ಕೊಪ್ಪಳ 27: ಯುವ ಪೀಳಿಗೆ ಶಿಕ್ಷಣ ಹಾಗೂ ಉದ್ಯೋಗಕ್ಕೆ ಮಹತ್ವ ಕೊಟ್ಟ ರೀತಿಯಲ್ಲಿಯೇ ಮತದಾನಕ್ಕೂ ಮಹತ್ವ ನೀಡಬೇಕು ಎಂದು ಕೊಪ್ಪಳ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಟಿ. ಶ್ರೀನಿವಾಸ್ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿಯ ಸಹಯೋಗದಲ್ಲಿ "ರಾಷ್ಟ್ರೀಯ ಮತದಾರರ ದಿವಸ" ಆಚರಣೆ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರದಂದು ಆಯೋಜಿಸಲಾದ ಮತದಾರರ ಜಾಗೃತಿ ಕಾರ್ಯಕ್ರಮ, ವಿವಿಧ ಸ್ಪಧರ್ೆಗಳಲ್ಲಿ ವಿಜೇತ ವಿದ್ಯಾಥರ್ಿಗಳಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ವಿತರಣೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
1958 ಜನವರಿ. 25 ರಂದು ನಮ್ಮ ದೇಶದಲ್ಲಿ "ಭಾರತ ಚುನಾವಣಾ ಆಯೋಗ"ವು ಜಾರಿಗೆ ಬಂದಿದ್ದು, ಇಂದು ರಾಷ್ಟ್ರೀಯ ಮತದಾರರ ದಿನಾಚರಣೆಯ ಜೊತೆಗೆ ಚುನಾವಣಾ ಆಯೋಗದ ಸಂಸ್ಥಾಪನಾ ದಿನವೂ ಆಗಿದೆ. ಭಾರತ ದೇಶ ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತದಾರರ ಸಕ್ರಿಯ ಪಾಲ್ಗೊಳ್ಳುವಿಕೆ ಅಗತ್ಯವಾಗಿದ್ದು, ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳ್ಳಲು ಸಾಧ್ಯವಾಗುತ್ತದೆ. ಎಲ್ಲಾ ದಾನಗಳಿಗಿಂತ ಮತದಾನವು ಶೇಷ್ಠ ದಾನವಾಗಿದ್ದು, ಮತದಾನ ಮಾಡುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಟಿ. ಶ್ರೀನಿವಾಸ್ ಅವರು ಹೇಳಿದರು.
ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಮಾತನಾಡಿ, ದೇಶದಲ್ಲಿ ಜರುಗುವ ಯಾವುದೇ ಚುನಾವಣೆಗಳಲ್ಲಿ ಮತದಾರರು ತಮ್ಮ ಹಕ್ಕನ್ನು ತಪ್ಪದೆ ಚಲಾಯಿಸಬೇಕಾಗಿದ್ದು, ಸಂವಿಧಾನವು ನಮ್ಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲು ಮತದಾನದ ಹಕ್ಕನ್ನು ನೀಡಿದೆ. "ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ನಾವು, ದೇಶದಲ್ಲಿ ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುವ, ಚುನಾವಣೆಗಳಲ್ಲಿ ನಿಭರ್ೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ, ಮತ ಚಲಾಯಿಸುತ್ತೇವೆ" ಎಂಬ ಮತದಾರರ ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿಗಳು ಎಲ್ಲರಿಗೂ ಇದೇ ಸಂದರ್ಭದಲ್ಲಿ ಭೋದಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕರಾದ ಉಮಾದೇವಿ ಸೊನ್ನದ್ ಅವರು ಮಾತನಾಡಿ, 18 ವರ್ಷ ಮೇಲ್ಪಟ್ಟವರೆಲ್ಲರೂ ನ್ಯಾಯಯುತವಾಗಿ ಮತದಾನ ಮಾಡುವುದು ಹಾಗೂ ಶೇ.100 ರಷ್ಟು ಮತದಾನ ನಡೆಯಬೇಕು ಎಂಬ ಉದ್ದೇಶದಿಂದ ಈ ಜಾಗೃತಿ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ನಮ್ಮ ಮತ ದೇಶಕ್ಕೆ ಹಿತ, ನಮ್ಮ ಮತ ನಮ್ಮ ಹಕ್ಕು, ಒಂದೆ ಕಡೆ ಮಾತ್ರ ಮತದಾನ ಮಾಡಿ, ಎರಡು ಕಡೆ ಮತದಾನ ಮಾಡಿದರೆ ಶಿಕ್ಷೆ ಇದೆ, ಮತ ಹಾಕು ಮತ್ತು ಮತ ಹಾಕುವಂತೆ ಇತರರಿಗೆ ಪ್ರೇರೆಪಿಸು ಎಂಬುವುದರ ಕುರಿತು ಅರಿವು ಮೂಡಿಸಲು ಈ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಭಾರತದ ನಕ್ಷೆಯಲ್ಲಿ ಬೃಹತ್ ಮಾನವ ಸರಪಳಿ: ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ 300 * 200 ಅಡಿ ಉದ್ದಗಲದಲ್ಲಿ ಭಾರತದ ಬೃಹತ್ ನಕ್ಷೆಯನ್ನೂ ರಚಿಸಲಾಯಿತು. ಕೊಪ್ಪಳದ ವಿವಿಧ ಶಾಲಾ, ಕಾಲೇಜುಗಳ ಸುಮಾರು 5000 ಕ್ಕೂ ಹೆಚ್ಚು ವಿದ್ಯಾಥರ್ಿಗಳು ಶಿಸ್ತು ಬದ್ಧವಾಗಿ ಭಾರತದ ನಕ್ಷೆಯ ರೇಖೆಯ ಮೇಲೆ ಜೊತೆಜೊತೆಯಾಗಿ ನಿಂತು ಮಾನವ ಸರಪಳಿಯನ್ನು ನಿಮರ್ಿಸಿದರು. ಅಲ್ಲದೆ ಇದೇ ಮೈದಾನದಲ್ಲಿ ಕನ್ನಡ ಭಾಷೆಯಲ್ಲಿ 'ನಮ್ಮ ಮತ, ನಮ್ಮ ಹಕು'್ಕ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಮೈ ವೋಟ್, 'ಮೈ ರೈಟ್ಸ್' ಎನ್ನುವ ಘೋಷ ವಾಕ್ಯವನ್ನು ಕೂಡ ರಚಿಸಿ, ಇದರಲ್ಲಿಯೂ ವಿದ್ಯಾಥರ್ಿಗಳು ಮಾನವ ಸರಪಳಿ ನಿಮರ್ಿಸಿದ್ದು, ಆಕರ್ಷಣೀಯವಾಗಿತ್ತು. ಡ್ರೋಣ್ ಕ್ಯಾಮೆರಾ ಮೂಲಕ ಈ ಎಲ್ಲ ಪ್ರಕ್ರಿಯೆಯನ್ನು ಸೆರೆಹಿಡಿಯಲಾಗಿದ್ದು, ವಿಡಿಯೋ ನಿಜಕ್ಕೂ ಅದ್ಭುತವಾಗಿ ಮೂಡಿ ಬಂದಿದೆ. ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕೊಪ್ಪಳ ನಗರದಲ್ಲಿ ಹಮ್ಮಿಕೊಂಡ ಈ ವಿಶೇಷ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್, ಜಿಲ್ಲಾ ಪಂಚಾಯತಿ ಉಪಕಾರ್ಯದಶರ್ಿ ಎನ್.ಕೆ. ತೊರವಿ, ಯೋಜನಾ ನಿದರ್ೇಶಕ ರವಿ ಬಸರಿಹಳ್ಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿದರ್ೇಶಕ ಆರ್.ಜಿ. ನಾಡಗೀರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕ ಕೃಷ್ಣಮೂತರ್ಿ ದೇಸಾಯಿ ಸೇರಿದಂತೆ ಹಲವು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕೊಪ್ಪಳ ನಗರದ ವಿವಿಧ ಶಾಲಾ ಕಾಲೇಜುಗಳ ವಿದ್ಯಾಥರ್ಿಗಳು, ಪ್ರಾಚಾರ್ಯರು, ಶಿಕ್ಷಕರು ಆಸಕ್ತಿಯಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ವಿದ್ಯಾಥರ್ಿಗಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪಧರ್ೆ, ಚಿತ್ರಕಲಾ ಸ್ಪಧರ್ೆ ಹಾಗೂ ಪೋಸ್ಟರ್ ತಯಾರಿಕೆ ಸ್ಪಧರ್ೆಯಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ಹಾಗೂ ಬಹುಮಾನವನ್ನು ಹಾಗೂ ಅಂದತ್ವ ನಾಗರಿಕರಿಗೆ ವಿಶೇಷವಾದ ಚುನಾವಣಾ ಗುರುತಿನ ಪತ್ರವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.