ಮಕ್ಕಳಲ್ಲಿಯ ಸುಪ್ತ ಪ್ರತಿಭೆಯನ್ನು ಗುರುತಿಸಿ: ಮೇದಾರ
ಬೆಳಗಾವಿ: ಮಕ್ಕಳಲ್ಲಿಯ ಸುಪ್ತ ಪ್ರತಿಭೆಯನ್ನು ಗುರುತಿಸಿ ಅವಕಾಶ ಒದಗಿಸಲು ಮಕ್ಕಳ ಹಬ್ಬ ಒಂದು ಉತ್ತಮ ವೇದಿಕೆಯಾಗಿದೆ ಎಂದ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಎಂ.ಎಸ್.ಮೇದಾರ ಅವರು ಹೇಳಿದರು.
ಮುಚ್ಚಂಡಿ ಕ್ಲಸ್ಟರ್ ಮಟ್ಟದ ಮಕ್ಕಳ ವಿಜ್ಞಾನ ಹಬ್ಬ (ಡಿ.11) ಸಂದರ್ಭದಲ್ಲಿ ಅವರು ಮಾತನಾಡಿದರು. ಪ್ರಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್. ಪಿ.ಜುಟ್ಟನವರ ಅವರು ವಿವಿಧ ವೇಷಭೂಷಣಗಳಿಂದ ಕೂಡಿದ ಮಕ್ಕಳು ಮತ್ತು ಅಲಂಕಾರಿಕ ಚಕ್ಕಡಿ ಟ್ರ್ಯಾಕ್ಟರಗಳ ಮೆರವಣಿಗೆಗೆ ಚಾಲನೆ ನೀಡಿದರು.
ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಅತ್ಯಂತ ಅದ್ದೂರಿಯಾಗಿ ನಡೆಯಿತು. ನಂತರ ಗ್ರಾ.ಪಂ.ಅಧ್ಯಕ್ಷರಾದ ಅಶೋಕ ಮೋದಗೇಕರ್ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟನೆ ನಡೆಯಿತು. ಅಕ್ಷರ ದಾಸೋಹದ ಸಹಾಯಕ ನಿದರ್ೇಶಕರಾದ ಆರ್. ಸಿ.ಮುದಕನ ಗೌಡರ ಮತ್ತು ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಜಯಕುಮಾರ ಹೆಬಳಿ ಮಾತನಾಡಿ, ಸರಕಾರಿ ಶಾಲೆಗಳ ಸಬಲೀಕರಣ ಮತ್ತು ಸರಕಾರಿ ಶಾಲೆಗಳಲ್ಲಿ ಉತ್ತಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಹೇಳಿದರು.
ಕಾರ್ಯಕ್ರಮದಲ್ಲಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಯಿತು. ಎಮ್ .ಎಸ್.ರೊಟ್ಟಿ ಕಾರ್ಯಕ್ರಮ ನಿರೂಪಿಸಿದರು, ಆರ್. ಎ.ಮೋದಗೇಕರ ವಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಲ್ಲವ್ವ ಬುಡ್ರಿ, ತಾಲೂಕಾ ಪಂಚಾಯತ್ ಸದಸ್ಯರಾದ ಸಿದ್ದಪ್ಪ ಮೊದಗೇಕರ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಅಶೋಕ್ ಗುತ್ತಿ ಮತ್ತು ಲಕ್ಷ್ಮಿ ವಣ್ಣೂರ, ಪ್ರಧಾನ ಗುರುಗಳು ಶಿಕ್ಷಕರು, ಪಾಲಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.