ಸಂಭ್ರಮದಿಂದ, ಅಚ್ಚುಕಟ್ಟಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಹಿರೇಮಠ ಸೂಚನೆ

ಗದಗ 29: ಸ್ವಾಮಿ ವಿವೇಕಾನಂದರು ಚಿಕ್ಯಾಗೋದಲ್ಲಿ ಉಪನ್ಯಾಸ ನೀಡಿದ ಐತಿಹಾಸಿಕ ಘಟನೆಯ 125ನೇ ವರ್ಷಾ ಚರಣೆಯ ಸಮಾರೋಪ ಸಮಾರಂಭದ  ಕಾರ್ಯಕ್ರಮವನ್ನು ಗದಗ ಜಿಲ್ಲೆಯಲ್ಲಿ ಸಂಭ್ರಮದಿಂದ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸಲು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದರು.

ಗದಗ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿಂದು ಜರುಗಿದ ಸ್ವಾಮಿ ವಿವೇಕಾನಂದರ ಚಿಕ್ಯಾಗೋ ಉಪನ್ಯಾಸದ 125ನೇ ವಷರ್ಾಚರಣೆ ಸಮಾರೋಪ ಸಮಾರಂಭದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಈ ಕಾರ್ಯಕ್ರಮದ ಕುರಿತು ವಿವಿಧ ಕಾರ್ಯಕ್ರಮಗಳನ್ನು ನಡೆಸುವ ಹೊಣೆ ಹೊತ್ತ ಇಲಾಖೆಗಳು ಅತ್ಯಂತ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಆಚರಣೆ ಉದ್ದೇಶ ಇಡೇರುವಂತೆ ಪ್ರಯತ್ನಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಬರುವ ಸೆ. 11ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಸೂಚಿಸಿದರು. ಕಾರ್ಯಕ್ರಮದ ಪ್ರಯುಕ್ತ ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆಗಳನ್ನು ಸಾಕಷ್ಟು ಮುಂಚಿತವಾಗಿ ಮುದ್ರಿಸಿ ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಲು ಸೂಚಿಸಿದ ಅವರು ಕಾರ್ಯಕ್ರಮವದ ವೇದಿಕೆ ನಿಮರ್ಾಣ, ನುರಿತ ಉಪನ್ಯಾಸಕರನ್ನು ಹಾಗೂ ಸ್ವಾಮಿ ವಿವೇಕಾನಂದರ ಕುರಿತು ಉತ್ತಮ ಭಜನಾ ತಂಡ ಆಹ್ವಾನಿಸಲು ಸೂಚಿಸಿದರು. ಸ್ವಾಮಿ ವಿವೇಕಾನಂದರ ಆದರ್ಶಗಳು ಇಂದಿನ ಯುವ ಜನತೆಗೆ ಮನದಟ್ಟಾಗುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಈ ಕಾರ್ಯಕ್ರಮದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕಾಲೇಜು ವಿದ್ಯಾಥರ್ಿಗಳು, ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ನೀಡಿದರು.

ಮಾಜಿ ಶಾಸಕ ಹಾಗೂ ಚಿಕ್ಯಾಗೋ ಉಪನ್ಯಾಸದ 125ನೇ ವರ್ಷಾಚರಣೆ ಸಮಿತಿ ಸದಸ್ಯ ಡಿ.ಆರ್.ಪಾಟೀಲ ಅವರು ಮಾತನಾಡಿ ಸೆಪ್ಟೆಂಬರ 11 ರಂದು ಜರುಗುವ ಈ ಕಾರ್ಯಕ್ರಮದ ಪ್ರಯುಕ್ತ  ಗ್ರಾಮೀಣ ಪ್ರದೇಶದ ಯುವಜನರಿಗೆ, ವಿಧ್ಯಾಥರ್ಿಗಳಿಗೆ ಸ್ವಾಮಿ ವಿವೆಕಾನಂದರ ಜೀವನ ಚರಿತ್ರೆ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಈಗಾಗಲೇ ಉಪನ್ಯಾಸ ಕಾರ್ಯಕ್ರಮಗಳನ್ನು ಜರುಗಿಸಲಾಗಿದೆ. ಶಾಲಾ ಕಾಲೇಜು ವಿಧ್ಯಾಥರ್ಿಗಳಿಗೆ ಸ್ವಾಮಿ ವಿವೇಕಾನಂದರ ಕುರಿತು ಏರ್ಪಡಿಸಲಾದ  ಭಾಷಣ ಹಾಗೂ ಪ್ರಬಂಧ ಸ್ಪಧರ್ೆಗಳ ವಿಜೇತರಿಗೆ ಬಹುಮಾನ ವಿತರಿಸಲು ಸೂಚಿಸಿದ ಅವರು ಒಟ್ಟಾರೆಯಾಗಿ ಸ್ವಾಮಿ ವಿವೇಕಾನಂದರ ಚಿಕ್ಯಾಗೋ ಉಪನ್ಯಾಸದ 125ನೇ ವಷರ್ಾಚರಣೆಯ ಸಮಾರೋಪ ಸಮಾರಂಭವನ್ನು ಸಂಭ್ರಮದಿಂದ ಆಚರಿಸಿ  ಯಶಸ್ವಿಗೊಸಲು ಡಿ.ಆರ್.ಪಾಟೀಲ ಸಲಹೇ ನೀಡಿದರು.

ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ  ಪ್ರಾಣೇಶ ರಾವ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇ ಶಕ ಜಿ.ಬಿ.ವಿಶ್ವನಾಥ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಜೆ.ಕೆ.ಜಮಾದಾರ ಸೇರಿದಂತೆ ಸಂಘ ಸಂಸ್ಥೆಗಳ ಗಣ್ಯರು ಸಭೆಯಲ್ಲಿ ಭಾಗವಹಿಸಿದ್ದರು.