ಬೆಳೆ ಸಮೀಕ್ಷೆ ವೈಜ್ಞಾನಿಕ ಮಾದರಿಯಲ್ಲಿ ಪರಿಗಣಿಸದಿದ್ದರೆ
If crop survey is not considered in a scientific model
ಬೆಳೆ ಸಮೀಕ್ಷೆ ವೈಜ್ಞಾನಿಕ ಮಾದರಿಯಲ್ಲಿ ಪರಿಗಣಿಸದಿದ್ದರೆ
‘ರಾಣೇಬೆನ್ನೂರು ಬಂದ್’ಗೆ ಕರೆ: ರವೀಂದ್ರಗೌಡ ಎಚ್ಚರಿಕೆರಾಣೇಬೆನ್ನೂರು 11: ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ನಿರಂತರ ಸುರಿದ ಮಳೆಗೆ ಅಪಾರ ವೆಚ್ಚಮಾಡಿ ಬೆಳೆಸಿದ ಬೆಳೆಗಳು ಸಂಪೂರ್ಣ ನಾಶವಾಗಿದ್ದು ಕೂಡಲೇ ತಾಲೂಕಿನ ಎಲ್ಲಾ ಭಾಗಗಳಲ್ಲಿ ಬೆಳೆ ಸಮೀಕ್ಷೆ ಮಾಡಿ ನಾಶವಾದ ಬೆಳೆಗಳಿಗೆ ವೈಜ್ಞಾನಿಕ ಮಾದರಿಯಲ್ಲಿ ಪರಿಹಾರ ವಿತರಿಸದಿದ್ದರೆ ಮುಂದೆ ‘ ರಾಣೇಬೆನ್ನೂರು ಬಂದ್’ ಗೆ ಕರೆ ನೀಡಲಾಗುವುದು ಎಂದು ರೈತ ಮುಖಂಡ, ಪ್ರಗತಿಪರ ಚಿಂತಕ ರವೀಂದ್ರಗೌಡ ಎಫ್. ಪಾಟೀಲ ಸರಕಾರಕ್ಕೆ ಎಚ್ಚರಿಕೆ ನೀಡಿದರು.
ಅವರು ಇಂದು ‘ಹೆಡಿಯಾಲ್ ಹತ್ತಿರ ನಿರಂತರ ಮಳೆಗೆ ನಾಶವಾದ ಬೆಳೆ ಸಮೀಕ್ಷೆಯಲ್ಲಿ ಜಿಲ್ಲಾಡಳಿತ ರಾಣೇಬೆನ್ನೂರು ತಾಲೂಕನ್ನು ಕಡೆಗಣಿಸಿರುವುದನ್ನು ಖಂಡಿಸಿ ಸಮಗ್ರ ತಾಲೂಕಿನ ಎಲ್ಲಾ ಭಾಗಗಳಲ್ಲಿ ಬೆಳೆ ನಾಶವಾದ ಬಗ್ಗೆ ಸಮೀಕ್ಷೆ ಮಾಡಿ ಸರಕಾರಕ್ಕೆ ವರದಿ ಕಳುಹಿಸಿ ವೈಜ್ಞಾನಿಕ ಮಾದರಿಯಲ್ಲಿ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಹರಿಹರ-ಸಮ್ಮಸ್ಸಗಿ ರಾಜ್ಯ ಹೆದ್ದಾರಿ ತಡೆದು ನಡೆಸಿದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅವರು ಜಿಲ್ಲಾಡಳಿತ ಕೇವಲ ನಾಲ್ಕು ಗೋಡೆಗಳ ಮಧ್ಯ ಕುಳಿತು ಗೂಗಲ್ ಮುಖಾಂತರ ರಾ್ಯಡಮ್ ಬಳಸಿ ಖುದ್ದು ಪರೀಶೀಲನೆ ಮಾಡದೆ ರಾಣೇಬೆನ್ನೂರು ತಾಲೂಕಿನಲ್ಲಿ ಬೆಳೆ ನಾಶವಾಗಿಲ್ಲ ಕೇವಲ 14ಅ ಮಾತ್ರ ಬೆಳೆ ನಾಶವಾಗಿದೆ ಅಂತವರು ಮಾತ್ರ ಅರ್ಜಿ ಸಲ್ಲಿಸಬಹುದು ಅಂತಾ ಬೇಜವಾಬ್ದಾರಿಯಿಂದ ವರ್ತಿಸುವುದು ಸರಿಯಾದ ಕ್ರಮವಲ್ಲ, ರೈತಾಪಿವರ್ಗ ಅತೀವೃಷ್ಠಿ, ಅನಾವೃಷ್ಠಿ, ಕೊರೊನಾ, ಲಾಕ್‌ಡೌನ್‌ನಿಂದ ಆರ್ಥಿಕವಾಗಿ ಬಳಲಿ ಬೆಂಡಾಗಿದೆ. ಇಂತಹ ಸಂದರ್ಭದಲ್ಲಿ ಜಿಲ್ಲಾಡಳಿತ ರೈತಾಪಿ ವರ್ಗದ ಮೇಲೆ ತೋರುತ್ತಿರುವ ನಿರ್ಲಕ್ಷ್ಯ ಸಲ್ಲದು ಎಂದರು.
