ಜೈಲ್ ನಲ್ಲಿ ಅಕ್ರಮ : ಯುವ ಮೋರ್ಚಾದಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಸಾಂಕೇತಿಕ ಪ್ರತಿಭಟನೆ
Illegality in jail: Yuva Morcha holds symbolic protest near the District Collector's office
ಕಾರವಾರ 12: ವಿವಿಧ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದವರಿಗೆ ಬೆಂಗಳೂರಿನ ಪರ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಕಲ್ಪಿಸುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮವಾಗಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಘಟಕದಿಂದ ಬುಧವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಮಾತನಾಡಿ ಜೈಲ್ ನಲ್ಲಿರುವ ಭಯೋತ್ಪಾದಕರು, ವಿಕೃತ ಕಾಮಿ, ರೌಡಿಗಳಿಗೆ ಟಿವಿ, ಮೊಬೈಲ್ ನೋಡಿಕೊಂಡು ಮೋಜು-ಮಸ್ತಿ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಬ್ಲಾಸ್ಟ್ ಆಗಿದ್ದು ಇಡೀ ದೇಶ ಬೇಸರಗೊಂಡಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಾತ್ರ, ಇದು ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಕ್ಕೆ ಹೆಚ್ಚು ಸೀಟು ತಂದುಕೊಡಲಿದೆ ಎಂದಿದ್ದಾರೆ, ಇದು ಸರಿಯಲ್ಲ ಎಂದರು. ಈ ಸರ್ಕಾರವನ್ನು ಕಾಂಗ್ರೆಸ್ ಸರ್ಕಾರ ಎಂದು ಹೇಳಬಹುದು ಅಷ್ಟೇ, ಇದನ್ನು ಕರ್ನಾಟಕ ಸರ್ಕಾರ ಎಂದು ಒಪ್ಪಲು ಸಾಧ್ಯವೇ ಇಲ್ಲ, ರಾಜ್ಯದ ಅಭಿವೃದ್ಧಿಯಂತೂ ಬಿಡಿ, ರಸ್ತೆಗಳ ಕನಿಷ್ಠ ನಿರ್ವಹಣೆಯಿಲ್ಲ ಎಲ್ಲಾ ಕಡೆ ಹೊಂಡ-ಗುಂಡಿಗಳೇ ತುಂಬಿವೆ, ಯಾಕಾದರೂ ಈ ಸರ್ಕಾರ ಅಧಿಕಾರಕ್ಕೆ ಬಂದಿದೆಯೊ? ಎಂದು ಜನ ಬೈಯುತ್ತಿದ್ದಾರೆ ಎಂದರು. ಯಾರು ಗಡಿಯಲ್ಲಿ ಬಾಂಗ್ಲಾದೇಶೀಯರಿಗೆ ಬಾಗಿಲು ತೆರೆದು ಕೊಡುವವರು? ಇದು ನಮ್ಮ ದುರಾದೃಷ್ಟ ಎಂದರು. ಯಾವುದು ಕೇಳಿದರೂ ಗೊತ್ತಿಲ್ಲ ಎಂದು ಹೇಳುವ ಗೃಹ ಸಚಿವರು ತಮ್ಮ ಖಾತೆಯನ್ನು ಗೊತ್ತಿಲ್ಲ ಖಾತೆ ಎಂದೇ ಬದಲಾಯಿಸಿಕೊಳ್ಳಲಿ ಎಂದು ಲೇವಡಿ ಮಾಡಿದರು. ಸಿದ್ದರಾಮಯ್ಯ ಅವರಿಗಂತೂ ಏನನ್ನೂ ಕೇಳುವ ಹಾಗಿಲ್ಲ, ಹಾಗಾಗಿ ಸಿಎಂ, ಗೃಹ ಸಚಿವರು ರಾಜೀನಾಮೆ ನೀಡಿ ಹೋಗಲಿ, ಜನವಿರೋಧಿ ಕಾಂಗ್ರೆಸ್ ಸರ್ಕಾರ ನಿರ್ಗಮಿಸಲಿ ಎಂದು ಗುರುಪ್ರಸಾದ ಹೆಗಡೆ ಹರ್ತೆಬೈಲ್ ಆಗ್ರಹಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ್ ಮಾತನಾಡಿ ಜೈಲು ಮನಃ ಪರಿವರ್ತನೆಯ ಕೇಂದ್ರ ಆಗಬೇಕು, ಆದರೆ ಕಾಂಗ್ರೆಸ್ ಆಡಳಿತದಲ್ಲಿ ಜೈಲ್ ಮೋಜು ಮಸ್ತಿಯ ಕೇಂದ್ರವಾಗಿ, ರೆಸಾರ್ಟ್ ಮಾದರಿಯಲ್ಲಿ ಖೈದಿಗಳು ದಿನಕಳೆಯುತ್ತಿದ್ದಾರೆ ಎಂದರು. ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮಕುಮಾರ ನಾಯ್ಕ್ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಮೋದ ನಾಯ್ಕ ಮನವಿ ಪತ್ರವನ್ನು ಓದಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೃಷ್ಣಮೂರ್ತಿ ಜಿ ಅವರು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು. ಕಾರವಾರ ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೇಕರ್, ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ ಗುನಗಿ, ಅಂಕೋಲಾ ಮಂಡಲ ಅಧ್ಯಕ್ಷ ಸಂಜಯ ನಾಯ್ಕ, ಜಿಲ್ಲಾ ವಿಶೇಷ ಆಹ್ವಾನಿತರಾದ ಮನೋಜ ಭಟ್, ಎಸ್ ಸಿ ಮೋರ್ಚಾ ಹಳ್ಳೇರ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬಳೆ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 