ಆಡಳಿತವು ವ್ಯವಸ್ಥಿತವಾಗಿ ನಡೆಯುವಲ್ಲಿ ಪ್ರಮುಖ ಪಾತ್ರ : ಎಮ್.ಬಿ.ಬಳ್ಳಾರಿ
Important Role in Systematic Administration : M.B. Bellary
ಆಡಳಿತವು ವ್ಯವಸ್ಥಿತವಾಗಿ ನಡೆಯುವಲ್ಲಿ ಪ್ರಮುಖ ಪಾತ್ರ : ಎಮ್.ಬಿ.ಬಳ್ಳಾರಿ
ಬೀಳಗಿ 12: ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳು ಸುಸೂತ್ರವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಆಡಳಿತ ಸುಲಲಿತವಾಗಿ ಸಾಗುತ್ತದೆ. ಸರಕಾರಿ ನೌಕರರು ಕಾರ್ಯಾಂಗದ ಆಧಾರಸ್ತಂಭಗಳಾಗಿದ್ದು, ಆಡಳಿತವು ವ್ಯವಸ್ಥಿತವಾಗಿ ನಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಸರಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಎಮ್.ಬಿ.ಬಳ್ಳಾರಿ ಹೇಳಿದರು. ತಾಲೂಕು ನೌಕರರ ಸಂಘವು ಪಟ್ಟಣದ ರುದ್ರಗೌಡ ಪಾಟೀಲ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಸಕಾಂಗವು ಜಾರಿಗೆ ತರುವ ಯೋಜನೆಗಳನ್ನು ಸಮರ್ಕವಾಗಿ ಅನುಷ್ಠಾನಗೊಳಿಸುವಲ್ಲಿ ಹಾಗೂ ಅವುಗಳನ್ನು ಜನರಿಗೆ ತಲುಪಿಸುವಲ್ಲಿ ಸರಕಾರಿ ನೌಕರರು ಮಹತ್ವದ ಪಾತ್ರ ವಹಿಸುತ್ತಾರೆ. ನೌಕರರು ಇಂದು ಹಲವು ಒತ್ತಡಗಳ ನಡುವೆ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯ ಸರಕಾರಿ ನೌಕರರ ಸಂಘವು ಅವರಿಗೆ ಬೆನ್ನೆಲುಬಾಗಿ ನಿಂತಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಸಾನಿಧ್ಯ ವಹಿಸಿದ ಗುರುಪಾದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳು ತಾಲೂಕಿನ ಸರಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಪ್ರೀತಿಗೆ ಪಾತ್ರರಾಗಿ ಎಂದು ಶುಭ ಕೋರಿದರು. ಉಪನ್ಯಾಸಕ ಯಶವಂತ ಕೊಕ್ಕನವರ ಮಾತನಾಡಿ, ನೌಕರರು ಸರಕಾರದ ಆಡಳಿತದ ಪ್ರಮುಖ ಭಾಗವಾಗಿದ್ದು, ಎಲ್ಲ ನೌಕರರು ಮುತುವರ್ಜಿಯಿಂದ ಕಾರ್ಯ ನಿರ್ವಹಿಸುತ್ತಿರುವುದರಿಂದ ಆಡಳಿತ ಸುಲಲಿತವಾಗಿ ನಡೆಯುತ್ತಿದೆ. ಸರಕಾರಿ ನೌಕರರು ಮಾಡುತ್ತಿರುವ ಕಾರ್ಯ ಶ್ಲಾಘನೀಯ’ ಎಂದು ಹರ್ಷ ವ್ಯಕ್ತಪಡಿಸಿದರು. ರಾಜ್ಯ ಸರಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ವೈ.ಅಂಬಿಗೇರ ಮಾತನಾಡಿ, ಎರಡನೆಯ ಬಾರಿಗೆ ನನ್ನನ್ನು ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ ತಮ್ಮೆಲ್ಲರ ವಿಶ್ವಾಸಕ್ಕೆ ಚ್ಯುತಿ ಬರದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತೇನೆ. ಎಲ್ಲ ನೌಕರರ ವರ್ಗದ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸುವಲ್ಲಿ ಶ್ರಮಿಸುವೆ ಎಂದು ತಿಳಿಸಿದರು. ನೌಕರರ ಸಂಘದ ನೂತನ ಪದಾಧಿಕಾರಿಗಳಿಗೆ ಅಭಿನಂದಿಸಿ, ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ನೋಂದಣಾಧಿಕಾರಿ ಎಸ್ ಬಿ ಮುಂಡರಗಿ, ಸಿದ್ದು ನಕ್ಕರಗುಂದಿಪ್ರಾಚಾರ್ಯ ಸುನಿಲ ನಾರಾಯಣಿ, ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾ ಕಾರ್ಯದರ್ಶಿ ವಿಠ್ಠಲ ವಾಲಿಕಾರ, ಜಿಲ್ಲಾ ಖಜಂಚಿ ಗೋಪಾಲ ನೀಲನಾಯಕ, ರಾಜ್ಯ ಪರಿಷತ್ ಸದಸ್ಯ ಅಪ್ಪಾಸಾಹೇಬ ಮೋದಿ, ತಾಲ್ಲೂಕಾ ನೌಕರ ಸಂಘದ ಖಜಾಂಚಿ ದಾನಪ್ಪ ತಳವಾರ, ಕಾರ್ಯದರ್ಶಿ ಮಹೇಶ ಜಗಲಿ, ಎಚ್.ಕೆ.ಲಿಂಗಣ್ಣವರ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 