ಲೋಕದರ್ಶನ ವರದಿ
ಕೊಪ್ಪಳ 10: ಹೈದ್ರಾಬಾದ್ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕೊಪ್ಪಳ ಜಿಲ್ಲೆಗೆ ಮಂಜೂರಾದ ಕಾರ್ಯಕ್ರಮಗಳನ್ನು ಸಮರ್ಪಕ ಅನುಷ್ಠಾನಗೊಳಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ವೆಂಕಟ್ ರಾಜಾ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೈದ್ರಾಬಾದ್ ಕನರ್ಾಟಕ ಪ್ರದೇಶದ ಉಪ ಸಮಿತಿಗಳ ಆಯ್ದ ಸದಸ್ಯರುಗಳಿಗೆ ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಗುರುವಾರದಂದು ಆಯೋಜಿಸಲಾದ ಜಿಲ್ಲಾ ಮಟ್ಟದ ತರಬೇತಿ ಕಾಯರ್ಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಸಕರ್ಾರದಿಂದ ಜಾರಿಯಲ್ಲಿರುವ ಎಲ್ಲಾ ಯೋಜನೆಗಳ ಜೊತೆಗೆ ವಿಶೇಷವಾಗಿ ಹೈದ್ರಾಬಾದ್ ಕನರ್ಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಮಂಜೂರಾದ ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾನಗೊಳಿಸವುದನ್ನು ವಿಧ ಉಪಸಮಿತಿಯ ಸದಸ್ಯರು ಜಾಗೃತರಾಗಬೇಕು. ಈ ನಿಟ್ಟಿನಲ್ಲಿ ಎಲ್ಲಾ ಕಾಮಗಾರಿಗಳನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಅಭಿವೃದ್ಧಿಗೊಳಿಸಿ ಜಿಲ್ಲೆಯನ್ನು ಮತ್ತು ರಾಜ್ಯವನ್ನು ಉನ್ನತ ಸ್ಥಾನಕ್ಕೆರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು.
ಜಿ.ಪಂ. ಯೋಜನಾ ನಿದರ್ೇಶಕ (ಡಿಆರ್ಡಿಎ) ರವಿ ಬಸರಿಹಳ್ಳಿ ಅವರು ತರಬೇತಿಯ ಮುಖ್ಯ ಉದ್ದೇಶಗಳ ಬಗ್ಗೆ ವಿವರಿಸಿದರು. ನಂತರ ಶಿಕ್ಷಣ, ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯ ವಿವಿಧ ಕಾರ್ಯಕ್ರಮಗಳ ಕುರಿತು ವಿವರಣೆ ನೀಡಿದರು. ಸಭೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ವಿವಿದ ಸಮಿತಿಯ ಸದಸ್ಯರುಗಳು, ಕಾರ್ಯನಿವರ್ಾಹಕ ಅಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.