ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಸೂಚನೆ ಬೆಳೆ ಕಟಾವು ಪ್ರಯೋಗ ನಿರ್ಲಕ್ಷಿಸುವಂತಿಲ್ಲ
ಬಳ್ಳಾರಿ 07: ಜಿಲ್ಲೆಯಲ್ಲಿ ಬೆಳೆ ಕಟಾವು ಪ್ರಯೋಗ ಆಧರಿಸಿ ಬೆಳೆ ವಿಮೆ ಕಂಪನಿಗಳು ವಿಮೆ ಮೊತ್ತ ನಿರ್ಧರಿಸುತ್ತವೆ. ಆದರೆ ಸರಿಯಾದ ಸಮಯಕ್ಕೆ ಬೆಳೆ ಕಟಾವು ಪ್ರಯೋಗ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡಬಾರದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು.
ಬೆಳೆ ಕಟಾವು ಪ್ರಯೋಗಗಳ ಪ್ರಗತಿ ಪರೀಶೀಲನೆ, ಜನನ-ಮರಣ ನಾಗರಿಕ ನೋಂದಣಿ ಪದ್ಧತಿ, ಬೆಳೆ ಕ್ಷೇತ್ರ ಮರು ಹೊಂದಾಣಿಕೆ ಹಾಗೂ ಇತರೆ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಏರಿ್ಡಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬೆಳೆ ವಿಮೆ ನಿಗದಿಗೆ ಸ್ಥಳೀಯವಾಗಿ ನಡೆಸಿದ ಬೆಳೆ ಕಟಾವು ಪ್ರಯೋಗವೇ ಆಧಾರ. ಇದರಲ್ಲಿ ಯಾವುದೇ ರೀತಿಯ ತಪ್ಪು ಉಂಟಾಗಬಾರದು. ತಂತ್ರಾಂಶದಲ್ಲಿ ಅಂಕಿ ಅಂಶಗಳು ತಪ್ಪಾಗದಂತೆ ಪ್ರಯೋಗದ ವಿವರಗಳನ್ನು ಭರ್ತಿ ಮಾಡಬೇಕು ಎಂದರು.ಬೆಳೆ ಕಟಾವು ಪ್ರಯೋಗ ಪಾರದರ್ಶಕವಾಗಿ ನಡೆಯಲು ಮೂಲ ಕಾರ್ಯಕರ್ತರು ವಿಮಾ ಕಂಪನಿಯ ಅಧಿಕಾರಿಗಳು ಸಹಯೋಗದಲ್ಲಿ ಬೆಳೆ ಕಟಾವು ಪ್ರಯೋಗದ ಸಂದರ್ಭದಲ್ಲಿ ಕಡ್ಡಾಯವಾಗಿ ನಿಯಮಾನುಸಾರ ಕೈಗೊಳ್ಳಬೇಕು ಎಂದು ತಿಳಿಸಿದರು.*ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯ ವಿಳಂಬ ಸಲ್ಲದು:*
ಜಿಲ್ಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು.ಜಿಲ್ಲೆಯಲ್ಲಿ ಜನನ ಮತ್ತು ಮರಣ ನೊಂದಣಿ ಪ್ರಕ್ರಿಯಲ್ಲಿ ಸರಿಯಾಗಿ ಮಾಹಿತಿದಾರರ ಹೆಸರು ಮತ್ತು ಇತರೆ ಮಾಹಿತಿ ಸಂಗ್ರಹಿಸಿ ನಮೂದಿಸಲು ಕ್ರಮವಹಿಸಬೇಕು ಎಂದರು.ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎನ್.ಕೆ.ಪತ್ರಿಬಸಪ್ಪ ಅವರು ಮಾತನಾಡಿ, 11ನೇ ಕೃಷಿ ಗಣತಿ ಕಾರ್ಯದ 2ನೇ ಹಂತದ ಕಾರ್ಯದಲ್ಲಿ ಜಿಲ್ಲೆಯು ನಿಗದಿತ ಗುರಿ ತಲುಪಿದೆ ಎಂದು ಸಭೆಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ವಿಭಾಗದ ಮಾಹಿತಿಯನ್ನು ಸಭೆಗೆ ನೀಡಿದರು.ಈ ಸಂದರ್ಭದಲ್ಲಿ ಎಲ್ಲಾ ತಾಲ್ಲೂಕಿನ ತಹಶೀಲ್ದಾರರು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.