ರಾಜಕೀಯ ಸೇರು ಉದ್ದೇಶ ನನಗೆ ಇಲ್ಲ: ಚೆನ್ನಣ್ಣನವರ್
ಲೋಕದರ್ಶನ ವರದಿ
ಕೊಪ್ಪಳ 13: ಯುವಕರಿಗೆ ಸ್ಫೂತರ್ಿ ತುಂಬುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವುದರ ಹಿಂದೆ ಯಾವುದೇ ಉದ್ದೇಶವಿಲ್ಲ. ಮುಂದೆ ರಾಜಕೀಯ ಸೇರುವ ಉದ್ದೇಶವೂ ಇಲ್ಲವೆಂದು ಡಿಸಿಪಿ ರವಿ ಡಿ. ಚೆನ್ನಣ್ಣನವರ್ ಸ್ಪಷ್ಟಪಡಿಸಿದ್ದಾರೆ.
ಅವರು ತಾಲೂಕಿನ ಅಳವಂಡಿ ಗ್ರಾಮಕ್ಕೆ ಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಬಲಿಷ್ಠ ರಾಷ್ಟ್ರ ನಿಮರ್ಾಣದಲ್ಲಿ ಯುವಕರ ಪಾತ್ರ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ಆಗಮಿಸಿದ ವೇಳೆ ಅವರು ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನೂ ಇದೇ ಭಾಗದವನು, ಯುವಕರಿಗೆ ಸ್ವಾಮಿ ವಿವೇಕಾನಂದರು ''ಏಳಿ ಎದ್ದೇಳಿ ಗುರಿ ತಲುಪುವವರಿಗೆ ನಿಲ್ಲದಿರಿ'' ಅಂತಾ ಹಿಂದೆಯೇ ಕರೆ ನೀಡಿದ್ದರು. ಅದನ್ನು ಪಾಲಿಸಬೇಕು. ಶಿಕ್ಷಣವೇ ಮೊದಲ ಆದ್ಯತೆಯಾಗಬೇಕು. ಯುವಕರು ಹೆಚ್ಚಿನ ಸಮಯವನ್ನು ಓದಿಗಾಗಿ ವ್ಯಯಿಸಬೇಕು ಎಂದು ಸಲಹೆ ನೀಡಿದರು ಡಿಸಿಪಿ ಚೆನ್ನಣ್ಣನವರ್.
ಅಲ್ಲದೆ ಸಾಮಾಜಿಕ ಜಾಲತಾಣಗಳಿಂದ ಯುವ ಜನಾಂಗ ದೂರವಿರಬೇಕು, ಹಾಗಿದ್ದರೆ ಮಾತ್ರ ತಮ್ಮ ಗುರಿ ತಲುಪಲು ಸಾಧ್ಯ ಎಂದು ಯುವಕರಿಗೆ ಕಿವಿಮಾತನ್ನು ಅವರು ಹೇಳಿದರು. ಈ ಸಂದರ್ಭದಲ್ಲಿ ಅಳವಂಡಿ ಗ್ರಾಮದ ವಿದ್ಯಾಥರ್ಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 