ಗದಗ 25: ಹೊರ ರಾಜ್ಯಗಳಲ್ಲಿರುವ ಜಿಲ್ಲೆಯ ವಲಸೆ ಕಾಮರ್ಿಕರನ್ನು ಆದಷ್ಟು ಬೇಗನೆ ಕರೆತರಲು ಅಗತ್ಯದ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲ ತಿಳಿಸಿದರು.
ಗದಗ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಕೋವಿಡ್-19 ಕೋವಿಡ್ ಕೊರೊನಾ ವೈರಸ್ ನಿಯಂತ್ರಣ ಕುರಿತು ಜರುಗಿದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೊರ ರಾಜ್ಯಗಳಲ್ಲಿರುವ ವಲಸೆ ಕಾಮರ್ಿಕರನ್ನು ಕರೆತರಲು ಕ್ರಮ ಜರುಗಿಸಲಾಗುತ್ತಿದೆ. ಹೊರ ರಾಜ್ಯಗಳಿಂದ ಬರುವಂತಹ ಜನರ ಆರೋಗ್ಯದ ಮೇಲೆ ನಿಗಾವಹಿಸಲು ಆಯಾ ಗ್ರಾಮ ಪಂಚಾಯತಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಗಮನ ಹರಿಸುವಂತೆ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಜಿಲ್ಲೆಯ ಬಹುತೇಕ ಅರ್ಹ ಪಡಿತರ ಕುಟುಂಬಗಳಿಗೆ ಪಡಿತರ ಒದಗಿಸಲಾಗಿದ್ದು ಬಾಕಿ ಉಳಿದ ಪಡಿತರ ಕುಟುಂಬಗಳಿಗೆ ವಿಳಂಭವಾಗದಂತೆ ವಿತರಿಸಲು ತಿಳಿಸಿದರು. ಜಿಲ್ಲೆಯ ನರಗುಂದ ತಾಲೂಕಿನ ಕೊರೊನಾ ಪ್ರಕರಣವು ನಕಾರಾತ್ಮಕವಾಗಿದ್ದು ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು. ಹೊರ ರಾಜ್ಯದಲ್ಲಿ ಸಿಲುಕಿರುವ ಜಿಲ್ಲೆಯ ಜವಾಹಾರ ಶಾಲೆಯ ವಿಧ್ಯಾಥರ್ಿಗಳನ್ನು ಮರಳಿ ಜಿಲ್ಲೆಗೆ ಕರೆತರಲು ಅಗತ್ಯದ ಕ್ರಮ ಜರುಗಿಸಲು ಸೂಚಿಸಿದ ಅವರು ಹೊರ ಜಿಲ್ಲೆಯಿಂದ ಜಿಲ್ಲೆಗೆ ಆಗಮಿಸುವಂತಹ ಪ್ರತಿಯೊಬ್ಬರ ಆರೋಗ್ಯದ ಮೇಲೆ ನಿಗಾವಹಿಸಿ ಅಂತಹವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಸೂಚನೆ ನೀಡಿದರು. ಜಿಲ್ಲೆಗೆ ಶೀಘ್ರವೆ ಲೈಫ್ ಸೇವಿಂಗ ಸಾಧನೆಗಳನ್ನು ಒಳಗೊಂಡಂತಹ ಅಂಬ್ಯುಲಸನ್ಸಗಳನ್ನು ಒದಗಿಸಲು ಕ್ರಮ ಜರುಗಿಸಲಾಗುತ್ತಿದೆ ಎಂದು ಸಚಿವ ಸಿ.ಸಿ. ಪಾಟೀಲ ತಿಳಿಸಿದರು.
