ಐಸಿಸಿ ಸಭೆ ಕರೆದು, 2ನೇ ಬೆಳೆಗೆ ನೀರು ಒದಗಿಸುವಂತೆ ಹಕ್ಕೋತ್ತಾಯ : ಬಂದ್ ಹಿನ್ನಲೆ ಮುಚ್ಚಿನ ಅಂಗಡಿ ಮುಂಗಟ್ಟು
ICC calls meeting, demands water for 2nd crop: Shops closed due to bandh
ಕಂಪ್ಲಿ 03: ಮುನಿರಾದಾಬ್‌ನ ಕೆಂದ್ರ ಕಚೇರಿಯಲ್ಲಿ ಐಸಿಸಿ ಸಭೆ ಕರೆದು, ರೈತರ 2ನೇ ಬೆಳೆಗೆ ನೀರು ಒದಗಿಸಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ, ತಾಲೂಕು, ನಗರ ಘಟಕ ನೇತೃತ್ವದಲ್ಲಿ ವಿವಿಧ ಸಂಘ-ಸಂಸ್ಥೆಗಳ ಬೆಂಬಲದೊಂದಿಗೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆಯೊಂದಿಗೆ ಕಂಪ್ಲಿ ತಾಲೂಕು ಬಂದ್ ಯಶಸ್ವಿಗೊಂಡಿತು. ಇಲ್ಲಿನ ಉದ್ಭವ ಗಣೇಶ ದೇವಸ್ಥಾನದಿಂದ ಆರಂಭಗೊಂಡ ಬೃಹತ್ ಪ್ರತಿಭಟನೆ, ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆಗೆ ಸಾಕ್ಷಿಯಾಯಿತು. ಕೆಲ ಒತ್ತು ರಸ್ತೆ ಸಂಚಾರ ತಡೆದು ಪ್ರತಿಭಟನೆಯೊಂದಿಗೆ ಆಕ್ರೋಶ ವ್ಯಕ್ತಪಡಿಸಿದರು. ತದನಂತರ ತಹಶೀಲ್ದಾರ್ ಜೂಗಲ್ ಮಂಜುನಾಯಕಗೆ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಬಿ.ವಿ.ಗೌಡ ಮಾತನಾಡಿ, ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಸಭೆಯ ತೀರ್ಮಾಣದಂತೆ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಐಸಿಸಿ ಸಭೆ ಕರೆದು, ಗೇಟ್ ಅಳವಡಿಕೆ ಹಾಗೂ ಬೇಸಿಗೆ ನೀರು ಸಂಬಂಧಿಸಿದಂತೆ ರೈತರೊಂದಿಗೆ ಚರ್ಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲುವ ಭರವಸೆ ನೀಡಿದ್ದು, ಆದ್ದರಿಂದ ಕೂಡಲೇ ಸರ್ಕಾರ ಮತ್ತು ಅಧಿಕಾರಿಗಳು ಆದಷ್ಟು ಬೇಗ ಐಸಿಸಿ ಸಭೆ ಕರೆದು, 2ನೇ ಬೆಳೆಗೆ ನೀರು ಒದಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನದಲ್ಲಿ ಉಗ್ರ ಹೋರಾಟಕ್ಕೆ ರೈತರು ಅಣಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ವಿರೇಶ, ನಗರ ಘಟಕ ಅಧ್ಯಕ್ಷ ತಿಮ್ಮಪ್ಪನಾಯಕ, ರೈತ ಮುಖಂಡರಾದ ಕೆ.ಎಂ.ಹೇಮಯ್ಯಸ್ವಾಮಿ, ಎ.ಸಿ.ದಾನಪ್ಪ, ಕೊಟ್ಟೂರು ರಮೇಶ, ಆನಂದರೆಡ್ಡಿ ಅಳ್ಳಳ್ಳಿ ವಿರೇಶ, ಕಡೆಮನೆ ಪಂಪಾಪತಿ, ಇಟಗಿ ಬಸವರಾಜಗೌಡ, ಬಿ.ನಾರಾಯಣಪ್ಪ, ಎಂ.ಸುಧೀರ್, ಡಿ.ಮುರಾರಿ, ಸಿ.ಡಿ.ಮಹಾದೇವ, ಎನ್.ಗಂಗಣ್ಣ, ಜಡೆಪ್ಪ ಸೇರಿದಂತೆ ಅನೇಕರಿದ್ದರು. ಡಿವೈಎಸ್‌ಪಿ ಪ್ರಸಾದ್ ಗೋಖುಲೆ, ಪಿಐ ಕೆ.ಬಿ.ವಾಸುಕುಮಾರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರಿ್ಡಸಲಾಗಿತ್ತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 