾಮಮೂರ್ತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಮಿತ್ರಾ,  ಬೆಳಗಾವಿ ಗ್ರಾಮೀಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದಿ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ,, ಮಕ್ಕಳ ಸಹಾಯವಾಣಿ ,ಸ್ಪಂದನಾ ಸಂಸ್ಥೆ ಸಿಬ್ಬಂದಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಗ್ರಾಮೀಣ ಮತ್ತು ನಗರ ಕಚೇರಿ ಸಿಬಂದ್ದಿಗಳು ಹಾಗೂ ಮೆಲ್ವಿಚ್ಚಾರಕರು, ಅಂಗನವಾಡಿ ಶಿಕ್ಷಕಿಯರು,  ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ವಿ.ರಾಮಮೂರ್ತಿ  ಉಪಸ್ಥಿತರಿದ್ದರು.