ಸಂಸದರಾದ ಸಿ.ಎಂ. ಉದಾಸಿ ಅವರು ಮಾತನಾಡಿ ವಲಸೆ ಕಾಮರ್ಿಕರನ್ನು ಅವರ ಸ್ವಂತ ಊರುಗಳಿಗೆ ಕಳುಹಿಸುವ ಮುನ್ನ ಅವರನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಕಳುಹಿಸಿ ಕೊಡಬೇಕು. ಅದೇ ರೀತಿ ಹೊರ ರಾಜ್ಯಗಳಿಂದ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಬರುವ ಕಾಮರ್ಿಕರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಸಾರ್ವಜನಿಕರಲ್ಲಿನ ಆತಂಕವನ್ನು ದೂರ ಮಾಡಲು ಕ್ರಮ ಜರುಗುವಂತೆ ಸೂಚಿಸಿದರು. ಮುಂಗಾರು ಹಂಗಾಮು ಪ್ರಾರಂಭವಾಗುತ್ತಿದ್ದು ರೈತರಿಗೆ ಅಗತ್ಯದ ಬಿತ್ತನ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಆಗದಂತೆ ನಿಗಾವಹಿಸಲು ತಿಳಿಸಿದರು. ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ಯೋಜನೆಯಡಿ ರೈತರ ಖಾತೆಗೆ ಜಮೆ ಆಗುವ ಮೊತ್ತವನ್ನು ಯಾವುದೇ ಕಾರಣಕ್ಕೂ ಅವರ ಸಾಲದ ಕಂತಿಗೆ ಕಟಾವಣೆ ಮಾಡದಂತೆ ಸೂಚನೆ ನೀಡಿದರು. ಕೊರೊನಾ ವೈರಸ್ ಹರಡಂದತೆ ಜಿಲ್ಲಾಡಳಿತ ತೆಗೆದುಕೊಂಡಂತಹ ಕ್ರಮಗಳ ಕುರಿತು ಸಂಸದಾರ ಉದಾಸಿ ಅವರು ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಾತನಾಡಿ ಗದಗ-ಬೆಟಗೇರಿ ನಗರ ಸಭೆಯ ವ್ಯಾಪ್ತಿಯ ವಾರ್ಡ ನಂ 31 ರ ರಂಗನವಾಡ ಪ್ರದೇಶದಲ್ಲಿ ಜಿಲ್ಲೆಯ ಕೊವಿಡ್ ಪ್ರಕರಣಗಳು ಧೃಡಪಟ್ಟಿದ್ದು ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಆ ಪ್ರದೇಶದ ಎಲ್ಲ ಜನರ್ನು ವಿವಿಧ ವಸತಿ ಶಾಲೆಗಳಿಗೆ ವಗರ್ಾಯಿಸಲಾಗಿರುತ್ತದೆ ಎಂದರು. ಜಿಲ್ಲೆಯಲ್ಲಿಯ ವಲಸೆ ಕಾಮರ್ಿಕರನ್ನು ಗುರುತಿಸಿ ಅವರಿಗೆ ಅಗತ್ಯದ ಊಟ ಹಾಗೂ ವಸತಿ ಸೌಲಭ್ಯಗಳನ್ನು ಒದಗಿಸಲಾಗಿದ್ದು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಕ್ರಿಮಿನಾಶಕ ಔಷಧವನ್ನು ಸಿಂಪಡಿಸಲಾಗುತ್ತಿದೆ ಎಂದರು. ಸೊಂಕು ದೃಢಪಟ್ಟ ನಿಯಂತ್ರಿತ ಪ್ರದೇಶದಲ್ಲಿ ನಿಯಮಿತವಾಗಿ ಕ್ರಿಮಿನಾಶಕ ಔಷಧಿ ಸಿಂಪಡಣೆ ಹಾಗೂ ಆರೋಗ್ಯ ತಪಾಸಣೆ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ ಎಂದು ಜಿಲ್ಲೆಯಲ್ಲಿಯ ವಿವಿಧ ಸಂಘ ಸಂಸ್ಥೆಗಳಿಂದ ನಿರಾಶ್ರಿತರಿಗೆ ಹಾಗೂ ಕ್ಷೌರಿಕ ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತಿದೆ ಅಗತ್ಯ ಬಿದ್ದರೆ ಜಿಲ್ಲಾಡಳಿತದಿಂದಲೂ ಆಹಾರ ಸಾಮಗ್ರಿ ಒದಗಿಸಲು ಕ್ರಮ ಜರುಗಿಸಲಾಗುವುದು ಎಂದು ಮಾಹಿತಿ ನೀಡಿದರು.
ಸಂಸದರಾದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ ಸದಸ್ಯರಾದ ಎಸ್.ವಿ.ಸಂಕನೂರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರ ಡಾ.ಆನಂದ ಕೆ., ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಯತೀಶ ಎನ್. ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.