ಅಕ್ರಮ ಗಾಂಜಾ ಮಾರಾಟ: ಇಬ್ಬರ ಬಂಧನ
Illegal sale of marijuana: Two arrested
ಅಕ್ರಮ ಗಾಂಜಾ ಮಾರಾಟ: ಇಬ್ಬರ ಬಂಧನ
ಬೆಳಗಾವಿ 25: ಮಾದಕ ವಸ್ತು ಮಾರಾಟದ ಮೇಲೆ ಕಾಕತಿ ಪೊಲೀಸರು ಮಿಂಚಿನ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳಗಾವಿ ಕಾಕತಿ ನಿವಾಸಿಗಳಾದ ಪ್ರವೀಣ ಸುರೇಶ ಕಾಕತಿಕರ ಮತ್ತು ಈರಾ್ಪ ಯಲ್ಲಪ್ಪಾ ಭಾವಿನಮನಿ ಬಂಧಿತ ಆರೋಪಿಗಳಾಗಿದ್ದಾರೆ.
ದಿ. 24ರಂದು ಆರೋಪಿಗಳು ಹೊನಗಾ ಇಂಡಸ್ಟ್ರಿಯಲ್ ಏರಿಯಾ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಕಾಕತಿ ಪೊಲೀಸ್ ಠಾಣೆ ಪಿಐ ಸುರೇಶ ಪಿ.ಶಿಂಗಿ ಮತ್ತು ಸಿಬ್ಬಂದಿಯವರು ತಕ್ಷಣ ಕಾರ್ಯಪ್ರವೃತ್ತರಾಗಿ ದಾಳಿ ನಡೆಸಿ ಆರೋಪಿಗಳನನು ಬಂಧಿಸಿ ಅವರಿಂದ 25,000ರೂ. ಮೌಲ್ಯದ 1ಕೆಜಿ ಗಾಂಜಾ ಮಾಡಿ ಅವರ ವಿರುದ್ಧ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಯುವಕರು ಮಾದಕ ವಸ್ತುಗಳ ವ್ಯಸನಿಗಳಾಗದೆ ಆರೋಗ್ಯಪೂರ್ಣ ಜೀವನ ನಡೆಸಬೇಕೆಂದು ತಿಳಿಸಲಾಯಿತು.
ದಾಳಿ ಕೈಗೊಂಡ ಸಂಬಂಧಪಟ್ಟ ಠಾಣೆಯ ಪಿಐ, ಕಾಕತಿ ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಪೊಲೀಸ್ ಆಯುಕ್ತರು ಬೆಳಗಾವಿ ನಗರ ಹಾಗೂ ಡಿಸಿಪಿ ಅವರುಗಳು ಶ್ಲಾಘಿಸಿರುತ್ತಾರೆ.
ಬೆಳಗಾವಿ ನಗರದಲ್ಲಿ ಇಂಥ ಅಕ್ರಮ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಟ್ಟು ಯುವ ಪೀಳಿಗೆ ಇಂಥ ದುಶ್ಚಟಗಳಿಗೆ ದಾಸರಾಗುವುದನ್ನು ತಪ್ಪಿಸಲು ಪೊಲೀಸ್ ಇಲಾಖೆ ಮಿಂಚಿನ ಕಾರ್ಯಾಚರಣೆಗಳನ್ನು ಕೈಗೊಳ್ಳುತ್ತಿದೆ. ಈ ಕಾರ್ಯಾಚರಣೆಗಳು ಜಾರಿಯಲ್ಲಿದ್ದು, ಇನ್ನು ಹೆಚ್ಚಿ ದಾಳಿಗಳನ್ನು ಕೈಗೊಂಡು ನಗರದಲ್ಲಿ ಅಕ್ರಮ ಚಟುವಟಿಕೆಗಳನ್ನು ಬೇರು ಸಮೇತ ಕಿತ್ತೊಗೆಯಲು ಬೆಳಗಾವಿ ನಗರ ಪೊಲೀಸರ ಅವಿರತ ಪ್ರಯತ್ನ ಮುಂದುವರೆದಿದೆ ಎಂದು ನಗರ ಪೊಲೀಸ್ ಆಯುಕ್ತರು ಪ್ರಕಟಣೆಗೆ ತಿಳಿಸಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 