ಮಾದಕ ವಸ್ತುವನ್ನು ಅಕ್ರಮವಾಗಿ ಸಾಗಾಟ, ವ್ಯಕ್ತಿ ಲಾಕ್, 8 ಲಕ್ಷದ ಮೌಲ್ಯದ ಮಾಲು ವಶಕ್ಕೆ
Illegal transportation of narcotics, person arrested, goods worth Rs 8 lakh seized
ಮುಂಡಗೋಡ 21 : ಮುಂಡಗೋಡಿನ ಕೆ,ಎಸ್,ಆರಿ್ಸ, ಬಸ್ ಡಿಪೋ ಹತ್ತಿರ ಚರಸ್ ಎಂಬುವ ಮಾದಕ ವಸ್ತುವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮುಂಡಗೋಡ ಪೋಲಿಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತ ಆರೋಪಿತನಾದ ಪಟ್ಟಣದ ಸುಭಾಷ್ ನಗರದ ಸಚಿನ್ ಟೇಕಬಹುದ್ದೂರ ಗೋರ್ಖಾ (26) ಎಂಬುವವ ಮುಂಡಗೋಡಿನ ಹುಬ್ಬಳ್ಳಿ ರಸ್ತೆಯ ಕೆ,ಎಸ್,ಆರ್, ಟಿ,ಸಿ, ಬಸ್ ಡಿಪೋ ಹತ್ತಿರ ಹಿರೋ ಕಂಪನಿಯ ಕಪ್ಪು ಬಣ್ಣದ ಸ್ಪ್ಲೆಂಡರ್ ಬೈಕ್ ಮೇಲೆ ಚರಸ್ ಮಾದಕ ವಸ್ತುವನ್ನು ಇಟ್ಟುಕೊಂಡು ಸಾಗಾಟ ಮಾಡುತ್ತಿದ್ದಾಗ ಇಲ್ಲಿಯ ಪೋಲಿಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ ಸುಮಾರು 8 ಲಕ್ಷ ರೂ.ಬೆಲೆ ಬಾಳುವ 781ಗ್ರಾಂ ತೂಕದ ಚರಸ್ ಹಾಗೂ ಚರಸ್ ಮಾರಾಟಕ್ಕೆ ಬಳಸಿದ ಸ್ಪ್ಲೆಂಡರ್ ಬೈಕ್ ವಶಪಡಿಸಿಕೊಳ್ಳಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಪೋಲಿಸ್ ಅಧೀಕ್ಷಕರು ದೀಪನ್ ಎಮ್.ಎನ್ ಐ.ಪಿ.ಎಸ್ , ಕೃಷ್ಣಮೂರ್ತಿ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರವಾರ, ಜಗದೀಶ ನಾಯ್ಕ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಕಾರವಾರ, ಗೀತಾ ಪಾಟೀಲ ಡಿ.ಎಸ್.ಪಿ ಶಿರಸಿ ರವರ ಮಾರ್ಗದರ್ಶನದಲ್ಲಿ ಅಕ್ರಮ ಚರಸನ್ನು ಸಾಗಾಟ ಮಾಡುವ ಆರೋಪಿತನನ್ನು ಬಂಧಿಸುವಲ್ಲಿ ಮುಂಡಗೋಡ ಸಿ ಪಿ ಐ ರಂಗನಾಥ ನೀಲಮ್ಮನವರ , ಪಿಎಸ್‌ಐ ಯಲ್ಲಾಲಿಂಗ ಕುನ್ನೂರ , ಹಾಗೂ ಸಿಬ್ಬಂದಿಗಳಾದ ಕೋಟೇಶ್ವರ ನಾಗರವಳ್ಳಿ , ಮಹಾಂತೇಶ ಮುಧೋಳ ,ಅಣ್ಣಪ್ಪ ಬುಡಿಗೇರ , ಶಿವಾನಂದ ದಾನಣ್ಣವರ ,ಅನ್ವರ ಬಮ್ಮಿಗಟ್ಟಿ , ಮುಂಡಗೋಡ ಪೊಲೀಸ್ ಠಾಣೆರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 