ಸೇವಾಲಾಲ್ರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
ಹಾವೇರಿ 25: ಸೇವಾಲಾಲ್ ಅವರ ತತ್ವಾದರ್ಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಸಕರ್ಾರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಜಿ.ಪಂ.ಸದಸ್ಯರಾದ ನೀಲಮ್ಮಾ ಲಮಾಣಿ ಅವರು ಹೇಳಿದರು.
ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಡಿ.ದೇವರಾಜ ಅರಸು ಭವನದಲ್ಲಿ ಜರುಗಿದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಂಜಾರ ಸಮಾಜದ ಬಾಂಧವರು ತಮ್ಮ ಕಸೂತಿ ಕಲೆ, ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ಹೇಳಿದರು.
ಉಪನ್ಯಾಸಕರಾಗಿ ಭಾಗವಹಿಸಿದ ಚಿತ್ರದುರ್ಗದ ಸಾಹಿತಿ ಮಂಜುನಾಥ್ ನಾಯಕ್ ಅವರು ಮಾತನಾಡಿ, ಸೇವಾಲಾಲ್ರು ಯಾರಿಗೂ ನೋವು ನೀಡಬೇಡಿ, ಮೋಸ ಮಾಡಬೇಡಿ ಹಾಗೂ ಸುಳ್ಳು ಹೇಳಬೇಡಿ ಎಂಬ ಸಂದೇಶ ನೀಡಿದವರು. ಬಂಜಾರ ಸಮಾಜ ನಿಸರ್ಗವನ್ನು ದೇವತೆಯೆಂದು ಆರಾಧಿಸಿಕೊಂಡು ಬಂದ ಸಮಾಜವಾಗಿದೆ. ಬ್ರಿಟಿಷರ್ ವಿರುದ್ಧವೂ ಹೋರಾಟಿದ ಇತಿಹಾಸವಿದೆ ಹಾಗೂ ಸ್ವಾಭಿಮಾನದ ಬದುಕು ಸಾಗಿಸುವ ಸಮಾಜವಾಗಿದೆ. ಸಮಾಜದ ಏಳ್ಗೆಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರು ಮಾತನಾಡಿ, ಸಂತ ಸೇವಾಲಾಲ್ರು ಎಲ್ಲರಿಗೂ ಮಾಗದರ್ಶಕರಾಗಿದ್ದಾರೆ. ಇಂತಹ ಮಹಾನ್ ಸಂತರ ಜಯಂತಿ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ತಪ್ಪದೇ ಪಾಲ್ಗೊಳ್ಳಬೇಕು. ಯಾವುದೇ ವ್ಯಸನಗಳಿಗೆ ದಾಸರಾಗದೇ ಸ್ವಾಭಿಮಾನದ ಬದುಕು ನಡೆಸಿ ಹಾಗೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ. ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ. ಸಮಾಜ ಕಟ್ಟುವಲ್ಲಿ ಯುವಕರು ಮುಂದೆಬರಬೇಕು, ನಾವೆಲ್ಲರೂ ಸಂಘಟಿತರಾಗಬೇಕು ಎಂದು ಹೇಳಿದರು.
ಆಲ್ ಇಂಡಿಯಾ ಬಂಜಾರ ಸಂಘದ ಕಾರ್ಯದಶರ್ಿ ರಮೇಶ ಲಮಾಣಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಬ್ಬೂರ ಗ್ರಾ.ಪಂ.ಅಧ್ಯಕ್ಷ ರಮೇಶ ಲಮಾಣಿ, ಆರ್.ಸಿ.ಲಮಾಣಿ, ಶಂಕರ ಲಮಾಣಿ, ಗ್ರಾಮೀಣ ಪೊಲೀಸ್ ಠಾಣೆ ಪಿ.ಎಸ್.ಐ. ರಾಜಣ್ಣ ನಾಯಕ ಇತರ ಸಮಾಜದ ಮುಖಂಡರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕ ಆರ್.ವಿ.ಚಿನ್ನಿಕಟ್ಟಿ ಅವರು ಸ್ವಾಗತಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 