ಮಹಿಳೆ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ: ಆಶಾ ಪರೀಟ
If women develop, the country develops: Asha Parita
ಯರಗಟ್ಟಿ, 01 : ‘ಮಹಿಳೆಯರ ಸ್ವಾಭಿಮಾನ ಎತ್ತಿಹಿಡಿದು, ಆರ್ಥಿಕ ಸ್ವಾವಲಂಬನೆ ಮಾಡಲು ನನಗೆ ಅವಕಾಶ ಸಿಕ್ಕಿದೆ. ಮಹಿಳೆ ಅಭಿವೃದ್ಧಿಯಾದರೆ ಮನೆ, ಗ್ರಾಮ, ದೇಶ ಅಭಿವೃದ್ಧಿಯಾದಂತೆ’ ಎಂದು ವಸತಿ ನಿಲಯ ಪಾಲಕರಾದ ಆಶಾ ಪರೀಟ ಹೇಳಿದರು.ಪಟ್ಟಣದ ಮಹಾಂತ ದುಂರದುಡೇಶ್ವರ ಶ್ರೀಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ನಡೆದ ಮಹಿಳಾ ಸಾಧನಾ ಸಮಾವೇಶ ಹಾಗೂ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ‘ಮಹಿಳೆಯರನ್ನು ಸ್ವಾವಲಂಬಿಯಾಗಿಸಲು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮಾದರಿ ಕೆಲಸ ಮಾಡುತ್ತಿದ್ದಾರೆ’ ಎಂದರು.
ಸರಕಾರ ಈಗ ‘ಒಳ್ಳೆಯ ಉದ್ದೇಶದಿಂದ ಗೃಹಲಕ್ಷ್ಮೀ ಗ್ಯಾರಂಟಿ ಬ್ಯಾಂಕ್ ಆರಂಭಿಸಲಾಗುತ್ತಿದೆ. ಪ್ರತಿಯೊಬ್ಬರೂ ಶೇರ್ ಪಡೆಯಬೇಕು. ಅದರಿಂದ ಸಾಲ ನೀಡಲಾಗುವುದು. ಇದಕ್ಕೆ ಧರ್ಮಸ್ಥಳ ಸಂಘವೇ ಆದರ್ಶ, ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಜೊತೆಗೆ ಶಿಕ್ಷಣ, ಉದ್ಯೋಗಕ್ಕಾಗಿ ಸಾಲ ನೀಡುವ ವ್ಯವಸ್ಥೆ ಇರಲಿದೆ’ಎಂದು ಉದ್ಘಾಟಕರಾದ ಶಿವಾನಂದ ಬಳಿಗಾರ ಹೇಳಿದರು.
‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದವರು ಮಹಿಳೆಯರಿಗೆ ಜ್ಞಾನ ನೀಡುವ ಮೂಲಕ ಅದನ್ನು ಇಡೀ ಸಮಾಜಕ್ಕೆ ವಿಸ್ತರಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಮಹಿಳೆಯರು ಜ್ಞಾನವನ್ನು ಪಡೆದು ತಮ್ಮ ಮಕ್ಕಳಿಗೆ ಅದನ್ನು ನೀಡುವ ಮೂಲಕ ಇಡೀ ಸಮಾಜಕ್ಕೆ ಜ್ಞಾನವನ್ನು ವಿಸ್ತಾರ ಮಾಡುವಂತಹ ಕೆಲಸವನ್ನು ಮಾಡುತ್ತಾರೆ’ ಎಂದು ಹೇಳಿದರು.ಸಂಪನ್ಮೂಲ ವ್ಯಕ್ತಿಯಾದ ಡಾ. ನಿರ್ಮಲಾ ಬಟ್ಟಲ, ತಾಲೂಕಾ ಯೋಜನಾಧಿಕಾರಿ ಶ್ರೀಕಾಂತ ಎಂ. ಸುಧಾರಾಣಿ ಕರಗೂಳಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ನಿಶಾ, ಸಂಘದ ಮೇಲವಿಚಾರಕ ನಾಗರಾಜ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ನೂರಾರು ಮಹಿಳೆಯರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 