ರಾಣೇಬೆನ್ನೂರು ತಾಲೂಕಿನಾದ್ಯಾಂತ ಕಷ್ಟಪಟ್ಟು ಬೆಳೆದ ಬೆಳೆಗಳು ನಾಶವಾಗಿದ್ದು ಕೂಡಲೇ ಪ್ರಾಮಾಣಿಕವಾಗಿ ಅಧಿಕಾರಿಗಳ ಜಂಟಿ ಸಮೀತಿ ಮಾಡಿ ಬೆಳೆ ಸಮೀಕ್ಷೆ ಮಾಡಿಸಿ ವೈಜ್ಞಾನಿಕ ಮಾದರಿಯಲ್ಲಿ ಈಗಿನ ಮಾರುಕಟ್ಟೆ ದರದ ರೂಪದಲ್ಲಿ ಬೆಳೆನಷ್ಟ ಪರಿಹಾರ ದೊರೆಯುವಂತೆ ಸರಕಾರಕ್ಕೆ ಮಾಹಿತಿ ನೀಡಿ ಶೀಘ್ರ ಪರಿಹಾರ ವಿತರಿಸುವ ವ್ಯವಸ್ಥೆ ಮಾಡಬೇಕೆಂದು ತಾಲೂಕಿನ ನೊಂದ ರೈತರ ಪರವಾಗಿ ವಿನಂತಿಸಿದರಲ್ಲದೆ ನಿರ್ಲಕ್ಷ್ಯ ವಹಿಸಿದರೆ ‘ ರಾಣೇಬೆನ್ನೂರು ಬಂದ್’ ಕರೆ ನೀಡಲಾಗುವುದೆಂದರು. ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಆರ್.ಎಚ್. ಭಗವಾನ ರೈತರನ್ನು ಉದ್ದೇಶಿಸಿ ಮಾತನಾಡಿ ಶೀಘ್ರ ಬೆಳೆ ಸಮಿಕ್ಷೆ ಮಾಡಲಾಗುವುದೆಂದು ಭರವಸೆ ನೀಡಿದರು.
ರೈತ ಮುಖಂಡರಾದ ಪರ್ವತಗೌಡ ಕುಸಗೂರು, ಮಂಜಣ್ಣ ಲಿಂಗದಹಳ್ಳಿ, ಶೇಖಣ್ಣ ಬಿಲ್ಲಹಳ್ಳಿ, ರಂಗಪ್ಪ ಪೂಜಾರ, ಚೌಡಪ್ಪ ಮಲ್ಲಾಡದ, ಚನ್ನಪ್ಪ ರಡ್ಡೇರ, ಎಸ್.ಕೆ. ಬಣಕಾರ, ರೈತ ಮಹಿಳಾ ಮುಖಂಡರಾದ ಚಂದ್ರಮ್ಮ ಎನ್. ಮಾಗನೂರು, ಶೈಲಕ್ಕ ಕೊಟ್ಟದ, ಗೌರಮ್ಮ ಬೇವಿನಹಳ್ಳಿ, ಶೈಲಮ್ಮ ಅಂಗಡಿ ಮಾತನಾಡಿದರು. 500 ಕ್ಕೂ ಹೆಚ್ಚು ರೈತ ಮಹಿಳೆಯರೇ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಗ್ರಾಮೀಣ ಸಿ.ಪಿ.ಐ. ಸಿದ್ದೇಶ ಹಲಗೇರಿ, ಪಿ.ಎಸ್.ಐ. ಪರಶುರಾಮ ಲಮಾಣಿ ಸೂಕ್ತ ಪೊಲೀಸ್ ಬಂದೋಬಸ್ತ ಒದಗಿಸಿದ್ದರು. ಸಾವಿರಾರು ರೈತರು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 