ಅಭಿಮತಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯದ ತಲಾದಾಯ ಹೆಚ್ಚಳ

 ಅಭಿಮತಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯದ ತಲಾದಾಯ ಹೆಚ್ಚಳ Implementation of the Abhima Panchayat Guarantee Schemes has increased the state's per capita incom


ಬಳ್ಳಾರಿ 22:  ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ತಲಾದಾಯ ಹೆಚ್ಚಳವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ ಚಿದಾನಂದಪ್ಪ ಅವರು ಹೇಳಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸರ್ಕಾರದ ವಿವಿಧ ಯೋಜನೆಗಳು ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಮೂಡಿಸುವ ಜಾನಪದ ಸಂಗೀತ, ಬೀದಿ ನಾಟಕ ಕಾರ್ಯಕ್ರಮಕ್ಕೆ ಜಿಪಂ ಆವರಣದಲ್ಲಿ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಮ್ಮ ರಾಜ್ಯ ಸರ್ಕಾರ, ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಿದೆ. ಇವು ಬಡ, ಶೋಷಿತ, ಹಿಂದುಳಿದ ವರ್ಗದ ಜನರ ಜೀವನ ಸುಧಾರಣೆಗೆ ಪೂರಕವಾಗಿವೆ. ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಜನರಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದಿವೆ ಎಂದು ಅಭಿಮತ ವ್ಯಕ್ತಪಡಿಸಿದರು.ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರಿಗೆ ಶಕ್ತಿ ತುಂಬಲಾಗಿದೆ. ಅನ್ನಭಾಗ್ಯದಿಂದ ಹಸಿವು ನೀಗಿಸಲಾಗುತ್ತಿದೆ. ಗೃಹಜ್ಯೋತಿ ಮೂಲಕ ಕತ್ತಲೆ ಮನೆಗಳಿಗೆ ಬೆಳಕು ನೀಡಲಾಗಿದೆ. ಗೃಹಲಕ್ಷ್ಮಿಯಿಂದ ಮನೆ ಯಜಮಾನಿಯರಿಗೆ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುತ್ತಿದೆ.

ಅದೇರೀತಿಯಾಗಿ ಯುವನಿಧಿಯಿಂದ ನಿರುದ್ಯೋಗ ಯುವಕ-ಯುವತಿಯರಿಗೆ ಸಹಾಯಧನ ಒದಗಿಸಲಾಗುತ್ತಿದೆ ಎಂದರು.ಬಳ್ಳಾರಿ ಜಿಲ್ಲೆಯಲ್ಲೂ ಪಂಚ ಗ್ಯಾರಂಟಿ ಯೋಜನೆಗಳು ಶೇ.98 ರಷ್ಟು ಅನುಷ್ಠಾನಗೊಳಿಸಿದ್ದು, ಶೇ.100 ಕ್ಕೆ ನೂರರಷ್ಟು ಪ್ರಗತಿ ಸಾಧಿಸಲಾಗುವುದು ಎಂದರಲ್ಲದೇ, ಜಿಲ್ಲೆಯಲ್ಲಿ ಯಾವುದೇ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿದ್ದಲ್ಲಿ, ಆಯಾ ತಾಲ್ಲೂಕುಗಳ ಅಧ್ಯಕ್ಷರ ಕಚೇರಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು. ಈ ನಿಟ್ಟಿನಲ್ಲಿ ಆಯ್ದ ತಾಲೂಕುಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸಲು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.ಅಕ್ಷಯ ಕಲಾ ಟ್ರಸ್ಟ್‌ ನ ಅಧ್ಯಕ್ಷ ಯರಗುಡಿ ಸುಂಕಪ್ಪ ಮತ್ತು ತಂಡದವರಿಂದ ಗ್ಯಾರಂಟಿ ಯೋಜನೆಗಳ ಕುರಿತ ಜಾನಪದ ಸಂಗೀತ ಪ್ರಸ್ತುತಪಡಿಸಿದರು. ಧಾತ್ರಿ ರಂಗ ಸಂಸ್ಥೆಯ ಅಧ್ಯಕ್ಷ ಸಿರಿಗೇರಿ ಮಂಜು ತಂಡದವರಿಂದ ಗ್ಯಾರಂಟಿ ಯೋಜನೆಗಳ ಕುರಿತ ಬೀದಿ ನಾಟಕ ಪ್ರದರ್ಶಿಸಿದರು. 

ಈ ಸಂದರ್ಭದಲ್ಲಿ ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಗೋನಾಳ್ ಎಂ.ನಾಗಭೂಷಣ ಗೌಡ, ಕುರುಗೋಡು ತಾಲ್ಲೂಕು ಅಧ್ಯಕ್ಷ ಜಿ.ಬಸವನಗೌಡ, ಸಂಡೂರು ತಾಲ್ಲೂಕು ಅಧ್ಯಕ್ಷ ನೂರುದ್ಧೀನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ.ಗುರುರಾಜ ಸೇರಿದಂತೆ ವಾರ್ತಾ ಇಲಾಖೆಯ ಸಿಬ್ಬಂದಿ, ಜಿಪಂ ಸಿಬ್ಬಂದಿ ಹಾಗೂ ಇತರರು ಇದ್ದರು.