ಬೆಂಗಳೂರು ಏ 29ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಗೈರು ಹಾಜರಾಗಿದ್ದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಇಂದು ನ್ಯಾಯಾಲಯದ ಮುಂದೆ ಹಾಜರಾದ ವೇಳೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸಮನ್ಸ್ ಜಾರಿ ಮಾಡಿದ್ದರೂ ನ್ಯಾಯಾಲಯದ ಆದೇಶ ಪಾಲಿಸದ ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು. ಸೋಮವಾರ ನ್ಯಾಯಾಲಯದ ಮುಂದೆ ಹಾಜರಾದ ನಾಗೇಂದ್ರ ಅವರನ್ನು ನ್ಯಾಯಾಧೀಶರು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.
'ಹಿಂದೆ ಅನೇಕ ಬಾರಿ ಸಮನ್ಸ್ ನೀಡಿದ್ದರೂ, ಅದನ್ನು ಪಾಲಿಸದ ನಡವಳಿಕೆಯನ್ನು ನೀವು ಬೆಳೆಸಿಕೊಂಡಿದ್ದೀರಿ. ಜಾಮೀನು ರಹಿತ ವಾರೆಂಟ್ ರದ್ದುಗೊಂಡು ದೋಷ ಮುಕ್ತಗೊಳ್ಳಲಿದ್ದೇನೆ ಎಂದು ನೀವು ಭಾವಿಸಿದ್ದೀರಿ. ಆದರೆ, ಹಾಗೆ ಆಗುವುದಿಲ್ಲ' ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.