ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಿದರೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುತ್ತಾರೆ
ಗದಗ 08 : ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಷ್ಠೆ ಅಲ್ಲ, ದೇಶದಲ್ಲಿ ಕೂಡ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಪದವಿ ಪಡೆದವರು, ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಹ ಉದ್ಯೋಗವಿಲ್ಲದೆ ಪರದಾಡುತ್ತಿದ್ದಾರೆ. ಇದಕ್ಕೆ ಕೌಶಲ್ಯದ ಕೊರತೆ ಮುಖ್ಯ ಕಾರಣವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಸಂಜಯ ಶೆಟ್ಟಣ್ಣವರ ಅವರು ಹೇಳಿದರು ಅವರು ನಗರದ ಕನಕ ಭವನದಲ್ಲಿ ಶನಿವಾರ ಡಿ. ದೇವರಾಜಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಕಾಳಿದಾಸ ಶಿಕ್ಷಣ ಸಮಿತಿಯ ಸಂಯುಕ್ತಾಶ್ರಯದಲ್ಲಿ “ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಅಲ್ಪಾವಧಿ ಕೋರ್ಸಗಳ ತರಬೇತಿ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದರು. ಕೌಶಲ್ಯದ ಕೊರತೆಯಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ನಿರುದ್ಯೋಗಿ ಗಳಾಗಿದ್ದಾರೆ. ಇವರಲ್ಲಿ ಹಿಂದುಳಿದ ವರ್ಗದವರು,ದಲಿತರು, ಶೋಷಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಸ್ವಾವಲಂಬಿ ಬದುಕು ನಡೆಸಲು ಮಾರ್ಗದರ್ಶನ ನೀಡಬೇಕಾಗಿದೆ. “ಪುರುಷಂ ಉದ್ಯೋಗ ಲಕ್ಷಣಂ” ಎನ್ನುವಂತೆ ಪ್ರತಿಯೊಬ್ಬರಿಗೂ ಒಂದು ಉದ್ಯೋಗ ಇರಬೇಕು. ಈ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಯುವಕ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಕೌಶಲ್ಯ ತರಬೇತಿಯನ್ನು ಪಡೆದು ಸ್ವಉದ್ಯೋಗವನ್ನು ಆರಂಭಿಸುವ ಮೂಲಕ ಸ್ವಾವಲಂಭಿ ಬದುಕನ್ನು ನಡೆಸಬೇಕು. ಕಾಳಿದಾಸ ಶಿಕ್ಷಣ ಸಮಿತಿಯುಉತ್ತಮ ಸಂಸ್ಥೆಯಾಗಿದ್ದು ಸಾಕಷ್ಟು ಸಂಪನ್ಮೂಲಗಳು, ಶಿಕ್ಷಕರ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಸಮಿತಿಯು ಜಿಲ್ಲಾ ವಾಣಿಜ್ಯೋಧ್ಯಮ ಸಂಸ್ಥೆ ಹಾಗೂ ಕೈಗಾರಿಕೋದ್ಯಮಗಳು ಸಹಭಾಗಿತ್ವದಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಗಳನ್ನು ಸೃಷ್ಟಿಗಳನ್ನು ಮಾಡಬಹುದು. ಯುವಕ ಯುವತಿಯರು ದೊರೆತಿರುವ ಅವಕಾಶಗಳನ್ನು ಗಂಭೀರವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರಅವರು ಮಾತನಾಡಿ, ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದೆ.ಅವುಗಳನ್ನು ಸದುಪಯೋಗ ಪಡೆದುಕೊಂಡು ಯೋಜನೆಗಳನ್ನು ಸಾರ್ಥಕ ಪಡಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಉದ್ಯೋಗದಲ್ಲಿ ತೊಡಗಿಸಿಕೊಂಡರೆ ಸ್ವಾವಲಂಭಿಯಾಗಿ ಬದುಕಲು ಸಾಧ್ಯವಾಗುತ್ತದೆ. ದಿನನಿತ್ಯದ ಜೀವನದಲ್ಲಿ ಹಾಸು ಹೊಕ್ಕಿರುವ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವದರ ಮೂಲಕ ಈ ತರಬೇತಿಯನ್ನು ಪಡೆದು ಸ್ವಉದ್ಯೋಗ ಆರಂಭಿಸಬೇಕು ಎಂದು ಹೇಳಿದರು. ದೇವರಾಜು ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕಾಂತರಾಜು ಅವರು ಮಾತನಾಡಿ, ಸ್ವತಂತ್ರ ನಂತರದಲ್ಲಿ ಆಹಾರ ಮತ್ತು ವಸತಿಗೆ ಗಂಭೀರವಾದ ಸಮಸ್ಯೆಗಳಿದ್ದವು. ನಂತರ ಹಸಿರು ಕ್ರಾಂತಿಯಿಂದ ಹಂತ ಹಂತವಾಗಿ ಸಮಸ್ಯೆಗಳು ಕಡಿಮೆಯಾಗುತ್ತಾ ಬಂದಿದ್ದರೂಇಂದಿನ ದಿನಗಳಲ್ಲಿ ಉದ್ಯೋಗ ಸೃಷ್ಟಿ ತೀವ್ರ ಸ್ವರೂಪ ಪಡೆಯುತ್ತಿದ್ದು ಈ ಬಗ್ಗೆ ಸರ್ಕಾರಗಂಭೀರ ಚಿಂತನೆಗಳನ್ನು ನಡೆಸಿದೆ.ನಿಗಮದಿಂದ ಹಲವಾರು ಯೋಜನೆಗಳ ಮೂಲಕ ನೂರಾರು ಕೋಟಿಗಳಅನುದಾನ ನೀಡುತ್ತಿದೆ.ಅಲ್ಲದೆ, ಸರ್ಕಾರವು 68 ವಿವಿಧಕ್ಷೇತ್ರದಲ್ಲಿಕೌಶಲ್ಯತರಬೇತಿ ನೀಡುವಚಿಂತನೆ ನಡೆಸಿದೆ ಎಂದು ಹೇಳಿದರು. ಗದಗಜಿಲ್ಲಾಕುರುಬರ ಸಂಘದಅಧ್ಯಕ್ಷರಾದ ಫಕೀರ್ಪಹೆಬಸೂರಅವರು ಅಧ್ಯಕ್ಷತೆವಹಿಸಿ ಮಾತನಾಡಿ,ಒಂದು ಹೆಣ್ಣುಕಲಿತರೆ ಆ ಕುಟುಂಬಕ್ಕೆ ಮತ್ತು ಸಮಾಜಕ್ಕೆ ದೊಡ್ಡ ಕೊಡುಗೆಯನ್ನೇ ನೀಡಬಹುದು. ಅದೇ ರೀತಿ ಸಂಘ-ಸಂಸ್ಥೆ ಬೆಳೆಯಲು ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ.ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡುಗೆ ಅಪಾರವಾಗಿದೆ. ಹಿಂದುಳಿದ ವರ್ಗಗಳಿಗೆ ಯೋಜನೆಗಳನ್ನು ಸದ್ಬಳಿಕೆ ಮಾಡುವ ಮೂಲಕ ತಂದು ಜಿಲ್ಲೆಯನ್ನು ರಾಜ್ಯಕ್ಕೆ ಮಾದರಿಯನ್ನಾಗಿ ಮಾಡಲಾಗುವುದು ಎಂದು ಹೇಳಿದರು. ಕಾಳಿದಾಸ ಶಿಕ್ಷಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಶಿಧರ ರೊಳ್ಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಇದೇ ಸಂದರ್ಭದಲ್ಲಿ ತರಬೇತಿ ಸಾಮಾಗ್ರಿ ಸಲಕರಣೆಗಳ ಕಿಟ್‌ಗಳನ್ನು ಫಲಾನುಭವಿಗಳು ವಿತರಿಸಲಾಯಿತು. ವೇದಿಕೆ ಮೇಲೆ ದೇವರಾಜ ಅರಸು ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರಾದ ಟಿ.ಶ್ರೀನಿವಾಸಕುಮಾರ, ಮಡಿವಾಳ ಸವಿತಾ ಅಲೆಮಾರಿ ಅರೆ ಅಲಿಮಾರಿಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಲ್ಲಿಕಾರ್ಜುನ ಮಠದ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಬಸವರಾಜ ಮಲ್ಲೂರ, ರಾಕೇಶ ಸಿದ್ದರಾಮಯ್ಯ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಆಡಳಿತಾಧಿಕಾರಿ ರಾಮಕೃಷ್ಣ ರೊಳ್ಳಿ, ಸಂಸ್ಥೆಯ ಪದಾಧಿಕಾರಿಗಳಾದ ಬಿ.ಬಿ.ಬಾವಿಕಟ್ಟಿ, ಎಸ್.ಎಸ್.ಕರಡಿ, ಕೆ.ಬಿ.ಕಂಬಳಿ, ಆರ್.ಎಂ. ನಿಂಬನಾಯ್ಕರ, ಎಸ್.ಡಿ.ಸಿಂಗಟಾಲಕೇರಿ, ಬಿ.ಎಚ್.ಹ್ಯಾಟಿಸೇರಿದಂತೆ ಮುಂತಾದವರುಉಪಸ್ಥಿತರಿದ್ದರು. ಕಾಳಿದಾಸ ಶಿಕ್ಷಣ ಸಮಿತಿಯ ಕಾರ್ಯದರ್ಶಿ ವೈ.ಬಿ. ಬಾನಾಪುರ ಸ್ವಾಗತಿಸಿದರು.ಬಸವರಾಜ ಲದ್ದಿ ಕಾರ್ಯಕ್ರಮ ನಿರೂಪಿಸಿದರು.ರಾಕೇಶ ಸಿದ್ದರಾಮಯ್ಯ ಐಟಿಐಕಾಲೇಜಿನ ಪ್ರಾಚಾರ್ಯರಮೇಶ ವಡವಿ ವಂದಿಸಿದರು.