ರಾಜ್ಯದ 154 ಬರಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು, ಮೇವಿನ ಕೊರತೆ ಆಗದಂತೆ ಅಗತ್ಯ ಕ್ರಮ: ಸಿಎಂ ಕುಮಾರಸ್ವಾಮಿ
ಹಾವೇರಿ05: ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವ ರಾಜ್ಯದ 154 ತಾಲೂಕುಗಳಲ್ಲಿ 8.5 ಕೋಟಿ ಉದ್ಯೋಗ ದಿನಗಳನ್ನು ಸೃಷ್ಟಿಮಾಡಲಾಗಿದೆ. ಬೆಳೆ ಪರಿಹಾರ ಹಾಗೂ ಬರ ಪರಿಹಾರ ಕಾರ್ಯಕ್ಕಾಗಿ 30 ಜಿಲ್ಲೆಯಲ್ಲಿ ಯುದ್ದೋಪಾದಿಯಲ್ಲಿ ಕಾರ್ಯಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ಶುಕ್ರವಾರ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅಸುಂಡಿ ಗ್ರಾಮಕ್ಕೆ ಭೇಟಿ ನೀಡಿ ಬರ ಪರಿಸ್ಥಿತಿ ಪರಿಶೀಲನೆ ಸಂದರ್ಭದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಪೀಡಿತ ತಾಲೂಕುಗಳಲ್ಲಿ ಪ್ರಥಮಾದ್ಯತೆಯಾಗಿ ಕುಡಿಯುವ ನೀರು ಹಾಗೂ ಮೇವಿನ ಕೊರತೆಯಾಗದಂತೆ ಅಗತ್ಯಕ್ರಮಕೈಗೊಳ್ಳಲಾಗಿದೆ.
ಈ ಕಾರ್ಯಕ್ಕೆ ಯಾವುದೇ ಹಣದ ಕೊರತೆ ಇರುವುದಿಲ್ಲ. ನಗರ ಪ್ರದೇಶದಲ್ಲಿಯೂ ಸಹ ನೀರಿನ ಸಮಸ್ಯೆ ಇದೆ ಎಂದು ತಿಳಿದು ಬಂದಿದ್ದು ನಗರ ಪ್ರದೇಶಕ್ಕೂ ಸಹ ತಕ್ಷಣ ಹಣ ಬಿಡುಗಡೆಮಾಡಲಾಗುವುದು ಎಂದು ಹೇಳಿದರು.
2009 ರಿಂದ ಈವರೆಗೆ ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಎರಡು ಲಕ್ಷ ರೂ.ವರೆಗೆ ಮಾಡಿದ ಬೆಳೆಸಾಲ ಸಾಲ ಮನ್ನಾ ಮಾಡಲಾಗಿದೆ. 38 ಸಾವಿರ ಕೋಟಿ ರೂ.ಗಳನ್ನು ರಾಷ್ಟ್ರೀಕೃತ ಬ್ಯಾಂಕುಗಳಿಗೆ ಭರಿಸಬೇಕಾಗಿದೆ. ರೈತರಿಗೆ ನ್ಯಾಯಯುತವಾಗಿ ಬೆಳೆವಿಮೆ ದೊರಕಿಸಲು ವಿಡಿಯೋ ಸಂವಾದದ ಮೂಲಕ ಸೂಚನೆ ನೀಡಲಾಗಿದೆ ಹಾಗೂ ಸಕರ್ಾರ ರೈತರಪರವಾಗಿ ಕೆಲಸಮಾಡುತ್ತಿದೆ ಎಂದರು.
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಈರುಳ್ಳಿ ಹಾಗೂ ಹಿಂಗಾರು ಹಂಗಾಮಿನಲ್ಲಿ ಬಿಳಿಜೋಳ ಬೆಳೆ ನಾಶವಾಗಿದೆ. 59 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೇವಾಂಶದಲ್ಲಿ ಜೋಳ ಬೆಳೆಯಲಾಗುತ್ತಿತ್ತು.
ಆದರೆ ತೇವಾಂಶದ ಕೊರತೆಯಿಂದ ಬೆಳೆ ನಾಶವಾಗಿದೆ. ಒಂದು ಎಕರೆ ಬೆಳೆಗೆ ಗೊಬ್ಬರ, ಬೀಜ ಹಾಗೂ ಕೂಲಿಗಾಗಿ 8 ರಿಂದ 10 ಸಾವಿರ ಖಚರ್ಾಗಿತ್ತದೆ ಎಂದು ಹೇಳಲಾಗುತ್ತಿದೆ. ಸಕರ್ಾರದಿಂದ ಇನ್ಪುಟ್ ಸಬ್ಸಿಡಿಯಾಗಿ ಹೆಕ್ಟೇರ್ಗೆ ಆರು ಸಾವಿರದಿಂದ 6200ರೂ.ರವರೆಗೆ ನೀಡಲಾಗುದು ಎಂದು ಹೇಳಿದರು.
ಆಹಾರ ಮತ್ತು ನಾಗರೀಕ ಸರಬರಾಜು, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಹಾಗೂ ಹಜ್ ಇಲಾಖೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ಖಾನ್, ಶಾಸಕರಾದ ಬಿ.ಸಿ.ಪಾಟೀಲ, ಅನೇಕ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಕೃಷಿ, ತೋಟಗಾರಿಕೆ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 